Connect with us

ದಿನದ ಸುದ್ದಿ

ಸಾಹುಕಾರಿಕೆ ಎಂದರೆ..!

Published

on

  • ಸುರೇಶ ಎನ್ ಶಿಕಾರಿಪುರ ಶಿಕಾರಿಪುರ

ಸಾಹುಕಾರಿಕೆ ಎಂದರೆ ಸರಳತೆ ಸೌಜನ್ಯ ಕಾರುಣ್ಯ ಪೂರ್ಣದೃಷ್ಠಿ ಮನುಷ್ಯಪ್ರೇಮ ಎಂಬುದನ್ನು ಸತೀಶ್ ಜಾರಕಿಹೊಳಿ ಅವರನ್ನು ಹತ್ತಿರದಿಂದ ನೋಡಿದ ಯಾರಿಗಾದರೂ ಅನ್ನಿಸದೇ ಇರದು. ಆ ಕಾರಣಕ್ಕಾಗಿಯೇ ಬೆಳಗಾವಿಯ ಜನತೆ ಜಾತಿ ಭೇದ ಬದಿಗಿಟ್ಟು ಮತಹಾಕಿದ್ದಾರೆ.

ಚುನಾವಣೆ ಇರಲಿ ಇಲ್ಲದಿರಲಿ ತನನ್ನು ಯಾರೆಷ್ಟೇ ಕಟುವಾಗಿ ಟೀಕಿಸಲಿ ಅವಮಾನಕರವಾಗಿ ಮಾತನಾಡಲಿ ಎಲ್ಲರಿಗೂ ಶಾಂತಿಯಿಂದಲೇ ವಿವೇಕಯುತವಾದ ಪ್ರತಿಕ್ರಿಯೆಯನ್ನು ಸಭ್ಯತೆಯ ಎಲ್ಲೆ ಮೀರದೆ ಕೊಡುತ್ತಾರೆ. ಮೌಢ್ಯದ ವಿರುದ್ಧದ ಹೋರಾಟ ಸಮಾನತೆಗಾಗಿ ಹೋರಾಟ ಯಾವುದೇ ಬಗೆಯ ದೌರ್ಜನ್ಯಗಳ ವಿರುದ್ಧ “ಮಾನವಬಂಧುತ್ವ ವೇದಿಕೆ” ಕಟ್ಟಿ ಅದನ್ನು ನಿರಂತರವಾಗಿ ಬೆಳೆಯಿಸಿ ಇವನಾರವ ಇವನಾರವ ಎಂದೆಣಿಸದೆ ಎಲ್ಲರನ್ನೂ ನಮ್ಮವರೆಂದು ಬಂಧುತ್ವವನ್ನು ಬೆಸೆಯುತ್ತಿರುವ ಈ ಕಾಲದ ವಿಶೇಷ ನಾಯಕ.

ರಾಜಕಾರಣ ಲಾಭದ ಸರಕಾಗಿರುವ ಈ ಕಾಲಘಟ್ಟದಲ್ಲಿ, ಪುರೋಹಿತಶಾಹಿ ಬಲಪಂಥೀಯ ಕೋಮುವಾದೀ ಜಾತಿವಾದಿ ಕ್ರಿಮಿಗಳು ಎಲ್ಲೆಡೆ ತುಂಬಿಕೊಂಡು ರಾಜಕೀಯ ಮೌಲ್ಯಗಳೇ ಕುಸಿದುಬಿದ್ದರುವ ಈ ಕಾಲಘಟ್ಟದಲ್ಲಿ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಇಙತವರದ್ದೆಲ್ಲಾ ಏಕಾಂಗಿಹೋರಾಟ. ಮತ್ತೂ ಪ್ರವಾಹದ ವಿರುದ್ಧವೇ ಸೆಣೆಸುವ ಪ್ರವಾಹದಲ್ಲಿ ತನ್ನವರು ತೇಲಿ ಹೋಗಬಾರದು ಕೊಚ್ಚಿಹೋಗಬಾರದು ಎಂದು ರಕ್ಷಣೆಗೆ ನಿಲ್ಲುವ ಅಸಾಧಾರಣ ಸಾಹಸೀ ಹೋರಾಟ.

ಸತೀಶ್ ಜಾರಕಿಹೊಳಿಯವರು ಎಲ್ಲ ವೈಟ್ ಸ್ಕಾಲರ್ ರಾಜಕಾರಣಿಗಳಂತೆ ತಾವೂ ಒಂದು ಸ್ಟಾಂಡರ್ಡ್ ಮೇಂಟೇನ್ ಮಾಡಬಹುದಿತ್ತು ಆ ಎಲ್ಲಾ ಅವಕಾಶಗಳೂ ಅವರಿಗಿವೆ ಆದರೆ ತನ್ನ ಕಣ್ಣಮುಂದೆ ಏನೂ ಇಲ್ಲದ ಜನರಿದ್ದಾರಲ್ಲ ತಾನೂ ಅವರಂತೆಯೇ ಅವರೊಟ್ಟಿಗೇ ಅವರಿಗೆ ಅಣಕಿಸದ ಹಾಗೆ ಅವರ ಬಡತನ ದಾರಿದ್ರ್ಯ ಸ್ಥಿತಿಗಳನ್ನು ಅಣಕಿಸದ ಹಾಗಿರಬೇಕು ಅಂತಿಮವಾಗಿ ಮನುಷ್ಯ ಸರಳವಾಗಿ ಎಲ್ಲರವನಾಗಿ ಬದುಕಿ ಹೋಗಬೇಕೆಂಬ ಸಿದ್ಧಾಂತಕ್ಕೆ ಅದೂ ಹುಟ್ಟುಸಹಜವಾಗಿ ಬಂದ ಗುಣಕ್ಕೆ ಎರವಾಗದೆ ಸಾಗುತ್ತಿದ್ದಾರೆ.

ಚುನಾವಣೆ ಎಂದರೆ ಅವರಿಗೆ ಅದೊಂದು ಮಹಾತಂತ್ರ ಕುತಂತ್ರಗಳ ಆರೋಪ ಪ್ರತ್ಯಾರೋಪಗಳ ಜಿದ್ದಾಜಿದ್ದಿನ ಹಗೆತನ ಸಾಧಿಸುವ ಸಾಧನವಲ್ಲ ಅದೊಂದು ಜನಸೇವೆ ಮಾಡಲು ಸಂವಿಧಾನಬದ್ಧವಾಗಿ ಅವರ ಕೆಲಸ ಮಾಡಲು ಬೇಕಾಗಿರುವ ಒಂದು ಅವಷ್ಯಕತೆ‌. ಚುನಾವಣೆ ಗೆದ್ದವರಿಗೆ ಸಿಗುವುದು ‘ಅಧಿಕಾರ’ವಲ್ಲ ಅವಕಾಶ. ಆ ಅವಕಾಶ ವಯಕ್ತಿಕಕ್ಕಲ್ಲ ಜನತೆಗೆ ಸಮಾಜಕ್ಕೆ ದೇಶಕ್ಕೆ ವಿನಿಯೋಗಿಸಲು ಈ ವಿಚಾರದಲ್ಲಿ ನಂಬಿ ಇಟ್ಟುಕೊಂಡ ನಾಯಕ ಸಧ್ಯಕ್ಕೆ ಸಿಗುವುದು ಸತೀಶ್ ಜಾರಕಿಹೊಳಿ.

ಇದನ್ನೂ ಓದಿ |ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೆ, ಮಹಿಳೆಯರು ಹೆಚ್ಚು ಕಾಲ ಫಿಟ್ ಅಂಡ್ ಹೆಲ್ತಿಯಾಗಿರಲು ನಿಮ್ಮಆಯ್ಕೆ ಹೀಗಿರಲಿ..!

ಒಂದೆಡೆ ನಮ್ಮ ಕ್ಷೇತ್ರವನ್ನು ಬಿಟ್ಟುಹೋಗಬೇಡಿ ಎಂದು ಒತ್ತಾಯಿಸುತ್ತಿದ್ದ ಯಮಕನಮರಡಿಯ ಜನತೆ ಮತ್ತೊಂದೆಡೆ “ಸತ್ಯಪ್ಪ ಸೌಕಾರ್ರಿಗೆ ಓಟ್ ಹಾಕೋಕೆ ನಮಗೊಂದು ಅವ್ಕಾಶ ಸಿಕ್ಕೆದ” ಎಂದು ಅಭಿಮಾನದಿಂದ ಸ್ವಾಗತಿಸುತ್ತಿದ್ದ ಜನ ಇವರಿಬ್ಬರ ಪ್ರೀತಿ ಅಭಿಮಾನದಲ್ಲಿ ನಾಯಕ ಯಾರೆಡೆಗೆ ಬಾಗಬೇಕು ಎಂದು ಯೋಚಿಸುವುದು ಕಷ್ಟವಾಗಿಬಿಡುತ್ತದೆ.

ಆದರೂ ಒಂದು ಪಕ್ಷ ಅದಕ್ಕೊಂದು ವ್ಯವಸ್ಥೆ ಇರುತ್ತದೆ. ಪಕ್ಷದ ಸದಸ್ಯರು ಅದರ ಮಾತು ಕೇಳಬೇಕಾಗುತ್ತದೆ‌. ಪಕ್ಷದ ಹೈಕಮಾಂಡ್ ಮತ್ತು ನಾಯಕರ ಒತ್ತಡಕ್ಕೆ ಮಣಿದು ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಫರ್ಧಿಸಿ ನಿರೀಕ್ಷಿಸಿದಂತೆ ಬಲವಾದ ಪೈಪೋಟಿ ನೀಡಿ ಅಲ್ಪದರಲ್ಲಿ ಪರಾಜಿತರಾಗಿದ್ದಾರೆ‌. ಅಸಲಿಗೆ ಇದು ಪರಾಜಯವೇ ಅಲ್ಲ.

ಸತೀಶ್ ಜಾರಕೀಹೊಳಿ ಅವರನ್ನು ರಾಜಕೀಯವಾಗಿ ತುಳಿಯಲು ಹೂಡಿರುವ ಷಡ್ಯಂತ್ರ ಎನ್ನುವ ಮಾತು ಹರಿದಾಡುತ್ತಿತ್ತು ಅದು ಸತ್ಯವೇ ಆಗಿದ್ದರೆ ಷಡ್ಯಂತ್ರ ಹೂಡಿದ್ದವರಿಗೆ ಸೋಲಾಗಿದೆ. ಹಾಗೂ ಪಕ್ಷದಲ್ಲಿ ಸತೀಶ್ ಜಾರಕಿಹೊಳಿಯವರ ಶಕ್ತಿ ಏನೆಂಬುದು ಸಾಬೀತಾಗಿದೆ. ಎದುರು ಪಕ್ಷದವರ ಅಪಪ್ರಚಾರ ಸೋತಿದೆ‌. ಜನ ದಶಕಗಳ ಕಾಲ ಕಂಡ ಮನುಷ್ಯನ ಅಂತರಂಗಕ್ಕೆ ಸೋತು ಮತಹಾಕಿದ್ದಾರೆ. ಬಿಜೆಪಿ ಗೆದ್ದರೂ ಬೆದರುವಂತಾಗಿದೆ. ಅವರಿಗೆ ಗೆದ್ದರೂ ಇದು ಸೋಲೇ‌…

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending