ಲೈಫ್ ಸ್ಟೈಲ್
ಹುಬ್ಬೇರಿಸುವಂತೆ ಮಾಡಿದೆ, ಸುಂದರಿಯ ಬೇಬಿ ಬಂಪ್..!

ಎರಡನೇ ಬಾರಿಗೆ ತಾಯಿ ಆಗುತ್ತಿರುವ ಬಾಲಿವುಡ್ ಬೆಡಗಿ ಸಮೀರಾ ರೆಡ್ಡಿ, ತಮ್ಮ ತಾಯ್ತನದ ಸೊಬಗನ್ನು ವ್ಯಕ್ತಪಡಿಸಿದ ಪರಿಚರ್ಚೆಗೆ ಕಾರಣವಾಗಿದೆ. ಈ ತುಂಬು ಗರ್ಭಿಣಯ ಅಂಡರ್ ವಾಟರ್ ಫೋಟೋ ಶೂಟ್!
https://www.instagram.com/p/BzfEeQ7nGyt/?utm_source=ig_web_button_share_sheet
ತಾಯ್ತನದ ಅತ್ಯಮೂಲ್ಯ ಕ್ಷಣಗಳನ್ನು ಮೆಲುಕು ಹಾಕಲು, ಬೇಬಿ ಬಂಪ್ ಪೋಟೋ ಶೂಟ್ ಮಾಡಿಸಲಾಗುತ್ತದೆ. ತಾಯ್ತನದ ಮೆಟ್ಟಿಲೇರಿ ನಿಂತಿರುವ ಹೆಣ್ಣಿಗೆ ಸೀಮಂತ ಶಾಸ್ತ್ರ ಮಾಡಿ ಹಾರೈಸುವುದು ಪ್ರತೀತಿ. ಆದರೆ ಇಂದಿನ ಹೈಟೆಕ್ ಯುಗದಲ್ಲಿ, “ಬೇಬಿ ಮೂನ್”, ಬೇಬಿ ಬಂಪ್ ಪೋಟೋ ಶೂಟ್, ವಿಡಿಯೋ ಆಲ್ಬಂಗಳು ಹೆಚ್ಚು ಜನಪ್ರಿಯ ಗೊಳ್ಳುತ್ತಿದೆ. ಸಿನಿ ತಾರೆಯರು, ಸೆಲಿಬ್ರಿಟಿಗಳು, ಸೇರಿದಂತೆ ಹಲವಾರು ಗರ್ಭಿಣಿಯರು ಈ ಟ್ರೆಂಡ್ ಗೆ ಆಕರ್ಷಿತರಾಗುತ್ತಿದ್ದಾರೆ.
https://www.instagram.com/p/BzfBZX-HRYn/?utm_source=ig_web_button_share_sheet
ಸಮೀರಾ ರೆಡ್ಡಿಯ ಈ ಡೇರಿಂಗ್ ಪೋಟೋ ಶೂಟ್ ಗೆ ಹಲವಾರು ಫ್ಯಾಷನ್ ಮತ್ತು ಬಾಲಿವುಡ್ ಮಂದಿ ಭೇಷ್ ಎಂದಿದ್ದಾರೆ. ಇನ್ನು ಹಲವರು ಹುಬ್ಬೇರಿಸಿ ಆಶ್ಚರ್ಯಚಕಿತರಾಗಿದ್ದಾರೆ. ವೈಬ್ರಂಟ್ ನಿಯಾನ್ ಗ್ರೀನ್, ಪಿಂಕ್ ಬಣ್ಣದ ಬಿಕಿನಿ ಯಲ್ಲಿ ತಮ್ಮ ತಾಯ್ತನವನ್ನು ಆಸ್ವಾದಿಸುವ ಸುಂದರ ಪೋಟೋಗಳು ಸೋಷಿಯಲ್ ಮೀಡಿಯಾ ದಲ್ಲಿ ಕಿಚ್ಚು ಹಚ್ಚಿದೆ. ಸಾಕ್ಷಾತ್ ಮತ್ಸ್ಯಕನ್ಯೆ ಯಂತೆ ಕಾಣುವ ಸಮೀರಾ ರೆಡ್ಡಿ ಹಸಿರು ಮತ್ತು ಕೆಂಪು ಕಾಂಬಿನೇಷನ್ ಪೋಟೋ ಆಲ್ಬಂ ಎಲ್ಲೆಲ್ಲೂ ವೈರಲ್ ಆಗಿದೆ.
–ಚಿತ್ರಶ್ರೀ ಹರ್ಷ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025
ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ರಾಜಕೀಯ5 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ
-
ದಿನದ ಸುದ್ದಿ6 days ago
ಅಂಬೇಡ್ಕರ್ ಸ್ಮರಣೆಯಿಂದ ದೇಶ ಪ್ರಗತಿಪರವಾಗಲು ಸಾಧ್ಯ : ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್
-
ದಿನದ ಸುದ್ದಿ5 days ago
ದಾವಣಗೆರೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಮೊಬೈಲ್ ಕ್ಯಾಟೀನ್ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಮೌಲಾನಾ ಅಜಾದ್ ಮಾದರಿ ಶಾಲೆಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಇ-ಸ್ವತ್ತು ಸಮಸ್ಯೆ ಪರಿಹಾರಕ್ಕಾಗಿ ಕಾರ್ಯನಿರ್ವಹಣಾ ಸಮಿತಿ ರಚನೆ
-
ದಿನದ ಸುದ್ದಿ5 days ago
‘ವಿದ್ಯಾಸಿರಿ’ ಯೋಜನೆಯಡಿ ವಿದ್ಯಾರ್ಥಿ ವೇತನ ಪರಿಷ್ಕರಣೆಗೆ ಒತ್ತು : ಸಿಎಂ ಸಿದ್ದರಾಮಯ್ಯ