ದಿನದ ಸುದ್ದಿ
ಶಾಮನೂರರಿಗೆ ಕೇವಲ 92, ಉತ್ಸಾಹ ಕುಂದಿಲ್ಲ : ಜೆ.ಆರ್.ಷಣ್ಮುಖಪ್ಪ
ಸುದ್ದಿದಿನ, ಕುಕ್ಕುವಾಡ : ಶಾಸಕ ಶಾಮನೂರು ಶಿವಶಂಕರಪ್ಪಗೆ ವಯಸ್ಸು 92 ಆಗಿರಬಹುದು ಆದರೆ ಉತ್ಸಾಹ ಕುಂದಿಲ್ಲ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಜೆ.ಆರ್.ಷಣ್ಮುಖಪ್ಪ ಹೇಳಿದರು.
ಕುಕ್ಕುವಾಡದ ಸಕ್ಕರೆ ಕಾರ್ಖಾನೆಯಲ್ಲಿ ಸ್ವಸಹಾಯ ಸಂಘಗಳ ಬಹಿರಂಗ ಸಭೆಯಲ್ಲಿ ಮಹಿಳೆಯರ ಸಮಸ್ಯೆ ಆಲಿಸಿ ನಂತರ ಮಾತನಾಡಿ, ಎಲ್ಲರೂ ಶಾಮನೂರು ಶಿವಶಂಕರಪ್ಪಗೆ ವಯಸ್ಸಾಗಿದೆ ಎನ್ನುತ್ತಾರೆ. ಆದರೆ ಅವರು ಈಗಲೂ ಬೆಳಗ್ಗೆ ಎದ್ದು ಮತ ಪ್ರಚಾರಕ್ಕೆ ಹೋಗುತ್ತಾರೆ. ಈಗಾಗಲೇ 25 ವರ್ಷ ಆಡಳಿತ ನಡೆಸಿದ್ದಾರೆ. ಇದು ಅವರಿಗೆ 6 ನೇ ಚುನಾವಣೆಯಾಗಿದ್ದು, ಜನರ ಬಳಿ ಹೋಗುತ್ತಾರೆ. ಅವರನ್ನು ಗೆಲ್ಲಿಸಲು ಇಡೀ ಕುಟುಂಬ ಓಡಾಟ ನಡೆಸಿದೆ. ಬಿಜೆಪಿ ಸರಕಾರ ಇದ್ದಾಗ ದಾವಣಗೆರೆ ಜನರಿಗೆ ವ್ಯಾಕ್ಸಿನ್ ನೀಡಲಿಲ್ಲ. ಈ ಸಂದರ್ಭದಲ್ಲಿ 6 ಕೋಟಿ ವೌಲ್ಯದ ವ್ಯಾಕ್ಸಿನ್ ನನ್ನು ಜನರಿಗೆ ಉಚಿತವಾಗಿ ನೀಡಿ ಜನರ ಜೀವ ಉಳಿಸಿದರು ಎಂದರು.
ಈಗಾಗಲೇ ಬಿಜೆಪಿ ಸರಕಾರ ನಮ್ಮ ನಂದಿನಿಯನ್ನು ಅಮೂಲ್‌ನಲ್ಲಿ ವಿಲೀನ ಮಾಡಲು ಹೊರಟಿದೆ. ನಮ್ಮ ರೈತರ ಶ್ರಮ ನಂದಿನಿ ಹಾಲಿನಲ್ಲಿದೆ. ಈಗಾಗಲೇ ಬ್ಯಾಂಕ್‌ನ್ನು ವಿಲೀನಗೊಳಿಸಿದ್ದ ಕಾರಣ ಸಾಕಷ್ಟು ಜನರು ನಿರುದ್ಯೋಗಿಗಳು ಆಗಿದ್ದಾರೆ. ಬರೋಡ ಬ್ಯಾಂಕ್‌ನ್ನು ರಾಜ್ಯಕ್ಕೆ ತರುವ ಮೂಲಕ ಮೊದಲ ಭಾಗವಾಗಿ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಆದ್ದರಿಂದ ಅಭಿವೃದ್ಧಿಗೆ ಮತ ನೀಡಿ ಎಂದು ಹೇಳಿದರು.
ಕುಕ್ಕುವಾಡದ ಎಂಡಿ ಎಸ್.ಎಸ್.ಗಣೇಶ್, ಪ್ರಣಾಳಿಕೆಯನ್ನು ಬಿಜೆಪಿ ಸರಕಾರ ಬಿಡುಗಡೆ ಮಾಡಿದ್ದುಘಿ, ಕಾಂಗ್ರೆಸ್ 10 ರೂ.ನೀಡಿದ್ರೆಘಿ, ಬಿಜೆಪಿ ಎಂಟಾಣಿ ನೀಡಿದೆ. ಮೂಲ ಸೌಕರ್ಯಗಳನ್ನು ಬಗೆಹರಿಸಲಾಗುವುದು. ಇನ್ನು ಸ್ವಸಹಾಯ ಸಂಘಗಳು ಸಾಲ ಪಡೆದು ಆರ್ಥಿಕವಾಗಿ ಸಭಲಗೊಳ್ಳಿಘಿ. ಆದರೆ ಬಡ್ಡಿಗೆ ಬಿಡಬೇಡಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ನಿಮ್ಮ ಸಮಸ್ಯೆಗಳಿಗೆ ಬ್ರೇಕ್ ಬೀಳಲಿದೆ ಎಂದರು.
