ದಿನದ ಸುದ್ದಿ

ಉಚಿತ | ಮೇವಿನ ಬೀಜದ ಕಿಟ್ ವಿತರಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಹೈನು ಉತ್ಪಾದಕರನ್ನು ಪ್ರೊತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಎನ್.ಎಲ್.ಎಂ ಯೋಜನೆಯ ಅನುದಾನದಡಿ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ವತಿಯಿಂದ ಶಿಮುಲ್‍ಗೆ ರೂ. 1.20 ಕೋಟಿ ಮೊತ್ತದ ಹಸಿರು ಮೇವಿನ ಬಿತ್ತನೆ ಬೀಜಗಳ ಮಿನಿ ಕಿಟ್‍ಗಳನ್ನು ಉಚಿತವಾಗಿ ಹಂಚಿಕೆ ಮಾಡಲಾಗಿದೆ.

ಕಳೆದ ಸಾಲಿನಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದ ಹಿನ್ನೆಲೆಯಲ್ಲಿ ಮೇವಿನ ಲಭ್ಯತೆ ಕಡಿಮೆಯಾದ್ದರಿಂದ ದುಬಾರಿ ಬೆಲೆ ತೆತ್ತು ಮೇವನ್ನು ಖರೀದಿಸಿ ನಷ್ಟ ಅನುಭವಿಸಿದ ರೈತರಿಗೆ ನೆರವಾಗುವ ಉದ್ದೇಶದಿಂದ ಮುಂಗಾರು ಹಂಗಾಮು ಪ್ರಾರಂಭವಾಗುವ ಮುನ್ನ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವತಿಯಿಂದ ವಿವಿಧ ಮೇವಿನ ತಳಿಗಳ 3.5 ಕೆ.ಜಿ ಕಿರು ಪೆÇಟ್ಟಣಗಳನ್ನು (ಮಿನಿ ಕಿಟ್) ರೈತರಿಗೆ ಉಚಿತವಾಗಿ ಪೂರೈಸಲು ನಿರ್ಧರಿಸಿದೆ.

ಪ್ರತಿಯೊಬ್ಬ ಹಾಲು ಉತ್ಪಾದಕರಿಗೂ ಮೇವಿನ ಬೀಜದ ಕಿರು ಪೊಟ್ಟಣಗಳನ್ನು ವಿತರಿಸಿ ಹೆಚ್ಚು ಹಸಿರು ಮೇವು ಉತ್ಪಾದಿಸುವ ಮೂಲಕ ಉತ್ಪಾದನಾ ವೆಚ್ಚವನ್ನು ತಗ್ಗಿಸಿ ಹೈನುಗಾರಿಕೆಯನ್ನು ಲಾಭದಾಯಕ ಉದ್ಯಮವಾಗಿ ಮಾರ್ಪಡಿಸಲು ಯೋಜಿಸಲಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳ ಹಾಲು ಶೇಖರಣೆ ಆಧಾರದ ಮೇಲೆ ಮಳೆ ಆಶ್ರಿತ ರೈತರು, ನೀರಾವರಿ ಹೊಂದಿರುವ ರೈತರನ್ನು ಗುರುತಿಸಿ ಮೇವಿನ ಬೀಜದ ಮಿನಿ ಕಿಟ್‍ಗಳನ್ನು ಹಂಚಿಕೆ ಮಾಡುವಂತೆ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದೆಂದು ಶಿಮುಲ್ ವ್ಯವಸ್ಥಾಪಕರು ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version