ದಿನದ ಸುದ್ದಿ

ಕನಿಷ್ಠ ಬೆಂಬಲ ಬೆಲೆಯಡಿ ಆನ್‌ಲೈನ್ ಮೂಲಕ ರಾಗಿ ಖರೀದಿ

Published

on

ಸುದ್ದಿದಿನ, ಚಿತ್ರದುರ್ಗ : ಕೇಂದ್ರ ಸರ್ಕಾರದ ನಿರ್ದೇಶನದಂತೆ ಕನಿಷ್ಠ ಬೆಂಬಲ ಬೆಲೆಯಡಿ ಇದೇ 25 ರಿಂದ ಆನ್‌ಲೈನ್ ಮೂಲಕ ರೈತರಿಂದ ರಾಗಿ ಖರೀದಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕವೀತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.

2020-21ನೇ ಸಾಲಿನಲ್ಲಿ 4 ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ರೈತರಿಂದ ಪ್ರತಿ ಕ್ವಿಂಟಾಲ್ ರಾಗಿಗೆ 3ಸಾವಿರದ 377ರೂಪಾಯಿ ದರದಲ್ಲಿ ರೈತರಿಂದ 76ಸಾವಿರದ 646 ಕ್ವಿಂಟಾಲ್ ರಾಗಿ ಖರೀದಿಸಲಾಗಿತ್ತು. ಇಳುವರಿ ಹಾಗೂ ಉತ್ತಮ ಬೆಳೆ ಹಿನ್ನೆಲೆಯಲ್ಲಿ ಖರೀದಿ ಮುಂದುವರೆಸುವಂತೆ ರೈತರು ಮನವಿ ಮಾಡಿದ್ದಾರೆ.

ಕಾರ್ಯಪಡೆ ಸಮಿತಿಯಲ್ಲಿ ಈ ವಿಚಾರ ಚರ್ಚೆ ಮಾಡಿ, ರಾಗಿ ಖರೀದಿಗೆ ಅನುಮತಿ ನೀಡಲಾಗಿದೆ. ರಾಗಿ ಬೆಳೆಗಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version