ದಿನದ ಸುದ್ದಿ
ರೆಡ್ ಬಸ್ ಭಾರತದಾದ್ಯಂತ ಉತ್ತಮ ಸೇವಾ ಮನೋಭಾವದ ಗುರಿಯೊಂದಿಗೆ ಈಗ ’ರೆಡ್ ರೇಲ್’ ಆರಂಭ
- ಭಾರತದಲ್ಲಿ ಹೆಚ್ಚುತ್ತಿರುವ ಇಂಟರ್ ನೆಟ್ ಬಳಕೆದಾರರಿಗೆ ಟ್ರೈನ್ ಪ್ರಯಾಣ ಬುಕ್ ಮಾಡಲು ಸರಳವಾದ, ಶೀಘ್ರವಾದ ಮತ್ತು ಹೆಚ್ಚು ಪರಿಣಾಮಕಾರಿಯಾದ ವಿಧಾನವನ್ನು ನೀಡುತ್ತಿದೆ.
- ಬಳಕೆದಾರರಿಗೆ ತಮ್ಮ ಮಾತೃ ಬಾಷೆಯಲ್ಲಿ ಪ್ರಯಾಣ ಬುಕ್ ಮಾಡಲು ಅನುಕೂಲವಾಗುವಂತೆ ಪ್ರಮುಖ ಭಾರತೀಯ ಭಾಷೆಗಳಲ್ಲಿ ಶೀಘ್ರವೇ ಆ್ಯಪ್ ಬಿಡುಗಡೆ ಮಾಡಲು ಯೋಜಿಸಿದೆ.
ಸುದ್ದಿದಿನ ಡೆಸ್ಕ್ : ಮೇಕ್ ಮೈ ಟ್ರ್ಪ್ ಗ್ರೂಪ್ ಕಂಪನಿಯ ಮತ್ತು ವಿಶ್ವದ ಅತಿದೊಡ್ಡ ಅಂತರ್ ನಗರ ಬಸ್ ಟಿಕೆಟಿಂಗ್ ಅಪ್ಲಿಕೇಶನ್ ಆಗಿರುವ ರೆಡ್ ಬಸ್, ಇಂದು ದೇಶಾದ್ಯಂತ ಲಕ್ಷಾಂತರ ಟ್ರೈನ್ ಪ್ರಯಾಣಿಕರ ಆನ್ ಲೈನ್ ಪ್ರಯಾಣ ಬುಕ್ಕಿಂಗ್ ಅನುಭವವನ್ನು ಸಮೃದ್ಧಗೊಳಿಸುವ ಉದ್ದೇಶದೊಂದಿಗೆ ಸ್ವತಂತ್ರ ಲೈಟ್- ಆ್ಯಪ್ ’ರೆಡ್ ರೈಲ್’ ಆರಂಭಿಸುವ ಬಗ್ಗೆ ಘೋಷಿಸಿದೆ.
ರೆಡ್ ರೈಲ್ ಕಳೆದ ವರ್ಷಾಂತ್ಯದಲ್ಲಿ ಇನ್- ಆ್ಯಪ್ ವೈಶಿಷ್ಟ್ಯದೊಂದಿಗೆ ಆರಂಭವಾಗಿದ್ದು, ಈ ಹೊಸ ಸ್ವತಂತ್ರ ಅವತಾರದಲ್ಲಿ, ಇದು ಪ್ರವೇಶ ಹಂತದ ಆ್ಯಂಡ್ರಾಯ್ಡ್ ಓಎಸ್ ಸ್ಮಾರ್ಟ್ ಫೋನ್ ಸೇರಿದಂತೆ ಎಲ್ಲಾ ಮೊಬೈಲ್ ಸಾಧನಗಳಲ್ಲಿ ಲಭ್ಯವಾಗಲಿದೆ.
ಆ್ಯಪ್ ಅನ್ನು ದೇಶಾದ್ಯಂತ ಇರುವ ಬಳಕೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ. ಉದಾಹರಣೆಗೆ, ಇದು ಸುಗಮವಾಗಿ ಕಾರ್ಯ ನಿರ್ವಹಿಸುತ್ತದೆ, ಮತ್ತು ಐಆರ್ಸಿಟಿಸಿ ಟ್ರೈನ್ ಟಿಕೆಟ್ ಗಳನ್ನು ಕಡಿಮೆ ಇಂಟರ್ನೆಟ್ ಬ್ಯಾಂಡ್ ವಿಡ್ತ್ ಇರುವ ಸ್ಥಳಗಳಿಂದ, ಕಡಿಮೆ ಮೆಮೊರಿ ಕಾನ್ಫಿಗರೇಶನ್ ಹೊಂದಿರುವ ಮತ್ತು ಹಳೆಯ ಆ್ಯಂಡ್ರಾಯ್ಡ್ ಆವೃತ್ತಿಗಳಿಂದಲೂ ಬುಕ್ ಮಾಡಲು ಅವಕಾಶ ನೀಡುತ್ತದೆ.
ಪ್ರಸ್ತುತ ಇಂಗ್ಲೀಷ್ ನಲ್ಲಿ ಆರಂಭವಾಗಿರುವ, ರೆಡ್ ರೈಲ್ ಶೀಘ್ರವೇ ಪ್ರಮುಖ ಭಾರತೀಯ ಭಾಷೆಗಳಲ್ಲಿ ಲಭ್ಯವಾಗಲಿದ್ದು, ಇದರಿಂದಾಗಿ ಬಳಕೆದಾರರು ತಮ್ಮ ಮಾತೃಭಾಷೆಯಲ್ಲಿ ಪ್ರಯಾಣ ಬುಕ್ ಮಾಡಬಹುದಾಗಿದೆ. ಇದರೊಂದಿಗೆ, ಪ್ರಯಾಣಿಕರ ಅನುಕೂಲಕ್ಕೆ ಅನುಗುಣವಾಗಿ ಆ್ಯಪ್ ಯುಪಿಐ ಪಾವತಿಗಳು ಮತ್ತು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮತ್ತು ನೆಟ್ ಬ್ಯಾಂಕಿಂಗ್ ನಂತಹ ವಿವಿಧ ಗೇಟ್ ವೇಗಳಲ್ಲೂ ಲಭ್ಯವಾಗಲಿದೆ.
ಆನ್ ಲೈನ್ ಟ್ರೈನ್ ಬುಕ್ಕಿಂಗ್ ವಲಯದೊಳಗಿನ ಇದರ ಸ್ಥಾನ ಮತ್ತು ಅಸ್ತಿತ್ವವನ್ನು ಮತ್ತಷ್ಟು ದೃಢಗೊಳಿಸುವ ಬಗ್ಗೆ ತಮ್ಮ ಆಲೋಚನೆಗಳನ್ನು ವಿನಿಮಯ ಮಾಡಿದ, ಮೇಕ್ ಮೈ ಟ್ರಿಪ್ ನ ಸಹ-ಸಂಸ್ಥಾಪಕ ಮತ್ತು ಸಮೂಹ ಸಿಇಓ ರಾಜೇಶ್ ಮಗಾವ್ ಹೀಗೆ ಹೇಳಿದ್ದಾರೆ, “ಮೇಕ್ ಮೈ ಟ್ರಿಪ್ ಪ್ರಯಾಣದ ಬುಕ್ಕಿಂಗ್ ಅನ್ನು ಆನ್ ಲೈನ್ ಗೊಳಿಸುವ ಮೂಲಕ ಹೆಚ್ಚು ವಿಶ್ವಾಸಾರ್ಹ ಮತ್ತು ಸುಗಮ ಅನುಭವ ನೀಡುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಮುಂಚೂಣಿಯಲ್ಲಿದೆ.
ಹಗುರ ಮತ್ತು ವೇಗವಾದ ಅಪ್ಲಿಕೇಶನ್ ಆಗಿರುವ ಸ್ವತಂತ್ರ ರೆಡ್ ರೈಲ್ ಆರಂಭಿಸುವ ಮೂಲಕ, ಪ್ರತಿದಿನ ಲಕ್ಷಾಂತರ ಗ್ರಾಹಕರಿಗೆ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಅನುಭವವನ್ನು ಹೊಸದಾಗಿಸುವ ದಿಕ್ಕಿನಲ್ಲಿ ಮತ್ತೊಂದು ಅಭಿಯಾನವಾಗಿದೆ,” ಎಂದಿದ್ದಾರೆ.
“ಅವಕಾಶವಿರುವ ಸಮಯದಲ್ಲಿ ಸ್ವತಂತ್ರ ರೆಡ್ ರೈಲ್ ಆ್ಯಪ್ ಬಿಡುಗಡೆ ಬಸ್ ಮತ್ತು ಟ್ರೈನ್ ವಲಯಗಳಲ್ಲಿ ಕಳೆದ 2 ವರ್ಷಗಳಿಂದ ಡಿಜಿಟಲ್ ಅಳವಡಿಕೆಯನ್ನು ಸ್ಥಿರವಾಗಿ ಹೆಚ್ಚಿಸಿದೆ. ಆನ್ ಲೈನ್ ಟ್ರೈನ್ ಟಿಕೆಟ್ ಬುಕ್ಕಿಂಗ್ ಮಾರುಕಟ್ಟೆ, ದೇಶಾದ್ಯಂತ ಪ್ರತಿದಿನ ಲಕ್ಷಾಂತರ ವಹಿವಾಟಿನೊಂದಿಗೆ, ಬೃಹತ್ ಅವಕಾಶವನ್ನು ನೀಡುತ್ತಿದೆ. ಭಾರತದಾದ್ಯಂತ ಆನ್ ಲೈನ್ ಟ್ರೈನ್ ಟಿಕೆಟ್ ಬೆಳವಣಿಗೆಗೆ ಹೆಚ್ಚಿನ ಬೇಡಿಕೆಯಿರುವುದರಿದ, ಕಡಿಮೆ ಇಂಟರ್ ನೆಟ್ ಬ್ಯಾಂಡ್ ವಿಡ್ತ್ ಅಥವಾ ಫೋನ್ ಸಾಮರ್ಥ್ಯ ಕಡಿಮೆ ಇರುವ ಸ್ಥಳಗಳಲ್ಲಿ ವಿಶೇಷವಾಗಿ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಅನುಭವ ಸುಧಾರಿಸುವುದು ತೀವ್ರ ಅಗತ್ಯವಾಗಿದೆ.
