ದಿನದ ಸುದ್ದಿ

ಎಸ್ಸಿ-ಎಸ್ಟಿ ನೌಕರರ ಮುಂಬಡ್ತಿಗೆ ರಾಜ್ಯಸರ್ಕಾರ ತಡೆ

Published

on

ಸುದ್ದಿದಿನ, ಬೆಂಗಳೂರು : ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ್ದರ ಹಿನ್ನಲೆಯಲ್ಲಿ ಹಿಂಬಡ್ತಿ ಪಡೆದಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರಾಜ್ಯ ಸರ್ಕಾರದ ನೌಕರರ ಹಿತ ಕಾಯಲು ರಾಜ್ಯ ಸರ್ಕಾರವು ಜಾರಿಗೆ ತಂದಿದ್ದ ವಿಧೇಯಕಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದರ ಸಂಬಂಧ ಮುಂದಿನ ಕ್ರಮಗಳನ್ನು ಕೈಗೊಳ್ಳಬಾರದೆಂದು ರಾಜ್ಯ ಸರ್ಕಾರವು ಸಂಭಂದಿಸಿದ ಅಧಿಕಾರಿಗಳಿಗೆ ಆದೇಶನೀಡದೆ.

ಸರ್ಕಾರದ ಈ ಆದೇಶವನ್ನು ಎಲ್ಲಾ ನೇಮಕಾತಿ ಪ್ರಾಧಿಕಾರಗಳು ನಿಯಮಾನುಸಾರವಾಗಿ ಪಾಲಿಸಬೇಕು. ಈ ಸಂಬಂಧ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಹಾಗೂ ಅವರ ಆಡಳಿತಕ್ಕೊಳಪಟ್ಟಂತಹ ಎಲ್ಲಾ ಸ್ವಾಯತ್ತ ಸಂಸ್ಥೆಗಳು, ಸಾರ್ವಜನಿಕ ಉದ್ದಿಮೆಗಳು, ವಿಶ್ವವಿದ್ಯಾಲಯಗಳು, ಆಯೋಗ, ನಿಗಮ,‌ಉದ್ದಿಮೆಗಳು,‌ ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ಮತ್ತು ಸರ್ಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳಿಗೆ ಈ ಆದೇಶ ಪಾಲಿಸಲು ಸೂಚನೆ ನೀಡಲು ತಿಳಿಸಲಾಗಿದೆ.

ಮೀಸಲಾತಿಯ ಆಧಾರದ ಮೇಲೆ ಬಡ್ತಿ ಹೊಂದಿರುವಂತಹ ಸರ್ಕಾರಿ ನೌಕರರಿಗೆ ತತ್ಪರಿಣಾಮವಾದ ಜ್ಯೇಷ್ಟತೆಯನ್ನು ವಿಸ್ತರಿಸುವ ಸಂಬಂಧ ಜಾರಿಗೆ ತಂದಿದ್ದಂತಹ ಈ ಅಧಿನಿಯಮದನ್ವಯ ಕಳೆದ ಫೆ. 27ರಂದು ರಾಜ್ಯ ಸರ್ಕಾರವು ಹೊರಡಿಸಿದ್ದಂತಹ ಮಾರ್ಗಸೂಚಿಯನ್ನು ಪ್ರಶ್ನಿಸಿ ಕೆಲವರು ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್ ಈ ವಿಯವು ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ವಾರಗಳಲ್ಲಿ ಇದರ ಅಂತಿಮ ತೀರ್ಪು ನೀಡಲಾಗುತ್ತದೆ. ಹಾಗಾಗಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸ್ವೀಕರಿಸಿ ಕರ್ನಾಟಕ ಸರ್ಕಾರವು ಫೆ.27 ರಂದು ಹೊರಡಿಸಿದ್ದ ಆದೇಶಕ್ಕೆ ಮಾರ್ಚ್ 1 ರಂದು ತಡೆಯಾಜ್ಞೆಯನ್ನು ನೀಡಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version