ದಿನದ ಸುದ್ದಿ

ಪರಿಶಿಷ್ಟ ಜಾತಿಯ ಜನಾಂಗದ ಕಲ್ಯಾಣಕ್ಕಾಗಿ ಹಣ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ:ಪರಿಶಿಷ್ಟ ಜಾತಿಯ ಮಕ್ಕಳಿಗೆ ತೊಂದರೆ ಆಗಬಾರದು ಎನ್ನುವ ಸಲುವಾಗಿ ಎರಡು ವಸತಿ ಶಾಲೆಗಳು ಸುಮಾರು ರೂ. 36 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಮತ್ತು 5 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದು ಡಿಸಿಎಂ ಕಾರಜೋಳ ಹೇಳಿದರು.

ನ್ಯಾಮತಿಯಲ್ಲಿ ಶನಿವಾರ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಾಗೂ ವಿವಿಧ ಸರ್ಕಾರಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ಎಸ್.ಸಿ ಎಸ್.ಟಿ ಕಾಲೊನಿಗಳಲ್ಲಿ ಕಾಂಕ್ರೀಟ್ ರಸ್ತೆಗಳು ನಿರ್ಮಾಣ ಮಾಡಲಾಗುತ್ತಿದ್ದು, ಒಟ್ಟು 80 ಕೋಟಿಯಲ್ಲಿ ಸುಮಾರು 50 ಕೋಟಿಯಷ್ಟು ಹಣವನ್ನು ಪರಿಶಿಷ್ಟ ಜಾತಿಯ ಜನಾಂಗದ ಕಲ್ಯಾಣಕ್ಕಾಗಿ ಇವತ್ತು ಶಾಸಕರು ಹಣ ತಂದಿರುವುದು ಅತ್ಯಂತ ಹೆಮ್ಮೆ ಪಡಬೇಕಾದ ಸಂಗತಿಯಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ವೀರಶೇಖರಪ್ಪ, ಹೊನ್ನಾಳಿ ತಾ.ಪಂ ಅಧ್ಯಕ್ಷ ರಂಗಪ್ಪ, ನ್ಯಾಮತಿ ತಾ.ಪಂ ಅಧ್ಯಕ್ಷ ರವಿಕುಮಾರ್, ಹೊನ್ನಾಳಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸುರೇಶ್, ಸಾಮಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪೇಶಪ್ಪ, ಸುರೇಂದ್ರನಾಯ್ಕ್, ಉಮಾ ರಮೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ, ಜಿ.ಪಂ, ತಾ.ಪಂ ಹಾಗೂ ಎಪಿಎಂಸಿ ಸದಸ್ಯರು ಸೇರಿದಂತೆ ಮತ್ತಿತರರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version