Connect with us

ದಿನದ ಸುದ್ದಿ

ಮುಂಗಾರಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ : ಹವಾಮಾನ ಇಲಾಖೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಈ ಬಾರಿಯ ಮುಂಗಾರಿನಲ್ಲಿ ದೇಶದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಎಂದು ಹವಾಮಾನ ಇಲಾಖೆ ಹೇಳಿದೆ. ಈ ಮಾನ್ಸೂನ್ ಋತುವಿನ ಸರಾಸರಿ ಮಳೆಯ ಅವಧಿ ಸರಾಸರಿಯ ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ ಎಂದು ಅಂದಾಜಿಸಲಾಗಿದೆ.

ಎಂದು ಭಾರತೀಯ ಹವಾಮಾನ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶೇಕಡ 100ರಷ್ಟು ಧೀರ್ಘ ಅವಧಿಯ ಸರಾಸರಿಯೊಂದಿಗೆ ದೇಶವು ಸಾಮಾನ್ಯ ಮಳೆಯನ್ನು ಪಡೆಯಲಿದೆ ಎಂದು ಕಳೆದ ಏಪ್ರಿಲ್‌ನಲ್ಲಿ ಹವಾಮಾನ ಇಲಾಖೆ ಹೇಳಿತ್ತು. ದೇಶದ ಬಹುತೇಕ ಕಡೆಗಳಲ್ಲಿ ಉತ್ತಮವಾದ ಮಳೆಯ ಚಟುವಟಿಕೆ ಕಾಣಿಸುತ್ತಿದೆ ಎಂದು ಪ್ರಸ್ತುತ ಮಾನ್ಸೂನ್ ಋತುವಿನ ಮಳೆಯ ಮುನ್ಸೂಚನೆಯನ್ನು ಅಧಿಕಾರಿಗಳು ನೀಡಿದ್ದಾರೆ.

ಈಶಾನ್ಯ ಪ್ರದೇಶವು ಸಾಮಾನ್ಯಕ್ಕಿಂತ ಕಡಿಮೆ ಮಳೆಯನ್ನು ಪಡೆಯಬಹುದು ಎಂದು ಹೇಳಿದ್ದಾರೆ. ಕೇರಳದಲ್ಲಿ ಈಗಾಗಲೇ ಮುಂಗಾರು ಅಪ್ಪಳಿಸಿದೆ. ಇದು ಸಾಮಾನ್ಯ ಆರಂಭದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಈ ನಡುವೆ ಮುಂಗಾರು ಅಬ್ಬರ ಕರ್ನಾಟಕದಲ್ಲಿಯೂ ಹೆಚ್ಚಾಗಲಿದೆ. ಅವಧಿಗೆ ಮುನ್ನವೇ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ, ದಕ್ಷಿಣ ಒಳನಾಡು ಪ್ರದೇಶಗಳಿಗೆ ಮುಂಗಾರು ಪ್ರವೇಶಿಸಿದೆ. ನೈರುತ್ಯ ಮುಂಗಾರು ಕರ್ನಾಟಕ ರಾಜ್ಯದ ಕೆಲವು ಭಾಗಗಳಿಗೆ ಪ್ರವೇಶಿಸಿದೆ. ಮುಂದಿನ ಎರಡು, ಮೂರು ದಿನಗಳ ಅವಧಿಯಲ್ಲಿ ಮತ್ತಷ್ಟು ಪ್ರದೇಶಗಳಿಗೆ ವಿಸ್ತರಣೆಯಾಗಲಿದೆ. ಕರಾವಳಿ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಳೆದ ೨೪ ಗಂಟೆಗಳಿಂದ ಭಾರಿ ಮಳೆಯಾಗಿದೆ.

ಈ ನಡುವೆ ಕಲಬುರಗಿಯಲ್ಲಿ ದಿನದ ಗರಿಷ್ಠ ತಾಪಮಾನ29.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುನ್ಸೂಚನೆಯಂತೆ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ, ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕ ರಾಜಧಾನಿ ಬೆಂಗಳೂರು ಸುತ್ತಮುತ್ತ ಸಾಮಾನ್ಯ ಮೋಡಕವಿದ ವಾತಾವರಣ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending