ದಿನದ ಸುದ್ದಿ

ಅವಳಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಬದ್ಧ: ಎಂ.ಪಿ.ರೇಣುಕಾಚಾರ್ಯ

Published

on

ಸುದ್ದಿದಿನ, ದಾವಣಗೆರೆ : ಅವಳಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸಂಸದರು ನಾವು ಬದ್ಧರಾಗಿದ್ದೇವೆ. ವಸತಿಶಾಲೆ, ರಸ್ತೆಗಳು, ಹಾಸ್ಟೆಲ್‍ಗಳು, ಎಪಿಎಂಸಿ, ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಅನೇಕ ಕಾರ್ಯಕ್ರಮ ಉದ್ಘಾಟನಾ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಹಕಾರ ಸಚಿವರಾದ ಸೋಮಣ್ಣ ಅವರು ಬರಬೇಕಿತ್ತು. ಮೈಸೂರು ದಸರಾ ಹಿನ್ನೆಲೆಯಲ್ಲಿ ಬರಲಾಗಿಲ್ಲ ಎಂದು ತಿಳಿಸಿದರು.

ನ್ಯಾಮತಿಯಲ್ಲಿ ಶನಿವಾರ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಾಗೂ ವಿವಿಧ ಸರ್ಕಾರಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಸಾಂಕೇತಿಕವಾಗಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಗಿದೆ. ರೂ. 69 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಲೋಕಾರ್ಪಣೆ ಮಾಡಲಾಗಿದೆ ಎಂದರು.

ಎಪಿಎಂಸಿಗೆ ಪೂರಕವಾಗಿ ಅನೇಕ ಯೋಜನೆ ಮಂಜೂರು ಮಾಡಲಾಗುವುದು. ಜೊತೆಗೆ ಹೊನ್ನಾಳಿ-ನ್ಯಾಮತಿ ರಸ್ತೆ ಮಧ್ಯದಲ್ಲಿ ದ್ವೀಪ ಅಳವಡಿಸಲು ಕಾರ್ಯಕ್ರಮದಲ್ಲಿ ಕಾರಜೋಳ ಅವರಿಗೆ ವಿನಂತಿ ಮಾಡಲಾಗಿದೆ ಎಂದ ಅವರು, ಉನ್ನತ ಶಿಕ್ಷಣ ಸಚಿವರು ಕೌಶಲ ಅಭಿವೃದ್ಧಿ ನಿಗಮದಿಂದ ಯುವಕರಿಗೆ ಕೆಲಸ ನೀಡಲು ಅನೇಕ ಕೋರ್ಸ್ ನೀಡುತ್ತೇವೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version