ಈ ವಿಷಯದಲ್ಲಿ ರೆಡ್ ರೈಲ್ ಬೃಹತ್ ವ್ಯತ್ಯಾಸವನ್ನೇ ತಂದಿದ್ದು, ಇತರ ಬಳಕೆದಾರ ಸ್ನೇಹಿ ವೈಶಿಷ್ಟ್ಯಗಳ ಹೊರತಾಗಿ ಲೈಟ್ ಆ್ಯಪ್ ಆಗಿದೆ ಮತ್ತು ಇಂತಹ ಸಮಸ್ಯೆಗಳನ್ನು ವ್ಯಾಪಕವಾಗಿ ಪರಿಹರಿಸುವ ಉದ್ದೇಶವನ್ನು ಹೊಂದಿದೆ,” ಎಂದು ರೆಡ್ ಬಸ್ ಸಿಇಓ ಪ್ರಕಾಶ್ ಸಂಗಂ ಹೇಳಿದ್ದಾರೆ. “ಬಸ್ ಮತ್ತು ಟ್ರೈನ್ ಪ್ರಯಾಣಿಕರಲ್ಲಿ 65% ನಷ್ಟು ಹೆಚ್ಚಳವಾಗಿರುವುದು ನಾವು ರೆಡ್ ರೈಲ್ ಅನ್ನು ಮುಂಚೂಣಿಗೆ ತರಲು ರೆಡ್ ಬಸ್ ನ ಹೆಚ್ಚಿನ ಬಳಕೆದಾರರ ಅಡಿಪಾಯವನ್ನು ಪೋಷಿಸಲು ಪ್ರಯೋಜನಕಾರಿಯಾಗಿದೆ. ನಮ್ಮ ಬಸ್ ಟಿಕೆಟಿಂಗ್ ವೇದಿಕೆ ಈಗಾಗಲೇ ಅಂತರ್ ನಗರ ಬಸ್ ವಲಯದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿದ್ದು, ಈಗ ಆನ್ ಲೈನ್ ಟ್ರೈನ್ ವರ್ಗದಲ್ಲೂ ಇದನ್ನು ಮುಂಚೂಣಿಗೆ ತರಲು ಕೆಲಸ ಮಾಡುತ್ತಿದ್ದೇವೆ.”
ರೆಡ್ ರೈಲ್ ಆ್ಯಪ್ ನಲ್ಲಿ ಟಿಕೆಟ್ ಬುಕ್ಕಿಂಗ್ ಮತ್ತು ವೀಕ್ಷಣೆಯೊಂದಿಗೆ, ಗ್ರಾಹಕರು ಟ್ರೈನ್ ನ ಪಿ ಎನ್ ಆರ್ ಖಚಿತತೆ ಸ್ಥಿತಿ ಮತ್ತು ನೇರ ಸ್ಥಳ ಪರೀಕ್ಷಿಸಬಹುದಾಗಿದೆ. ಟಿಕೆಟ್ ಖಚಿತತೆ ಸ್ಥಿತಿಯಲ್ಲಿ ಯಾವುದೇ ವಾಸ್ತವಿಕ ಬದಲಾವಣೆಯಿದ್ದಲ್ಲಿ ಈ ಕುರಿತು ಆ್ಯಪ್ ಬಳಕೆದಾರರಿಗೆ ಅಪ್ ಡೇಟ್ ನೀಡುತ್ತದೆ.
ಇದರೊಂದಿಗೆ ಪ್ರಯಾಣಿಕರು ಈಗ ಐಆರ್ಸಿಟಿಸಿ ಟ್ರೈನ್ ಟಿಕೆಟ್ ಗಳನ್ನು ರೆಡ್ ರೈಲ್ ನಲ್ಲಿ ಬುಕ್ ಮಾಡುವ ಮೂಲಕ “LOVERAIL” (ಲವ್ ರೈಲ್) ಕೂಪನ್ ಕೋಡ್ ಬಳಸಿ ರೂ 50 ರವರೆಗೆ 10% ರಿಯಾಯಿತಿ ಪಡೆಯಬಹುದು ಮತ್ತು ಯಾವುದೇ ಸೇವಾ ಶುಲ್ಕ ಮತ್ತು ಪಾವತಿ ಗೇಟ್ ವೇ ಶುಲ್ಕಗಳಿಲ್ಲದ ಸೌಲಭ್ಯಗಳನ್ನೂ ಆನಂದಿಸಬಹುದು. ಈ ಪರಿಚಯಾತ್ಮಕ ಕೊಡುಗೆ ಏಪ್ರಿಲ್ 20, 2022 ರವರೆಗೆ ಚಾಲ್ತಿಯಲ್ಲಿರುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


