ದಿನದ ಸುದ್ದಿ

ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಕಲ್ಪಿಸಲು ಕ್ರಮ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಜ್ಯದ ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಕಲ್ಪಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಸಾವಿರದ 80 ಜನರಿಗೆ ಪುನರ್ವಸತಿ ಒದಗಿಸಲು ಪ್ರತ್ಯೇಕ ಕ್ರಿಯಾ ಯೋಜನೆ ತಯಾರಿಸಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದರು. ಕಾನೂನು ಉಲ್ಲಂಘಿಸಿದ ಒಟ್ಟು 350 ಪ್ರಕರಣಗಳು ವಿಚಾರಣೆಯ ಹಂತದಲ್ಲಿದ್ದು, ಈವರೆಗೆ ಇತ್ಯರ್ಥವಾದ 90 ಪ್ರಕರಣಗಳಲ್ಲಿ 12 ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version