ದಿನದ ಸುದ್ದಿ
ಸದ್ಯಕ್ಕೆ ಶಾಲೆಗಳನ್ನು ತೆರೆಯುವುದಿಲ್ಲ : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಸುದ್ದಿದಿನ,ಚಾಮರಾಜನಗರ: ಕೊರೋನಾ ನಡುವೆ ಶಾಲೆ ಪ್ರಾರಂಭಿಸುವ ವಿಷಯದಲ್ಲಿ ಚರ್ಚೆ ನಡೆಯುತ್ತಿದ್ದು, ಗೊಂದಲವಿರುವ ಕಾರಣ ಯಾವ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ವತಃ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಶನಿವಾರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತೊಳಸಿಗೆರೆ ಗ್ರಾಮದಲ್ಲಿ ಅವರನ್ನು ಮಾತನಾಡಿದರು. ಶಾಲೆಗಳನ್ನು ಪ್ರಾರಂಭಿಸುವ ಕುರಿತು ಯಾವುದೇ ತೀರ್ಮಾನವನ್ನು ಕೇಂದ್ರ ತೆಗೆದಿಕೊಂಡಿಲ್ಲ . ಈ ವಿಷಯದ ಕುರಿತಾಗಿ ಸಾಕಷ್ಟು ಸಲ ಮಾದ್ಯಮಗಳಿಗೆ ಸ್ಪಷ್ಟನೆ ನೀಡಿದ್ದೇನೆ.
ಆದರೆ ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ. ಅಕ್ಟೋಬರ್ 15ರಿಂದ ಕೇಂದ್ರ ಸರ್ಕಾರ ಹಂತ ಹಂತವಾಗಿ ಶಾಲೆ ಪ್ರಾರಂಭಿಸಬಹುದೆಂದು ಅವಕಾಶ ನೀಡಿದೆ. ಆದರೆ ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಯಾವುದೇ ತೀರ್ಮಾನ ಮಾಡಿಲ್ಲ ಎಂದರು ಸ್ಪಷ್ಟಪಡಿಸಿರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243