/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಚಾಕೊಲೇಟ್ ಆಸೆ ತೋರಿಸಿ, 4 ವರ್ಷದ ಬಾಲಕಿ ಮೇಲೆ ಆತ್ಯಾಚಾರ

Published

on

  • ವರದಿ : ನಿಂಗಣ್ಣ

ಸುದ್ದಿದಿನ,ಯಾದಗಿರಿ: ಚಾಕೊಲೇಟ್ ಕೊಡಿಸುವುದಾಗಿ ಆಸೆ ತೋರಿಸಿ ಕಾಮುಕನೋರ್ವ 4 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಜಿಲ್ಲೆಯ ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯಾದಗಿರಿಯಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರನಿಂಗಪ್ಪ (23) ಅತ್ಯಾಚಾರವೆಸಗಿದ ಆರೋಪಿ. ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ತನ್ನ ಮನೆಯೊಳಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದು ಬಂದಿದೆ.

ಕಾಮುಕನ ದುಷ್ಕೃತ್ಯದಿಂದ ಬಾಲಕಿ ಕಿರುಚಿಕೊಂಡಾಗ ಆಕೆಯ ಪೋಷಕರು ಅಲ್ಲಿಗೆ ತೆರಳುವ ಮುನ್ನವೇ ಆತ ಅಲ್ಲಿಂದ ಪರಾರಿಯಾಗಿದ್ದಾನೆ.ತೀವ್ರ ಅಸ್ವಸ್ಥಗೊಂಡ ಸಂತ್ರಸ್ತ ಬಾಲಕಿಯನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸುರಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version