ಕ್ರೀಡೆ
ವಿಡಿಯೋ | ಅಮ್ಮನಿಗಾಗಿ ‘ಅಡುಗೆ ಭಟ್ಟ’ ಆದ್ರು ಸಚಿನ್ ತೆಂಡೂಲ್ಕರ್..!
ಸುದ್ದಿದಿನ ಡೆಸ್ಕ್ : ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದ್ದಾರೆ. ತಾಯಿ, ಪತ್ನಿ ಅಂಜಲಿ ಹಾಗೂ ಮಗಳು ಸರಾ ಅವರಿಗಾಗಿ ಸ್ವತಃ ಸಚಿನ್ ಅವರೇ ಕಿಚನ್ನಲ್ಲಿ ಅಡುಗೆ ಮಾಡಿ ಬಡಿಸಿದ್ದಾರೆ.
ತಾವು ಅಡುಗೆ ಮಾಡಿರೋ ವಿಡಿಯೋವನ್ನು ಟ್ವೀಟರ್ನಲ್ಲಿ ಹಂಚಿಕೊಂಡಿದ್ದಾರೆ. ಈ ಮಹಿಳಾ ದಿನದಂದು ನಮ್ಮ ಬಾಳಲ್ಲಿ ತುಂಬಾ ಪ್ರಮುಖರಾಗಿರುವ ಮಹಿಳೆಯರಿಗಾಗಿ ಏನಾದರೂ ವಿಶೇಷವಾಗಿರೋದನ್ನು ಮಾಡೋಣ ಎಂದು ಟ್ವೀಟ್ ಮಾಡಿದ್ದಾರೆ.
This #WomensDay, let's do something special for the important women in our lives. Join me and share your own sweet gestures of love using#SeeHerSmile
Happy Women's Day! pic.twitter.com/ouMv0cPiuy— Sachin Tendulkar (@sachin_rt) March 8, 2019
Happy to visit my aunt at her place today. I used to live here during my school cricketing days & it brings back so many fond memories. She continues to pamper me even now! 😊#HappyWomensDay2019 pic.twitter.com/sG96uFiKIE
— Sachin Tendulkar (@sachin_rt) March 8, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401
ಕ್ರೀಡೆ
Olympic Games Paris 2024 | ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ; ಇಲ್ಲಿದೆ ಇಂದಿನ ಆಟಗಳ ಸಂಪೂರ್ಣ ಮಾಹಿತಿ
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನವಾದ ಇಂದು ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ಸ್ ಪಂದ್ಯದಲ್ಲಿ ಮನು ಭಾಕರ್ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ.
ಈ ಮೂಲಕ ಅವರು, ಒಲಿಂಪಿಕ್ಸ್ನ ಮಹಿಳೆಯರ ಶೂಟಿಂಗ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಫೈನಲ್ ಪಂದ್ಯದಲ್ಲಿ ಹೆಚ್ಚಿನ ಕಾಲ 2ನೇ ಸ್ಥಾನದಲ್ಲಿದ್ದು, ಬೆಳ್ಳಿ ಗೆಲ್ಲುವ ಸನಿಹದಲ್ಲಿದ್ದ ಅವರನ್ನು ಕೊನೆ ಕ್ಷಣದಲ್ಲಿ ಕೊರಿಯಾದ ಕಿಮ್‌ಯೆಜಿ ಹಿಂದಿಕ್ಕಿದರು. ಫೈನಲ್ಸ್ನಲ್ಲಿ ಮನುಬಾಕರ್ 221.7 ಅಂಕಗಳ ಮೂಲಕ ಕಂಚು ಪದಕ ಗೆದ್ದರೆ ದಕ್ಷಿಣ ಕೊರಿಯಾದ ಕಿಮ್‌ಯೆಜಿ 241.3 ಅಂಕಗಳ ಮೂಲಕ ಬೆಳ್ಳಿ ಹಾಗೂ ಅದೇ ರಾಷ್ಟ್ರದ ಒಹ್ ಯೆ ಜಿನ್, ದಾಖಲೆಯ 243.2 ಅಂಕಗಳ ಮೂಲಕ ಸ್ವರ್ಣ ಪದಕ ತಮ್ಮದಾಗಿಸಿಕೊಂಡರು. ಮನು ಭಾಕರ್ ಅವರ ಈ ಸಾಧನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಅವರ ಈ ಸಾಧನೆಯ ಕುರಿತು ಭಾರತಕ್ಕೆ ಹೆಮ್ಮೆಯಿದ್ದು, ಅವರು ಅನೇಕ ಕ್ರೀಡಾಪಟುಗಳು ಹಾಗೂ ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿದಾಯಕರಾಗಿದ್ದಾರೆ ಎಂದು ರಾಷ್ಟ್ರಪತಿಯವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮನು ಭಾಕರ್ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಭಾರತಕ್ಕೆ ಇದು ಐತಿಹಾಸಿಕ ಪದಕವಾಗಿದೆ. ಮಹಿಳಾ ಶೂಟಿಂಗ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂಡುಕೊಟ್ಟಿರುವುದರಿAದ ಇದೊಂದು ಅಸಾಮಾನ್ಯ ಹಾಗೂ ವಿಶೇಷ ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ.
