Connect with us

ದಿನದ ಸುದ್ದಿ

ಕೇಂದ್ರ ಸರ್ಕಾರದಿಂದ ನೂತನ ಹಡಗು ನೀತಿ

Published

on

ಸುದ್ದಿದಿನಡೆಸ್ಕ್:ಹಡಗು ನಿರ್ಮಾಣ ಹಾಗೂ ಹಡಗು ದುರಸ್ತಿಗಾಗಿ ಕೇಂದ್ರ ಸರ್ಕಾರ ನೂತನ ಹಡಗು ನೀತಿಯನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವಾಲಯದ ಕಾರ್ಯದರ್ಶಿ ಟಿ ಕೆ ರಾಮಚಂದ್ರನ್ ಹೇಳಿದ್ದಾರೆ.

ಬರುವ 2030ರ ವೇಳೆಗೆ ಬಂದರು ವಲಯದಲ್ಲಿ ಜಗತ್ತಿನ ಪ್ರಮುಖ 10 ರಾಷ್ಟ್ರಗಳ ಸಾಲಿಗೆ ಸೇರ್ಪಡೆಯಾಗುವ ಹಾಗೂ 2047ರ ವೇಳೆಗೆ ಜಗತ್ತಿನ 5ರಾಷ್ಟ್ರಗಳ ಸಾಲಿಗೆ ಸೇರ್ಪಡೆಯಾಗುವ ಮಹತ್ವಕಾಂಕ್ಷಿಯ ಗುರಿಯನ್ನು ಸರ್ಕಾರ ಹೊಂದಿದ್ದು, ಭಾರತೀಯ ಹಡಗು ಮಾರುಕಟ್ಟೆಗೆ ವ್ಯಾಪಕ ಬೇಡಿಕೆಯಿದೆ. 2047ರ ವೇಳೆಗೆ 20 ಲಕ್ಷ ಕೋಟಿ ರೂಪಾಯಿ ಹೂಡಿಕೆ ಆಕರ್ಷಿಸುವ ಗುರಿಹೊಂದಲಾಗಿದೆ ಎಂದು ಹೇಳಿದರು.

ಅವರು ನಿನ್ನೆ ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಬಂದರು ವಲಯದ ಭವಿಷ್ಯದ ಮುನ್ನೊಟ ಕುರಿತು ಮಾತನಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ದಿನದ ಸುದ್ದಿ

ಸಂತೆಕಲ್ಲೂರು | ಶ್ರೀ ಪೂಜ್ಯ ಮಹಾಂತ ಶಿವಾಚಾರ್ಯ 33ನೇ ಪುಣ್ಯ ಸ್ಮರಣೆ ; ಮಹಾ ರುದ್ರಭಿಷೇಕ ಅಯ್ಯಾಚಾರ ಕಾರ್ಯಕ್ರಮ

Published

on

ಸುದ್ದಿದಿನ,ಮಸ್ಕಿ:ಇಂದು ತಾಲೂಕಿನ ಸುಕ್ಷೇತ್ರ ಸಂತೆಕಲ್ಲೂರಿನಲ್ಲಿ ಪೂಜ್ಯ ಶ್ರೀ ಮಹಾಂತ ಶಿವಾಚಾರ್ಯರು ಮಹಾ ಸ್ವಾಮಿಗಳ 33ನೆಯ ಪುಣ್ಯ ಸ್ಮರಣೆ ಹಾಗೂ ಜಂಗಮ ಸಮಾಜದ ಓಟುಗಳಿಗೆ ಅಯ್ಯಾಚಾರ ಕಾರ್ಯಕ್ರಮ.

