ದಿನದ ಸುದ್ದಿ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಭಾರತ ಸರ್ಕಾರದ ಬುಡಕಟ್ಟು ವುವಹಾರಗಳ ಸಚಿವಾಲಯವು 2024-25ನೇ ಸಾಲಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು. ಸ್ನಾತಕೋತ್ತರ ಪದವಿ, ಪಿಹೆಚ್‍ಡಿ, ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳು ಆಲ್‍ಲೈನ್ ಪೋರ್ಟಲ್‍ನಲ್ಲಿ https://overseas.tribal.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ.31 ರಂದು ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version