ದಿನದ ಸುದ್ದಿ
ರೆಪೋ ದರದಲ್ಲಿ ಬದಲಾವಣೆ ಇಲ್ಲ : ಆರ್ ಬಿ ಐ
ಸುದ್ದಿದಿನಡೆಸ್ಕ್ : ಭಾರತೀಯ ರಿಸರ್ವ್ ಬ್ಯಾಂಕ್ – ಆರ್‌ಬಿಐನ ಹಣಕಾಸು ನೀತಿ ಸಮಿತಿ, ಪ್ರಸಕ್ತ ತ್ರೈಮಾಸಿಕ ದರ ಪ್ರಕಟಿಸಿದೆ. ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಆರ್‌ಬಿಐ ನಿರ್ಧರಿಸಿದೆ. ರೆಪೋ ದರವನ್ನು 6.5 ರಲ್ಲಿಯೇ ಮುಂದುವರಿಯಲಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
2024-25ನೇ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಶೇಕಡ 7 ರಿಂದ ಶೇಕಡ 7.2 ರಷ್ಟು ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಹಣದುಬ್ಬರವು ಶೇ.4.5ರಷ್ಟು ಇರಲಿದೆ. ವಿಶ್ವ ರಾಜಕೀಯ ಬಿಕ್ಕಟ್ಟಿನಿಂದಾಗಿ, ಕಚ್ಚಾ ತೈಲ ಬೆಲೆಯಲ್ಲಿ ಅನಿಶ್ಚಿತತೆ ಇರಲಿದೆ ಎಂದು ಅವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243