ಶ್ರೀಗಳ ಕತೃ ಗದ್ದಿಗೆ ಮಹಾ ರುದ್ರಭಿಷೇಕ ವಿಶೇಷ ಪೂಜೆ ಹಾಗೂ ವಿಶೇಷ ಕಾರ್ಯಕ್ರಮಗಳು ಹಿರೇಮಠದಲ್ಲಿ ಜರುಗುವವು ಈ ಕಾರ್ಯಕ್ರಮಕ್ಕೆ ಜಂಗಮ ಸಮಾಜದ ಬಂಧುಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಿಷ್ಯಂದರು ಶ್ರೀಗಳ ಪೂಜ್ಯಶ್ರೀ ಮಹಾಂತ ಶಿವಾಚಾರ್ಯರು ದೇವರು ಮಹಾಂತನ ಮಠ ಸಂತೆಕಲ್ಲೂರಿನಲ್ಲಿ ಬೆಳಗ್ಗೆ ವಿಶೇಷ ಪೂಜಾ ಕಾರ್ಯಕ್ರಮಗಳೊಂದಿಗೆ ವಿವಿಧ ಮಠಾಧೀಶರು ಪೂಜ್ಯರು ಹಾಗೂ ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಶ್ರೀ ಶರಣ ಬಸವರಾಜ್ ಸ್ವಾಮಿ ಹಿರೇಮಠ ಕಾರಲ್ಕುಂಟೆ ಲಿಂಗಸೂರ್ ಅವರು ಶರಣರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೀವು ಬನ್ನಿ ಬರುವರನ್ನು ಕರೆತನ್ನಿ ಶ್ರೀಗಳ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ 173 ಡೆಂಘಿ ಪ್ರಕರಣಗಳು

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 173 ಡೆಂಘಿ ಪ್ರಕರಣಗಳು ದೃಢಪಟ್ಟಿದ್ದು, ಹತೋಟಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.

ಕಳೆದ ತಿಂಗಳ ಅಂತ್ಯಕ್ಕೆ 74 ಇದ್ದ ಡೆಂಘಿ ಪ್ರಕರಣಗಳ ಸಂಖ್ಯೆ ಜುಲೈ ಮೊದಲ ವಾರದಲ್ಲಿ 173ಕ್ಕೆ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಲಾರ್ವಾ ಸಮೀಕ್ಷೆಯನ್ನು ಚುರುಕುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಆಶಾ, ಅಂಗನವಾಡಿ ಮತ್ತು ಸ್ವ ಸಹಾಯ ಗುಂಪುಗಳ ಮಹಿಳಾ ಸದಸ್ಯೆಯರನ್ನು ಲಾರ್ವಾ ಸಮೀಕ್ಷೆಗೆ ಬಳಕೆ ಮಾಡಿಕೊಳ್ಳಲಾಗಿದ್ದು, ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡೆಂಘಿ ನಿಯಂತ್ರಣ ; ಗ್ರಾಮ ಪಂಚಾಯತಿಗಳಿಗೆ ಜವಾಬ್ದಾರಿ ಸಚಿವ ಪ್ರಿಯಾಂಕ್ ಖರ್ಗೆ

Published

on

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.

ಕುಡಿಯುವ ನೀರಿನ ಸರಬರಾಜು ಟ್ಯಾಂಕ್ ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.

ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಹಾಗೂ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸಬೇಕು.

ಸಾರ್ವಜನಿಕ ಸ್ಥಳಗಳು, ರಸ್ತೆಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು. ಎಳನೀರು ಮಾರಾಟಗಾರರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಬೇಕು ಎಂದು ಸೂಚಿಸಿದ್ದಾರೆ.

ಆರೋಗ್ಯ ಸಿಬ್ಬಂದಿ ಜೊತೆಗೆ ಗ್ರಾಮ ಪಂಚಾಯತಿಗಳ ಸದಸ್ಯರು, ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಘಿ ನಿಯಂತ್ರಣಕ್ಕೆ ಆರೋಗ್ಯ ಶಿಕ್ಷಣದ ಮೂಲಕ ಅರಿವು ಮೂಡಿಸುವಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending