ದಿನದ ಸುದ್ದಿ
ಶಾಲೆ ಪುನಾರಂಭ | ಕೇಂದ್ರದ ತೀರ್ಮಾನದ ನಂತರ ಯೋಚನೆ : ಸಚಿವ ಸುರೇಶ್ ಕುಮಾರ್
ಸುದ್ದಿದಿನ, ಬೆಂಗಳೂರು: ಕೇಂದ್ರ ಸರ್ಕಾರ ತೀರ್ಮಾನ ಮಾಡಿದ ನಂತರ ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭ ಮಾಡುವ ಬಗ್ಗೆ ಸರ್ಕಾರ ಸೂಕ್ತ ಹೆಜ್ಜೆ ಇಡಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳು, ಪೋಷಕರು ಸೇರಿದಂತೆ ಎಲ್ಲರೂ ಶಾಲೆ ಯಾವಾಗ ಪ್ರಾರಂಭವಾಗುತ್ತದೆ ಎಂಬ ಪ್ರಶ್ನೆ ಕೇಳುತ್ತಾರೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಆತಂಕವೂ ಇದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243