Connect with us

ದಿನದ ಸುದ್ದಿ

ಉಚಿತ | ಮೇವಿನ ಬೀಜದ ಕಿಟ್ ವಿತರಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಹೈನು ಉತ್ಪಾದಕರನ್ನು ಪ್ರೊತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಎನ್.ಎಲ್.ಎಂ ಯೋಜನೆಯ ಅನುದಾನದಡಿ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ವತಿಯಿಂದ ಶಿಮುಲ್‍ಗೆ ರೂ. 1.20 ಕೋಟಿ ಮೊತ್ತದ ಹಸಿರು ಮೇವಿನ ಬಿತ್ತನೆ ಬೀಜಗಳ ಮಿನಿ ಕಿಟ್‍ಗಳನ್ನು ಉಚಿತವಾಗಿ ಹಂಚಿಕೆ ಮಾಡಲಾಗಿದೆ.

ಕಳೆದ ಸಾಲಿನಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದ ಹಿನ್ನೆಲೆಯಲ್ಲಿ ಮೇವಿನ ಲಭ್ಯತೆ ಕಡಿಮೆಯಾದ್ದರಿಂದ ದುಬಾರಿ ಬೆಲೆ ತೆತ್ತು ಮೇವನ್ನು ಖರೀದಿಸಿ ನಷ್ಟ ಅನುಭವಿಸಿದ ರೈತರಿಗೆ ನೆರವಾಗುವ ಉದ್ದೇಶದಿಂದ ಮುಂಗಾರು ಹಂಗಾಮು ಪ್ರಾರಂಭವಾಗುವ ಮುನ್ನ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವತಿಯಿಂದ ವಿವಿಧ ಮೇವಿನ ತಳಿಗಳ 3.5 ಕೆ.ಜಿ ಕಿರು ಪೆÇಟ್ಟಣಗಳನ್ನು (ಮಿನಿ ಕಿಟ್) ರೈತರಿಗೆ ಉಚಿತವಾಗಿ ಪೂರೈಸಲು ನಿರ್ಧರಿಸಿದೆ.

ಪ್ರತಿಯೊಬ್ಬ ಹಾಲು ಉತ್ಪಾದಕರಿಗೂ ಮೇವಿನ ಬೀಜದ ಕಿರು ಪೊಟ್ಟಣಗಳನ್ನು ವಿತರಿಸಿ ಹೆಚ್ಚು ಹಸಿರು ಮೇವು ಉತ್ಪಾದಿಸುವ ಮೂಲಕ ಉತ್ಪಾದನಾ ವೆಚ್ಚವನ್ನು ತಗ್ಗಿಸಿ ಹೈನುಗಾರಿಕೆಯನ್ನು ಲಾಭದಾಯಕ ಉದ್ಯಮವಾಗಿ ಮಾರ್ಪಡಿಸಲು ಯೋಜಿಸಲಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳ ಹಾಲು ಶೇಖರಣೆ ಆಧಾರದ ಮೇಲೆ ಮಳೆ ಆಶ್ರಿತ ರೈತರು, ನೀರಾವರಿ ಹೊಂದಿರುವ ರೈತರನ್ನು ಗುರುತಿಸಿ ಮೇವಿನ ಬೀಜದ ಮಿನಿ ಕಿಟ್‍ಗಳನ್ನು ಹಂಚಿಕೆ ಮಾಡುವಂತೆ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದೆಂದು ಶಿಮುಲ್ ವ್ಯವಸ್ಥಾಪಕರು ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪಿಎಂ ಕಿಸಾನ್ ನಿಧಿ ಯೋಜನೆ | ರೈತರ ಖಾತೆಗಳಿಗೆ ಬರುವ ಮಂಗಳವಾರ ಹಣ ವರ್ಗಾವಣೆ

Published

on

ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುವ ಮಂಗಳವಾರ 18 ರಂದು ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಿದ್ದಾರೆ. ಕೇಂದ್ರ ಗ್ರಾಮೀಣಾಭಿವೃದ್ಧಿ, ಕೃಷಿ ಹಾಗೂ ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ವಿಷಯ ಪ್ರಕಟಿಸಿದ್ದಾರೆ.

ಅವರು, ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಹತ್ತು ವರ್ಷಗಳಲ್ಲಿ 11 ಕೋಟಿ ರೈತರ ಖಾತೆಗಳಿಗೆ 3 ಲಕ್ಷ ಕೋಟಿ ರೂಪಾಯಿಗಳನ್ನು ಯೋಜನೆಯಡಿ ವರ್ಗಾಯಿಸಲಾಗಿದೆ ಎಂದು ಹೇಳಿದರು.

ಜೂನ್ 18 ರಂದು ವಾರಾಣಸಿಯಲ್ಲಿ ನಡೆಯಲಿರುವ ಪ್ರಧಾನಿಮಂತ್ರಿಯವರ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಎಲ್ಲ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದರು.

ರೈತರ ಕಲ್ಯಾಣ ವಿಷಯಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳ ಬಗ್ಗೆ ಅಧಿಕಾರಗಳೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ ಅವರು, ಸರ್ಕಾರದ 100 ದಿನಗಳ ಕಾರ್ಯ ಯೋಜನೆಯ ಬಗ್ಗೆ ಪರಿಶೀಲನೆ ನಡೆಸಿದ್ದಾಗಿ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತೀಯ ಸೇನೆ | ವಿವಿಧ ಹುದ್ದೆಗಳಿಗೆ ಸೇರಬಸುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಭಾರತೀಯ ಸೇನೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), 3(ಬಿ) ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.

ತರಬೇತಿಗಾಗಿ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ https://bcwd.karnataka.gov.in ನಿಂದ ಪಡೆಯಬಹುದು. ದೂ.ಸಂ: ದಕ್ಷಿಣ ಕನ್ನಡ ಜಿಲ್ಲೆ : ದೂ.ಸಂ. 0824-2225078, ಉಡುಪಿ ಜಿಲ್ಲೆ 0820-2574881, ಉತ್ತರ ಕನ್ನಡ ಜಿಲ್ಲೆ : ದೂ.ಸಂ. 08382-226589ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪರಿಶಿಷ್ಟ ಪಂಗಡದ ಕಾನೂನು ಪದವೀಧರರ ವೃತ್ತಿ ತರಬೇತಿ : ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಆಡಳಿತ ನ್ಯಾಯಧೀಕರಣದಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ವೃತ್ತಿ ಕಾನೂನು ತರಬೇತಿ ನೀಡಲು ಕಾನೂನು ಪದವಿ ಹೊಂದಿದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಜಿಲ್ಲೆಗೆ 8 ಗುರಿ ನಿಗಧಿಪಡಿಸಲಾಗಿದ್ದು ಇಲಾಖೆಯ ವೆಬ್ ಸೈಟ್ https://twd.karnataka.gov.in/ ಮೂಲಕ ಜೂ.18 ರಿಂದ 31 ರವರೆಗೆ ಅರ್ಜಿ ಸಲ್ಲಿಸಿ ಸಲ್ಲಿಸಿದ ಮೂಲ ಪ್ರತಿಯೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ:45, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending