ರಾಜಕೀಯ
‘ಸತ್ಯಪ್ಪ ಸಾಹುಕಾರ’ ಎಂಬ ರೈತ ನಾಯಕ..!
- ಸುರೇಶ ಎನ್ ಶಿಕಾರಿಪುರ ಶಿಕಾರಿಪುರ
ನಾನು ರೈತ ನಾಯಕ ಎಂದು ಬಿಂಬಿಸಿಕೊಳ್ಳುವುದು ಇತ್ತೀಚೆಗೆ ರಾಜಕಾರಣಿಗಳಿಗೊಂದು ಖಯಾಲಿಯಾಗಿದೆ. ರೈತರು ಕೆಲವರಿಗೆ ಬಿಕರಿಯಾಗಿ ಸಿಕ್ಕಿಬಿಟ್ಟಿದ್ದಾರೆ. ಅದರಲ್ಲೂ ಬಿಜೆಪಿಯಂತೂ ರೈತ ಪಕ್ಷವಲ್ಲ. ಅದು ಜನಿವಾರ ತುಪ್ಪದ ಸೌಟು ಸಂಸ್ಕೃತ ಮಂತ್ರ ಹೇಳುವ ಬೆವರು ಸುರಿಸಿ ದುಡಿವ ಜನರನ್ನು ಬೆವರು ಸುರಿಸದೇ ಸುಲಿಯುವ ದರ್ಭೆ ಹಿಡಿದ ಪುರೋಹಿತರ ಹಾಗೂ ವಂಚಕ ಬಂಡವಾಳಗಾರ ದೊಡ್ಡ ದೊಡ್ಡ ವ್ಯಾಪಾರಿಗಳ ಏಳಿಗೆಗಾಗಿಯೇ ಜನುಮ ತಾಳಿದ ಪಕ್ಷ. ಆ ಪಕ್ಷದ ನಾಯಕರು ರೈತರ ಹೆಸರು ಎತ್ತಿದಾಗ ಹಸಿರುಶಾಲು ಹೊದ್ದಾಗ ನಗು ಬರುತ್ತದೆ.
ಹಸಿರು ಶಾಲು ಹೊದ್ದು ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ಅಧಿಕಾರಕ್ಕೆ ಬಂದ ತಿಂಗಳಲ್ಲೇ ರೈತರ ಮೇಲೆ ಗೋಲಿಬಾರ್ ಮಾಡಿಸಿದವರೆಲ್ಲಾ ರೈತ ನಾಯಕರಲ್ಲ. ರೈತರ ಸಾಲ ಮನ್ನಾ ಮಾಡಿರೆಂದು ರೈತರು ವಿರೋಧ ಪಕ್ಷದವರು ಹೋರಾಡುವಾಗ ನನ್ನ ಬಳಿ ನೋಟ್ ಪ್ರಿಂಟ್ ಮಾಡುವ ಮಿಷಿನ್ ಇಟ್ಕೊಂಡಿಲ್ಲ ಎಂದು ಸದನದಲ್ಲಿ ಹೇಳಿಕೆ ಕೊಟ್ಟವರೆಲ್ಲಾ ರೈತ ನಾಯಕರಲ್ಲ. ಹಾಗೂ ತನ್ನ ಸರ್ಕಾರದ ಆಡಳಿತದ ಉದ್ಧಕ್ಕೂ ರೈತರು ಬೀಜ ಗೊಬ್ಬರ ಔಷಧಿಗಳಿಗಾಗಿ ಸಾಲು ಹಚ್ಚಿ ನಿಲ್ಲುವಂತೆ ಮಾಡಿ ಅವರ ಮೇಲೆ ಲಾಟಿ ಚಾರ್ಜು ಮಾಡಿಸುವವರೆಲ್ಲಾ ರೈತ ನಾಯಕರಲ್ಲ.
ಯಡಿಯೂರಪ್ಪನವರ ರಾಜ್ಯ ಬಿಜೆಪಿ ಸರ್ಕಾರ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಒತ್ತಡಕ್ಕೆ ಮಣಿದು APMC (ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ) ಕಾಯ್ದೆಗೆ ತಿದ್ದುಪಡಿ ತಂದು ರೈತರ ಮರಣಶಾಸನ ಬರೆದಿದೆ. ಇದರ ಭವಿಷ್ಯದ ದುಷ್ಪರಿಣಾಮಗಳನ್ನು ನಮ್ಮ ರೈತ ಸಮುದಾಯ ಇನ್ನೂ ಅರ್ಥ ಮಾಡಿಕೊಳ್ಳದೆ ಇರುವುದು ನಮ್ಮ ದೇಶದ ದುರಂತ.
ಇದನ್ನೂ ಓದಿ | ದಾವಣಗೆರೆ | ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕೋವಿಡ್ ಲಸಿಕಾ ಜಾಗೃತಿ ಅಭಿಯಾನ
ರೈತರ ಹೆಸರಲ್ಲಿ ರೈತ ವಿರೋಧಿ ಚಟುವಟಿಕೆಗಳನ್ನು ಮಾಡುವವರು ರೈತದ್ರೋಹ ಮಾಡುವವರೇ ತಾನು ರೈತ ನಾಯಕ ಎಂದು ಬಿಂಬಿಸಿಕೊಳ್ಳುವುದು ಬ್ರಹ್ಮರಾಕ್ಷಸವೊಂದು ವಿಭೂತಿ ಶಿವದಾರ ರುದ್ರಾಕ್ಷಿ ಧರಿಸಿ ನಾನು ಶಿವಭಕ್ತ ಎಂದು ಹೇಳಿಕೊಂಡಂತೆ ಅಲ್ಲವೇ…? ರೈತರಿಗಾಗಿ ಸರ್ಕಾರದ ಮಟ್ಟದಲ್ಲಾಗಲೀ ವಯಕ್ತಿಕವಾಗಿಯಾಗಲೀ ಕಿಂಚಿತ್ ಕೊಡುಗೆ ಕೊಡದವರ ರೈತರ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ.
ಕೇಂದ್ರ ಸರ್ಕಾರ ಭೂ ಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದು ರೈತರ ಸರ್ವನಾಶಕ್ಕೆ ಮುನ್ನುಡಿ ಬರೆದಿದೆ. ದೇಶ ಕಳೆದ ವರ್ಷದಿಂದ ಈ ವರೆಗೆ ವಿಶ್ವ ಕಂಡಿರದ ಅತಿ ದೊಡ್ಡ ಪ್ರಮಾಣದ ರೈತ ಚಳುವಳಿಗೆ ಸಾಕ್ಷಿಯಾಗಿದ್ದು ನೂರಾರು ರೈತರು ಜೀವ ಕಳೆದುಕೊಂಡರೂ ನಾನು ನಿಮ್ಮ ಚೌಕಿದಾರ ನಾನು ನಿಮ್ಮ ಪ್ರಧಾನ ಸೇವಕ ಎಂದು ಭಾಷಣ ಬಿಗಿದಿದ್ದ ಪ್ರಧಾನಿ ನರೇಂದ್ರ ಮೋದಿ ರೈತರ ಪ್ರಧಾನ ಭಕ್ಷಕನಾಗಿ ತನ್ನ ದೇಶದ ರೈತರನ್ನೇ ಅಮಾನವೀಯವಾಗಿ ಶೋಷಿಸುತ್ತಿದ್ದಾರೆ.
ರೈತರು ಅಂಬಾನಿ ಅದಾನಿ ಮತ್ತಿತರೆ ಬಂಡವಾಳಗಾರರ ಒತ್ತೆಯಾಳಾಗಬೇಕಾದ ಪರಿಸ್ಥಿ ನಿರ್ಮಾಣವಾಗಿದೆ. ಇಂತ ಹೊತ್ತಿನಲ್ಲಿ ದೇಶದ ನಾನಾ ಕಡೆ ಸಂಸತ್ ಮತ್ತು ವಿಧಾನ ಸಭೆಗಳಿಗೆ ಸಾರ್ವತ್ರಿಕ ಹಾಗೂ ಕೆಲವು ಕಡೆ ಉಪ – ಚುನಾವಣೆಗಳು ನಡೆಯುತ್ತಿವೆ. ಈ ಹೊತ್ತಿನಲ್ಲಿ ನಮ್ಮ ಕರ್ನಾಟಕದ ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಶ್ರೀ ಸತೀಶ್ ಜಾರಕಿಹೊಳಿಯವರು ಹೆಗಲ ಮೇಲೆ ಹಸಿರು ಶಾಲು ಹೊದ್ದು ಮತ್ತೋರ್ವ ರೈತ ನಾಯಕ ಮಾಜಿ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯನವರ ಜೊತೆಗೂಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಅತ್ಯಂತ ಸೂಕ್ಷ್ಮ ಮತಿಯಾದ ಸತೀಶ್ ಜಾರಕಿಹೊಳಿಯವರು ದೇಶದ ರೈತರು ಕಂಗಾಲಾಗಿರುವ ಈ ಸಂದರ್ಭದಲ್ಲಿ ಹಸಿರುಶಾಲು ಹೊದ್ದು ನಾನು ರೈತರೊಟ್ಟಿಗಿದ್ದೇನೆ ಎಂಬ ಮೌನ ಸಂದೇಶವನ್ನು ಜನತೆಗೆ ನೀಡಿದ್ದಾರೆ. ಹೆಗಲ ಮೇಲೆ ಹಸಿರುಶಾಲು ಹೊದ್ದು ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ ಯವರು ಇದನ್ನೆಲ್ಲಾ ತೋರಿಕೆಗಾಗಿ ಮಾಡುವ ಅಪಾರ್ಚುನಿಷ್ಟ್ ರಾಜಕಾರಣಿ ಅಲ್ಲ.
ಅವರಿಗೆ ಆ ಅರ್ಹತೆ ಇದೆ ಹಸಿರುಶಾಲು ಹೊದ್ದು ರೈತರನ್ನು ಒದೆಯುವವರಲ್ಲ ಎಂಬುದಕ್ಕೆ ಅವರ ಕ್ಷೇತ್ರದ ರೈತರಿಗಾಗಿ ಅವರು ಮಾಡಿರುವ ಸೇವೆಗಳೇ ಸಾಕ್ಷಿ ನುಡಿಯುತ್ತಿವೆ. ಯಾರಾದರೂ ಬೆಳಗಾವಿ ಜಿಲ್ಲೆಯ ಕೆಲ ಕೆಲವು ರಸ್ತೆಗಳಲ್ಲಿ ಸಂಚರಿಸಿದ್ದರೆ ತಮ್ಮನ ಗಮನಕ್ಕೆ ‘ಸತೀಶ್ ಶುಗರ್ಸ್ ಲಿಮಿಟೆಡ್ ಹೆಸರಿನಲ್ಲಿ ಕಬ್ಬು ತುಂಬಿದ ಲಾರಿ ಟ್ರಾಕ್ಟರ್ ಗಳನ್ನು ಉಚಿತವಾಗಿ ತೂಕ ಮಾಡಿ ಕೊಡಲಾಗುವುದು ಎಂದು ಬೋರ್ಡ್ ಹಾಕಿದ ಅನೇಕ ಕಟ್ಟಡಗಳು ಇರುವುದು ಕಂಡು ಬಂದಿರುತ್ತದೆ.
ಇದನ್ನೂ ಓದಿ | ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲೇ ಸಾರಿಗೆ ನೌಕರ ನೇಣಿಗೆ ಶರಣು..!
ಇಡೀ ಬೆಳಗಾವಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ತುಂಬಿದ ರೈತರ ವಾಹನಗಳು ಸಂಚರಿಸುವೆಡೆ ಸ್ವತಃ ಜಾಗ ಖರೀದಿಸಿ ಅಲ್ಲಿ ವೇಬ್ರಿಡ್ಜ್ ತೂಕ ಸೇತುವೆಗಳನ್ನು ಕಟ್ಟಿಸಿ ಉಚಿತವಾಗಿ ರೈತರ ವಾಹನಗಳಿಗೆ ತೂಕ ಮಾಡಿಕೊಡವುದ ವ್ಯವಸ್ಥೆ ಮಾಡಿಸಿದ್ದಾರೆ. ಇಂತ ಅನೇಕ ತೂಕಸೇತುವೆಗಳನ್ನು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿಸಿದ್ದಾರೆ.
ತೂಕದಲ್ಲಿ ಕಾರ್ಖಾನೆಗಳಿಂದಾಗುವ ಮೋಸವನ್ನು ತಪ್ಪಿಸಲಿಕ್ಕಾಗಿ ಆ ಮೂಲಕ ರೈತರ ಶ್ರಮಕ್ಕೆ ಮೋಸವಾಗದಂತೆ ರೈತ ಪರವಾಗಿ ನಿತ್ತಿದ್ದಾರೆ. ಬೆರಳೆಣಿಕೆಯ ಬಂಡವಾಳಗಾರರನ್ನು ಎದುರುಹಾಕಿಕೊಂಡು ಜನರಿಗಾಗಿ ಮಿಡಿಯುವ ನಾಯಕರು ಈಗ ಯಾರಿದ್ದಾರೆ.? ಅದು ಸಿದ್ದರಾಮಯ್ಯ ಸತೀಶ ಜಾರಕಿಹೊಳಿ ಅಂತವರಿಗೆ ಮಾತ್ರ ಸಾಧ್ಯ.