ಇಂದು ನಡೆದ ಪುರುಷರ 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತದ ಅರ್ಜುನ್ ಬಬೂಟ 630.1 ಅಂಕಗಳೊAದಿಗೆ 7ನೇ ಸ್ಥಾನಗಳಿಸಿ ಫೈನಲ್ ಪ್ರವೇಶಿಸಿದ್ದಾರೆ. ಹಾಗೆಯೇ ಮಹಿಳೆಯರ 10 ಮೀಟರ್ ಏರ್ ರೈಫಲ್‌ನಲ್ಲಿ ರಮಿತಾ ಜಿಂದಾಲ್ ಫೈನಲ್ ಪ್ರವೇಶಿಸಿದ್ದಾರೆ. ರಮಿತಾ ಜಿಂದಾಲ್, 631.5 ಅಂಕಗಳೊAದಿಗೆ 5ನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಮತ್ತೊರ್ವ ಮಹಿಳಾ ಶೂಟರ್ ಎಲವೆನಿಲ್ ವಲರಿವನ್ 630.7 ಅಂಕಗಳೊAದಿಗೆ 10ನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಲು ವಿಫಲರಾದರು.
ಇಂದು ನಡೆದ ಮಹಿಳೆಯರ ಬ್ಯಾಡ್ಮಿಂಟನ್‌ನ ಸಿಂಗಲ್ಸ್ ವಿಭಾಗದ ತಮ್ಮ ಮೊದಲ ಪಂದ್ಯದಲ್ಲಿ 2 ಒಲಿಂಪಿಕ್ ಪದಕ ವಿಜೇತೆ ಭಾರತದ ಪಿ.ವಿ. ಸಿಂಧೂ, ಮಾಲ್ಡೀವ್ಸ್ನ ಫಾತಿಮತ್ ನಬಾಹ ಅಬ್ದುಲ್ ರಜಾಕ್ ಅವರನ್ನು 21-9, 21-6 ಅಂಕಗಳ ಅಂತರದಲ್ಲಿ ಮಣಿಸಿ ಶುಭಾರಂಭ ಕಂಡಿದ್ದಾರೆ. ಟೆಬಲ್ ಟೆನಿಸ್‌ನ 64ರ ಸುತ್ತಿನಲ್ಲಿ ಭಾರತದ ಶ್ರೀಜಾ ಅಕುಲಾ, ಸ್ವೀಡನ್‌ನ ಕ್ರಿಸ್ಟಿನಾ ಕಾಲ್ಬರ್ಗ್ ವಿರುದ್ಧ ಗೆಲುವು ಸಾಧಿಸಿ ಮುಂದಿನ ಹಂತಕ್ಕೆ ಅರ್ಹತೆ ಪಡೆದರು.
ಮಹಿಳಾ ಬಿಲ್ಲುಗಾರಿಕೆಯಲ್ಲಿ ದೀಪಿಕಾ ಕುಮಾರಿ, ಅಂಕಿತಾ ಭಕತ್ ಹಾಗೂ ಭಜನ್ ಕೌರ್ ಈ ಮೂವರನ್ನೊಳಗೊಂಡ ಭಾರತೀಯ ತಂಡ ಕ್ವಾಟರ್ ಫೈನಲ್‌ನಲ್ಲಿ ನೆದರ್‌ಲ್ಯಾಂಡ್ ತಂಡದ ವಿರುದ್ಧ 0-6 ಅಂಕಗಳಿಂದ ಪರಾಭವಗೊಂಡಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಎಚ್.ಎಸ್. ಪ್ರಣೋಯ್, ಜರ್ಮನಿಯ ಫೇಬಿಯನ್ ರೋತ್ ವಿರುದ್ಧ ಹೋರಾಟ ನಡೆಸಲಿದ್ದಾರೆ.
ಪುರುಷರ ಡಬಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ಭಾರತದ ಅನುಭವಿ ಆಟಗಾರರಾದ ರೋಹನ್ ಬೋಪಣ್ಣ ಹಾಗೂ ಶ್ರೀರಾಂ ಬಾಲಾಜಿ ಜೋಡಿ ಫ್ರಾನ್ಸ್ನ ಗೇಲ್ ಮೋನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್ ವ್ಯಾಸೆಲಿನ್ ಜೋಡಿ ವಿರುದ್ಧ ಸೆಣಸಲಿದೆ. ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟಿನ್ನಿಸ್ ಪಂದ್ಯದ ಮಹಿಳಾ ಸಿಂಗಲ್ಸ್ನಲ್ಲಿ ಭಾರತದ ಶ್ರೀಜಾ ಅಕುಲಾ ಹಾಗೂ ಮಹಿಳಾ ಬಾಕ್ಸಿಂಗ್‌ನ 50 ಕೆಜಿ ವಿಭಾಗದಲ್ಲಿ ನಿಕತ್ ಝರೀನ್ ಮುಂದಿನ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.
https://x.com/siddaramaiah/status/1817536595970650154?t=otcDD00kQUBeN84H7DvrEA&s=19
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಟಿ-20 ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ದೆಹಲಿಗೆ ಆಗಮನ ; ಸಂಜೆ ರೋಡ್ ಶೋ
ಸುದ್ದಿದಿನಡೆಸ್ಕ್:ಟಿ-20ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ಬೆಳಗ್ಗೆ ರಾಜಧಾನಿ ದೆಹಲಿಗೆ ಆಗಮಿಸಿತು. ವಿಮಾನ ನಿಲ್ದಾಣದಲ್ಲಿ ಭಾರತದ ಆಟಗಾರರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಪಂದ್ಯಾವಳಿಯ ಫೈನಲ್ ಪಂದ್ಯ ನಡೆದ ಬಾರ್ಬಡೋಸ್‌ನಿಂದ ತಂಡವು ಹಿಂತಿರುಗಿತು.
ಬೆರಿಲ್ ಚಂಡಮಾರುತದಿಂದಾಗಿ ಭಾರತ ತಂಡದ ಆಗಮನ ವಿಳಂಬವಾಯಿತು. ರಾಷ್ಟ್ರದ ರಾಜಧಾನಿಯಲ್ಲಿ ಭಾರತೀಯ ತಂಡವನ್ನು ಸ್ವಾಗತಿಸಲು ಕ್ರಿಕೆಟ್ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ಮುಂಬೈಗೆ ತೆರಳುವ ಮುನ್ನ ಭಾರತ ತಂಡ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದೆ.
ಚಾಂಪಿಯನ್ ತಂಡ ಮುಂಬೈನಲ್ಲಿ ಇಂದು ಸಂಜೆ ತೆರೆದ ಬಸ್‌ನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ -ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಿಳಿಸಿದ್ದಾರೆ.
ಸಂಜೆ 5ರಿಂದ 7ರವರೆಗೆ ನಾರಿಮನ್ ಪಾಯಿಂಟ್‌ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ವಿಜಯಯಾತ್ರೆ ನಡೆಯಲಿದೆ. ಅದರ ನಂತರ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್ಮಾನ ಸಮಾರಂಭ ನಡೆಯಲಿದ್ದು, ಅಲ್ಲಿ ಬಿಸಿಸಿಐ ಭಾರತ ತಂಡಕ್ಕೆ ಬಹುಮಾನ ಮೊತ್ತವನ್ನು ನೀಡಲಿದೆ. ಟಿ-20 ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ರೋಡ್ ಶೋಗೆ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ಸಂತೇಬೆನ್ನೂರು | ಈಶ್ವರೀ ವಿ ವಿ ಯಲ್ಲಿ ಇಂಜಿನಿಯರ್ಸ್ ಡೇ ಆಚರಣೆ
-
ದಿನದ ಸುದ್ದಿ6 days ago
ದಾವಣಗೆರೆ | ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ
-
ದಿನದ ಸುದ್ದಿ5 days ago
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ4 days ago
ಆತ್ಮಕತೆ | ಮಗು : ಆತಂಕದ ಕ್ಷಣಗಳು
-
ದಿನದ ಸುದ್ದಿ5 days ago
HAL | ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಪುಣೆಯಿಂದ ಹುಬ್ಬಳಿಗೆ ಇಂದಿನಿಂದ ವಂದೇ ಭಾರತ್ ರೈಲು ಸಂಚಾರ
-
ದಿನದ ಸುದ್ದಿ5 days ago
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ3 days ago
ಶೀಘ್ರವೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