ದಿನದ ಸುದ್ದಿ

ರಾಜ್ಯಸಭಾ ಚುನಾವಣೆ | ಕಣದಲ್ಲಿ ಆರು ಅಭ್ಯರ್ಥಿಗಳು ; ಇದೇ 10ರಂದು ಮತದಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ10 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭಾ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.

ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಮಧ್ಯಾಹ್ನ 3 ಗಂಟೆಯವರೆಗೆ ಕಾಲಾವಕಾಶ ನಿಗದಿಯಾಗಿತ್ತು. ಯಾವುದೇ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆಯದೇ ಇರುವ ಹಿನ್ನೆಲೆಯಲ್ಲಿ ಚುನಾವಣೆ ಅನಿವಾರ್ಯವಾಗಿದೆ.

ಬಿಜೆಪಿಯಿಂದ ಮೂವರು, ಕಾಂಗ್ರೆಸ್‌ನಿಂದ ಇಬ್ಬರು ಮತ್ತು ಜೆಡಿಎಸ್‌ನಿಂದ ಓರ್ವ ಅಭ್ಯರ್ಥಿ ಕಣದಲ್ಲಿದ್ದಾರೆ. ಇದೇ 10ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ, ನಂತರ ಸಂಜೆ 5 ಗಂಟೆಗೆ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.

ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ 122, ಕಾಂಗ್ರೆಸ್ 70, ಜೆಡಿಎಸ್ 32 ಹಾಗೂ ಮೂವರು ಪಕ್ಷೇತರರು ಮತದಾನದ ಅರ್ಹತೆ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷ ಈಗಾಗಲೇ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿದೆ. ಅಧಿಕೃತ ಅಭ್ಯರ್ಥಿಗಳು ಪಕ್ಷದ ಆದೇಶವನ್ನು ಪಾಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version