ಶಾಮನೂರು ಸೊಸೆ ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ನಾನು ನಮ್ಮ ಮಾವನರಿಗೆ 92 ವರ್ಷ ಆದರೆ ಅವರ ಅರ್ಧದಷ್ಟು ವಯಸ್ಸು ನನಾಗಿಲ್ಲಘಿ. ಅವರಿಗೆ ಅನುಭವ ಹೆಚ್ಚುಘಿ, ಮನೆಗೆ ಬಂದವರ ಸಂಕಷ್ಟವನ್ನು ಈಗಲೂ ಕೇಳುತ್ತಾರೆ. ಕಷ್ಟ ಬಂದಾಗ ಅವರ ಸಮಸ್ಯೆ ಬಗೆಹರಿಸುತ್ತಾರೆ. ಹೆರಿಗೆ, ಡಯಾಲಿಸಿಸ್, ಕಣ್ಣಿನಪೊರೆ ತೆಗೆಸಿಕೊಳ್ಳುವ ಬಡವರಿಗೆ ಉಚಿತ ಚಿಕಿತ್ಸೆಯನ್ನು ಶಾಮನೂರು ಶಿವಶಂಕರಪ್ಪ ಮಾಡಿದ್ದಾರೆ ಎಂದರು.
ಎಸ್‌ಎಸ್ ಗಣೇಶ್ ಸೊಸೆ ಸ್ವಾತಿ ಮಾತನಾಡಿ, ನಾನು ಈ ಮನೆಗೆ ಬಂದು ಐದು ವರ್ಷವಾಯಿತು..ಶಾಮನೂರು ಶಿವಶಂಕರಪ್ಪ ಜಿಲ್ಲೆಯಲ್ಲಿ ಎಷ್ಟು ಕೆಲಸ ಮಾಡಿದ್ದಾರೆ ಎಂಬುದು ನಿಮಗೆಲ್ಲ ಗೊತ್ತಿದೆ. ಕ್ಷೇತ್ರ ಅಭಿವೃದ್ಧಿಗೆ ಅವರ ಕೊಡುಗೆ ಅನನ್ಯವಾಗಿದೆ. ಅವರಿಗೆ ವಯಸ್ಸಾಗಿಲ್ಲ, ಈಗಲೂ ಚಿರ ಯುವಕನಂತೆ ಓಡಾಡುತ್ತಾರೆ. ಆದ್ದರಿಂದ ಉತ್ತರದಲ್ಲಿ ಎಸ್‌ಎಸ್ ಮಲ್ಲಿಕಾರ್ಜುನ್, ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಗೆಲ್ಲಿಸಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ರೇಖಾ ಗಣೇಶ್, ಅಭಿಜಿತ್, ಹದಡಿ ನಿಂಗಪ್ಪ, ಕುಕ್ಕುವಾಡ ಮಲ್ಲೇಶ್, ಬೇತೂರು ರಾಜಣ್ಣ ಇದ್ದರು. ಸುಮಾರು ಎಂಟನೂರುಕ್ಕೂ ಹೆಚ್ಚು ಸ್ವಸಹಾಯ ಸಂಘದ ಮಹಿಳೆಯರು ಇದ್ದರು. ಕಾಂಗ್ರೆಸ್‌ನಾಯಕಿ ಪ್ರಭಾ ಮಲ್ಲಿಕಾರ್ಜುನ್ ಮಹಿಳೆಯರ ಜತೆ ಕೆಲ ಕಾಲ ಸಂವಾದ ನಡೆಸಿದರು.
ಬಾರ್ ಕ್ಲೋಸ್ ಮಾಡಿ
- ಹಳ್ಳಿಗಳಲ್ಲಿ ಬಾರ್‌ಗಳು ಇದ್ದು, ದುಡಿಮೆ ಮಾಡಿದ ಹಣವನ್ನು ಎಣ್ಣೆ ಅಂಗಡಿಗೆ ಹಾಕುತ್ತಿದ್ದಾರೆ, ಆದ್ದರಿಂದ ಬಾರ್ ಕ್ಲೋಸ್ ಮಾಡ್ಸಿ, ಮನೆ, ನಿವೇಶನ ಕೊಡಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ಮಹಿಳೆಯರು ಹೇಳಿಕೊಂಡರು. ಈ ಬಗ್ಗೆ ಗಮನಹರಿಸುವುದಾಗಿ ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಮೂವರು ಸೊಸೆಯರಿಂದ ಮತ ಪ್ರಚಾರ
ಯಶಸ್ವಿ ಪುರಷನ ಹಿಂದೆ ಮಹಿಳೆ ಇರುತ್ತಾಳೆ ಎಂಬುದಕ್ಕೆ ಶಾಮನೂರು ಕುಟುಂಬದ ಮಹಿಳೆಯರು ಸಾಕ್ಷಿಯಾದರು. ಮಾವನನ್ನು ಗೆಲ್ಲಿಸಲು ಇಡೀ ಊರು ಸುತ್ತುತ್ತಿದ್ದು, ಅಭಿವೃದ್ಧಿ ಕಾರ್ಯಗಳನ್ನು ಹಿಡಿದು ಮತಪ್ರಚಾರ ಮಾಡುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ7 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ7 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ4 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ4 days agoಕವಿತೆ | ದೇವರ ಹೂವು
-
ದಿನದ ಸುದ್ದಿ6 days agoಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ2 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

