ದಿನದ ಸುದ್ದಿ
ವಿವಿಧ ಯೋಜನೆ ಸೌಲಭ್ಯ ; ಪರಿಶಿಷ್ಟ ಪಂಗಡ ಸಮುದಾಯದ ಫಲಾನುಭವಿಗಳಿಂದ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಸೇವಾ ಕೇಂದ್ರಗಳಲ್ಲಿ ವೆಬ್‍ಸೈಟ್ https://sevasindu.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ. 29 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ಸಂ 08192-233309 ಗೆ ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಬೇಬಿ ಸುನಿತ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243