Connect with us

ದಿನದ ಸುದ್ದಿ

ಉಚಿತ | ಮೇವಿನ ಬೀಜದ ಕಿಟ್ ವಿತರಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಹೈನು ಉತ್ಪಾದಕರನ್ನು ಪ್ರೊತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಎನ್.ಎಲ್.ಎಂ ಯೋಜನೆಯ ಅನುದಾನದಡಿ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ವತಿಯಿಂದ ಶಿಮುಲ್‍ಗೆ ರೂ. 1.20 ಕೋಟಿ ಮೊತ್ತದ ಹಸಿರು ಮೇವಿನ ಬಿತ್ತನೆ ಬೀಜಗಳ ಮಿನಿ ಕಿಟ್‍ಗಳನ್ನು ಉಚಿತವಾಗಿ ಹಂಚಿಕೆ ಮಾಡಲಾಗಿದೆ.

ಕಳೆದ ಸಾಲಿನಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದ ಹಿನ್ನೆಲೆಯಲ್ಲಿ ಮೇವಿನ ಲಭ್ಯತೆ ಕಡಿಮೆಯಾದ್ದರಿಂದ ದುಬಾರಿ ಬೆಲೆ ತೆತ್ತು ಮೇವನ್ನು ಖರೀದಿಸಿ ನಷ್ಟ ಅನುಭವಿಸಿದ ರೈತರಿಗೆ ನೆರವಾಗುವ ಉದ್ದೇಶದಿಂದ ಮುಂಗಾರು ಹಂಗಾಮು ಪ್ರಾರಂಭವಾಗುವ ಮುನ್ನ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವತಿಯಿಂದ ವಿವಿಧ ಮೇವಿನ ತಳಿಗಳ 3.5 ಕೆ.ಜಿ ಕಿರು ಪೆÇಟ್ಟಣಗಳನ್ನು (ಮಿನಿ ಕಿಟ್) ರೈತರಿಗೆ ಉಚಿತವಾಗಿ ಪೂರೈಸಲು ನಿರ್ಧರಿಸಿದೆ.

ಪ್ರತಿಯೊಬ್ಬ ಹಾಲು ಉತ್ಪಾದಕರಿಗೂ ಮೇವಿನ ಬೀಜದ ಕಿರು ಪೊಟ್ಟಣಗಳನ್ನು ವಿತರಿಸಿ ಹೆಚ್ಚು ಹಸಿರು ಮೇವು ಉತ್ಪಾದಿಸುವ ಮೂಲಕ ಉತ್ಪಾದನಾ ವೆಚ್ಚವನ್ನು ತಗ್ಗಿಸಿ ಹೈನುಗಾರಿಕೆಯನ್ನು ಲಾಭದಾಯಕ ಉದ್ಯಮವಾಗಿ ಮಾರ್ಪಡಿಸಲು ಯೋಜಿಸಲಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳ ಹಾಲು ಶೇಖರಣೆ ಆಧಾರದ ಮೇಲೆ ಮಳೆ ಆಶ್ರಿತ ರೈತರು, ನೀರಾವರಿ ಹೊಂದಿರುವ ರೈತರನ್ನು ಗುರುತಿಸಿ ಮೇವಿನ ಬೀಜದ ಮಿನಿ ಕಿಟ್‍ಗಳನ್ನು ಹಂಚಿಕೆ ಮಾಡುವಂತೆ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದೆಂದು ಶಿಮುಲ್ ವ್ಯವಸ್ಥಾಪಕರು ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು

Published

on

ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ

Published

on

ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ, ಕಮಲಾ ಹಂಪನಾ, ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

Published

on

ಸುದ್ದಿದಿನ,ಬೆಂಗಳೂರು:ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯದ 19 ನೂತನ ಎನ್‌ಡಿಎ ಸಂಸದರ ಸನ್ಮಾನದಲ್ಲಿ ಮಾತನಾಡಿದ ಅವರು ಬಿಜೆಪಿ-ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ನೂತನ ಎನ್‌ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ ಎಂದು ಹೇಳಿದರು. ಜೆಡಿಎಸ್, ಬಿಜೆಪಿಯದ್ದು, ಸಹಜ ಮೈತ್ರಿಯಾಗಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಪಾಲಿಕೆ ಚುನಾವಣೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸಜ್ಜಾಗಬೇಕಿದೆ ಎಂದು ಕರೆ ನೀಡಿದರು. ಬಿಜೆಪಿ, ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending