ದಿನದ ಸುದ್ದಿ
ಶಿರೂರು ಗುಡ್ಡ ಕುಸಿತ ಪ್ರಕರಣ : ಮೂವರು ಪತ್ತೆಯಾಗಿಲ್ಲ
ಸುದ್ದಿದಿನಡೆಸ್ಕ್:ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಪತ್ತೆ ಕಣ್ಮರೆಯಾದವರ ಹುಡುಕಾಟಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ಹಾಲಿ ಕಾರ್ಯಾಚರಣೆ ಬಗ್ಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿ ಪ್ರಿಯ ಅವರಿಂದ ಮಾಹಿತಿ ಪಡೆದರು.ದುರ್ಘಟನೆಯಲ್ಲಿ ನಾಪತ್ತೆಯಾದ ಸ್ಥಳೀಯರಾದ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಹಾಗೂ ಕೇರಳದ ಚಾಲಕ ಅರ್ಜುನ್ ಅವರನ್ನು ಶೀಘ್ರ ಪತ್ತೆ ಮಾಡುವಂತೆ ರಕ್ಷಣಾ ತಂಡಕ್ಕೆ ಮನವಿ ಮಾಡಿದರು.
ನಾಪತ್ತೆಯಾದ ಜಗನ್ನಾಥ ನಾಯ್ಕ ಅವರ ಮನೆಗೆ ಸಂಸದರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಶಿರೂರು ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ರೂಪಾಲಿ ನಾಯ್ಕ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243