ಘಟಾಪ್ರಭಾ ಹಿಡಕಲ್ ಡ್ಯಾಂ ನಿಂದ ಮಳೆಗಾಲಕ್ಕೂ ಮುಂಚೆಯೇ ನೀರು ಬಿಡುತ್ತಿರಲಿಲ್ಲ. ಆ ಕುರಿತು ಸರ್ಕಾರದ ಗಮನ ಸೆಳೆದು ನೀರು ಬಿಡಿಸುವ ಮೂಲಕ ರೈತರ ಕೃಷಿಯ ನೀರಡಿಕೆಯನ್ನು ನೀಗಿಸಿದ್ದಾರೆ. ಬ್ರಿಟಿಷ್ ಕಾಲದ ಧುಪದಾಳ ಬ್ಯಾರೇಜನ್ನು ದುರಸ್ಥಿ ಮಾಡಿಸಿ ಹಾಳುಬಿದ್ದ ಅದರ ಕಾಲುವೆಗಳನ್ನು ದುರಸ್ಥಿ ಮಾಡಿಸಿ ರೈತರಿಗೆ ಅನುಕೂಲ ಮಾಡಿದ್ದಾರೆ. ರೈತರ ಗದ್ದೆ ತೋಟ ರೈತರ ಊರುಗಳಿಗೆ ಮುಖ್ಯರಸ್ತೆಗಳಿಗೆ ರೈತೋತ್ಪನ್ನಗಳು ಸುಲಭದಲ್ಕಿ ಸಿಗುವಂತಾಗಲು ಸುಸಜ್ಜಿತ ರಸ್ತೆ ಕಾಮಗಾರಿಗಳನ್ನು ಮಾಡಿಸಿದ್ದಾರೆ.
ಕೋವಿಡ್ ಸಂಕಷ್ಟದ ಕಾಲದಲ್ಲಿ ರೈತರು ನೂರಾರು ಎಕರೆಯಲ್ಲಿ ಬೆಳೆದಿದ್ದ ಕಲ್ಲಂಗಡಿ ಬಾಳೆ ಮಾವಿನ ತೋಟಗಳ ಫಲವನ್ನು ಖರೀದಿಸಿ ಆ ಹಣ್ಣು ಹಂಪಲನ್ನು ನೆಡೆದು ಊರು ಸೇರುತ್ತಿದ್ದ ಕಾರ್ಮಿಕರಿಗೆ ಗುಡ್ಡ ಬೆಟ್ಟದ ಮಂಗಗಳಿಗೆ ಹಳ್ಳಿಗಳ ಬಡವರಿಗೆ ಉಚಿತವಾಗಿ ತಿನ್ನಲು ಹಂಚಿ ರೈತರಿಗೆ ಸಂತ್ರಸ್ಥರಿಗೆ ಪ್ರಾಣಿಗಳಿಗೆ ನೆರವಾದ ಮನುಷ್ಯತ್ವ ಮೇರು ವ್ಯಕ್ತಿ ಸತೀಶ್ ಜಾರಕಿಹೊಳಿ.
ಆದರೆ ಇವು ಯಾವುವನ್ನೂ ಬೊಬ್ಬೆ ಹೊಡೆದು ಹೇಳಿಕೊಂಡಿಲ್ಲ. ರೈತರಿಗಾಗಿ ನಿಸ್ವಾರ್ಥದಿಂದ ಮಾಡಿದ ಕಾಯಕದ ಕಾರಣಕ್ಕೆ ನೆರವಿಗಾದ ಕಾರಣಕ್ಕೆ ಜನತೆ ಸತೀಶ್ ಜಾರಕಿಹೊಳಿಯವರನ್ನು ‘ಸತ್ಯಪ್ಪ ಸೌಕಾರ’ ಎಂದೇ ಅಭಿಮಾನದಿಂದ ಕರೆಯುತ್ತಾರೆ. ಜನ ಹಣಮಾತ್ರಕ್ಕೆ ಸಾಹುಕಾರ್ ಎನ್ನದೆ ತಮ್ಮ ನಾಯಕನನ್ನು ಗುಣದಲ್ಲೂ ‘ಸೌಕಾರ್ರು’ ಎಂದೇ ಕರೆದು ಅಭಿಮಾನ ಮೆರೆಯುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇಂದು ಕರೆಂಟ್ ಇರಲ್ಲ
ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್‌ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್‌ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.
ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.
‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.
ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.
ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ7 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
-
ದಿನದ ಸುದ್ದಿ5 hours agoದಾವಣಗೆರೆ | ಇಂದು ಕರೆಂಟ್ ಇರಲ್ಲ


