Connect with us

ದಿನದ ಸುದ್ದಿ

ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ಮುಂದೆ ಮತ್ತಷ್ಟು ಸುಲಭ: ‘ಸಕಾಲ’ ಸೇವೆಗೆ ಭೌತಿಕ ಆರ್‌ಟಿಐ ಅರ್ಜಿಗಳ ಸೇರ್ಪಡೆ, ಗ್ರಾಮ ಒನ್‌ನಲ್ಲೂ ಲಭ್ಯ

Published

on

ಸುದ್ದಿದಿನ,​ಬೆಂಗಳೂರು: ನಾಗರಿಕರಿಗೆ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರವು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯೊಂದಿಗೆ ಎರಡು ಪ್ರಮುಖ ಹಾಗೂ ನೂತನ ನಿರ್ಧಾರಗಳನ್ನು ಕೈಗೊಂಡಿದೆ.

ಭೌತಿಕ ಆರ್‌ಟಿಐ ಅರ್ಜಿಗಳ ದಾಖಲಾತಿ ಈಗ ‘ಸಕಾಲ’ ಸೇವೆ

​ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಭೌತಿಕ (ಕಾಗದದ ರೂಪದ) ಆರ್‌ಟಿಐ ಅರ್ಜಿಗಳನ್ನು ಸ್ವೀಕರಿಸಿದ ಸಾರ್ವಜನಿಕ ಪ್ರಾಧಿಕಾರವು 2 ದಿನಗಳ ಒಳಗಾಗಿ ಆರ್‌ಟಿಐ ಆನ್‌ಲೈನ್ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು.

​ಇದನ್ನು ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ರ ಅಡಿಯಲ್ಲಿ ಖಾತ್ರಿ ಸೇವೆಯಾಗಿ ಅಧಿಸೂಚಿಸಲಾಗಿದೆ. ​ಇದರಿಂದ ಪ್ರತಿಯೊಬ್ಬ ಅರ್ಜಿದಾರರಿಗೂ ಆನ್‌ಲೈನ್ ನೋಂದಣಿ ಸಂಖ್ಯೆ ದೊರೆಯಲಿದ್ದು, ಅರ್ಜಿಯ ಸ್ಥಿತಿಗತಿಯನ್ನು (Status) ಯಾವಾಗ ಬೇಕಾದರೂ ಪರಿಶೀಲಿಸಬಹುದು.

​ಅರ್ಜಿಗಳು ಕಳೆದುಹೋಗುವ ಅಥವಾ ನಿರ್ಲಕ್ಷ್ಯಕ್ಕೆ ಒಳಗಾಗುವ ಸಾಧ್ಯತೆ ಇರುವುದಿಲ್ಲ. ನಿಯಮಿತ ۲ ದಿನಗಳಲ್ಲಿ ಪೋರ್ಟಲ್‌ನಲ್ಲಿ ದಾಖಲಿಸದಿದ್ದರೆ ನಾಗರಿಕರು ಸಕಾಲ ಕಾಯ್ದೆಯಡಿ ಪರಿಹಾರ ವೆಚ್ಚ ಪಡೆಯಲು ಅರ್ಹರಾಗಿರುತ್ತಾರೆ ಹಾಗೂ ಸಂಬಂಧಪಟ್ಟ ಅಧಿಕಾರಿಯೇ ಇದಕ್ಕೆ ಹೊಣೆಗಾರರಾಗುತ್ತಾರೆ.

ಎಲ್ಲಾ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಆರ್‌ಟಿಐ ಸೇವೆ ಲಭ್ಯ

​ಇಂಟರ್ನೆಟ್ ಅಥವಾ ಕಂಪ್ಯೂಟರ್ ಬಳಕೆ ತಿಳಿಯದ ಸಾರ್ವಜನಿಕರನು ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯದ ಎಲ್ಲಾ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಆರ್‌ಟಿಐ ಅರ್ಜಿ ಸಲ್ಲಿಸುವ ಸೌಲಭ್ಯವನ್ನು ವಿಸ್ತರಿಸಲಾಗಿದೆ.

​ನಾಗರಿಕರು ತಮ್ಮ ಸಮೀಪದ ಕೇಂದ್ರಕ್ಕೆ ತೆರಳಿ ಸಿಬ್ಬಂದಿಯ ನೆರವಿನಿಂದ ಅರ್ಜಿ ಸಲ್ಲಿಸಬಹುದು.
​ನಿಗದಿತ ಆರ್‌ಟಿಐ ಶುಲ್ಕ ಮತ್ತು ಕೇಂದ್ರದ ನಾಮಮಾತ್ರ ಸೇವಾ ಶುಲ್ಕವನ್ನು ಪಾವತಿಸಿ, ಸ್ಥಳದಲ್ಲೇ ಆನ್‌ಲೈನ್ ಸ್ವೀಕೃತಿ (Acknowledgement) ಪಡೆಯಬಹುದು.

​ಗ್ರಾಮ ಪಂಚಾಯಿತಿ ಮಟ್ಟದ ‘ಗ್ರಾಮ ಒನ್’ ಕೇಂದ್ರಗಳ ಮೂಲಕ ಈಗ ಹಳ್ಳಿಯ ಪ್ರತಿಯೊಬ್ಬ ನಾಗರಿಕರಿಗೂ ಆನ್‌ಲೈನ್ ಆರ್‌ಟಿಐ ಸೌಲಭ್ಯ ತಲುಪಿದೆ.

ಪ್ರಮುಖ ಪ್ರಯೋಜನಗಳು

​ಏಕರೂಪದ ವೇದಿಕೆ: ಭೌತಿಕ, ಆನ್‌ಲೈನ್ ಅಥವಾ ಸೇವಾ ಕೇಂದ್ರಗಳ ಮೂಲಕ ಬರುವ ಎಲ್ಲಾ ಅರ್ಜಿಗಳು ಒಂದೇ ವೇದಿಕೆಯಡಿ ಬರಲಿವೆ. ​ಪಾರದರ್ಶಕತೆ: ಆರ್‌ಟಿಐ ಕಾಯ್ದೆ 2005ರ ಕಾಲಮಿತಿಗಳ ಪಾಲನೆಯನ್ನು ಸುಲಭವಾಗಿ ಮೇಲ್ವಿಚಾರಣೆ ಮಾಡಬಹುದು.

ಇದರಿಂದ ಮಾಹಿತಿ ಅಧಿಕಾರಿಗಳಿಂದಾಗುವ ವಿಳಂಬವನ್ನು ಶೀಘ್ರವಾಗಿ ಗುರುತಿಸಬಹುದು.
ನಾಗರಿಕರಿಗೆ ತಮ್ಮ ಅರ್ಜಿಗಳ ವಿಶ್ವಾಸಾರ್ಹ ದಾಖಲೆ ಲಭ್ಯವಾಗುತ್ತದೆ.

​ಸಾರ್ವಜನಿಕರು ನೇರವಾಗಿ ಆನ್‌ಲೈನ್‌ನಲ್ಲಾಗಲಿ ಅಥವಾ ತಮ್ಮ ಸಮೀಪದ ಸೇವಾ ಕೇಂದ್ರಗಳ (ಬೆಂಗಳೂರು ಒನ್/ಕರ್ನಾಟಕ ಒನ್/ಗ್ರಾಮ ಒನ್) ಮೂಲಕವಾಗಲಿ ಅರ್ಜಿ ಸಲ್ಲಿಸಿ ಈ ಸೌಲಭ್ಯದ ಗರಿಷ್ಠ ಪ್ರಯೋಜನ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ​ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆ‌ಆರ್.ಐ.ಡಿ.ಎಲ್  ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಮಾಯಕೊಂಡ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್‌ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.

ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.

ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending