ದಿನದ ಸುದ್ದಿ

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ | ನಟಿ‌ ಸಂಜನಾ ಗಲ್ರಾನಿ ಆಪ್ತ ರಾಹುಲ್ ಪೋಲೀಸ್ ವಶಕ್ಕೆ

Published

on

ಸುದ್ದಿದಿನ,ಬೆಂಗಳೂರು: ನಟಿ ಸಂಜನಾ ಗಲ್ರಾನಿಯ ಆಪ್ತ ರಾಹುಲ್‍ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ವಿಡಿಯೋ ಸಾಕ್ಷ್ಯ ಸೇರಿ ಹಲವು ಪ್ರಮುಖ ಮಾಹಿತಿ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಮೂಲಕ ಸೆಲೆಬ್ರಿಟಿಗಳ ಪಾರ್ಟಿಗೆ ಡ್ರಗ್ ಸಪ್ಲೈ ಮಾಡುತಿದ್ದನಾ ರಾಹುಲ್ ಎಂಬ ಪ್ರಶ್ನೆ ಇದೀಗ ಮೂಡಿದೆ. ರಾಹುಲ್ ಡ್ರಗ್ ಪೆಡ್ಲರ್ ಆಗಿರುವ ಶಂಕೆ ಹಿನ್ನೆಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿಯೇ ರಾಹುಲ್ ನನ್ನು ಸಿಸಿಬಿ ಕಚೇರಿಗೆ ಕರೆತರಲಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಸಿಸಿಬಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version