ದಿನದ ಸುದ್ದಿ
ಶಾಮನೂರು ಶಿವಶಂಕರಪ್ಪನವರಿಗೆ ‘ಕುಪ್ಪೂರು ಮರುಳಸಿದ್ದ ಶ್ರೀ, ಪ್ರಶಸ್ತಿ
ಸುದ್ದಿದಿನ,ದಾವಣಗೆರೆ : ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶ್ರೀ ಗುರು ಮರುಳಸಿದ್ದೇಶ್ವರ ಸ್ವಾಮಿಯವರ ಕುಪ್ಪೂರು ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಪ್ಪೂರು ಮಠದ ವತಿಯಿಂದ ನೀಡಲಾಗುವ ಕುಪ್ಪೂರು ಮರುಳಸಿದ್ದ ಶ್ರೀ ಪ್ರಶಸ್ತಿಯನ್ನು ಮಾಜಿ ಸಚಿವರು ಹಾಗೂ ಶಾಸಕರಾದ ಶಾಮನೂರು ಶಿವಶಂಕರಪ್ಪನವರಿಗೆ ಪ್ರಧಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕುಪ್ಪೂರು ಗದ್ದುಗೆ ಸಂಸ್ಥಾನ ಮಠದ ಪೀಠಾಧಿಪತಿ ಡಾ. ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಕಂದಾಯ ಸಚಿವ ಆರ್.ಅಶೋಕ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜಿ.ಸಿ. ಮಾಧುಸ್ವಾಮಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243