ದಿನದ ಸುದ್ದಿ
ಶೂಟಿಂಗ್ ವೇಳೆ ಬಾಲಿವುಡ್ ನಟ ರಾಹುಲ್ ರಾಯ್..!
ಸುದ್ದಿದಿನ ಡೆಸ್ಕ್ : ಬಾಲಿವುಡ್ ನಟ ರಾಹುಲ್ ರಾಯ್ ಕಾರ್ಗಿಲ್ ನಲ್ಲಿ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿದೆ.
ಕೂಡಲೇ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
ಕಾರ್ಗಿಲ್ ನಲ್ಲಿ ತಮ್ಮ ಮುಂಬರುವ ‘ಎಲ್ಎಸಿ – ಲಿವ್ ದಿ ಬ್ಯಾಟಲ್’ ಸಿನಿಮಾದ ಶೂಟಿಂಗ್ ನಡೆಸುತ್ತಿದ್ದ ವೇಳೆ ಅವರಿಗೆ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಬ್ರೇನ್ ಸ್ಟ್ರೋಕ್ ಉಂಟಾಗಿದೆ. ಅವರನ್ನು ಶ್ರೀನಗರ ಮೂಲಕ ಮುಂಬೈ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243