Connect with us

ರಾಜಕೀಯ

ಬಾಬಾ ಸಾಹೇಬರು ಕೊಟ್ಟ ಸಂವಿಧಾನವೇ ನನಗೆ ಪರಮಧರ್ಮ : ಸಿದ್ದರಾಮಯ್ಯ

Published

on

ಸುದ್ದಿದಿನ ಡೆಸ್ಕ್ : ಚಾಮರಾಜನಗರದಲ್ಲಿ ಶನಿವಾರ ನಳಂದ ಜ್ಞಾನ ಮತ್ತು ಅಧ್ಯಯನ ಕೇಂದ್ರ ಹಾಗೂ ಬೌದ್ಧ ವಿಶ್ವವಿದ್ಯಾಲಯದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು ಮಾಜಿ ಸಿಎಂ ಸಿದ್ದರಾಮಯ್ಯ.

ನಂತರ ಮಾತನಾಡಿದ ಅವರು ದಾಸ್ಯ ಮನೋಭಾವದಿಂದ ಹೊರಬಂದರೆ ಮಾತ್ರ ಬುದ್ಧ, ಅಂಬೇಡ್ಕರರಿಗೆ ಗೌರವ ಸಲ್ಲಿಸಲು ಸಾಧ್ಯ.ಯಾರು ಏನಾದರೂ ಅಂದುಕೊಳ್ಳಲಿ, ನನ್ನ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿ ಕೆಲಸ ಮಾಡಿದ್ದೇನೆ. ಬಾಬಾ ಸಾಹೇಬರು ಕೊಟ್ಟ ಸಂವಿಧಾನವೇ ನನಗೆ ಪರಮಧರ್ಮ. ಸಂವಿಧಾನಕ್ಕೆ ಬದ್ಧನಾಗಿ ನಡೆದ ಸಂತೃಪ್ತಿ ನನ್ನಲ್ಲಿದೆ ಎಂದರು.

ಖಾವಿ ಹಾಕಿಕೊಂಡವರೆಲ್ಲರೂ ಸನ್ಯಾಸಿಗಳಾಗುವುದಿಲ್ಲ. ಎಲ್ಲವನ್ನೂ ತ್ಯಜಿಸಿದವರು ಸನ್ಯಾಸಿಗಳಾಗುತ್ತಾರೆ.
ಈ ಹಿಂದೆ ಲಿಂಗಾಯತ ಧರ್ಮ ಮಾಡಿ ಎಂದು ನನಗೆ ಮನವಿ ಮಾಡಿದರು. ನಾನು ಪರಿಶೀಲನೆಗೆ ಕಳಿಸಿಕೊಟ್ಟೆ. ಲಿಂಗಾಯತ ಮತ್ತು ಬಸವ ತತ್ವ ಅನುಸರಿಸುವವರು ಲಿಂಗಾಯತ ಧರ್ಮೀಯರು ಅಂತ ವಾದಿಸಿದವರು ಅವರು. ಆದರೆ ನನ್ನ ವಿರುದ್ಧ ಅಪಪ್ರಚಾರ ಮಾಡಿದರು ಎಂದು ಹೇಳಿದರು.

ನಾವು ನಮ್ಮ ಸಮಾಜದಲ್ಲಿ ಮನುಷ್ಯರಾಗಿ ಬದುಕುತ್ತಾ ಇರಲಿಲ್ಲ. ಭಾರತದಲ್ಲಿ ಬೇರೆ ಬೇರೆ ಧರ್ಮ ಹುಟ್ಟಿಕೊಂಡಿದ್ದು ಅದಕ್ಕಾಗಿಯೇ. ಸಮಾಜದಲ್ಲಿ ಅಸಮಾನತೆ ಹಾಗೂ ತಾರತಮ್ಯ ಇತ್ತು. ಅದನ್ನು ಸರಿಪಡಿಸಲು ಬೌದ್ಧ ಧರ್ಮ ಸೇರಿದಂತೆ ಹಲವು ಧರ್ಮಗಳು ಭಾರತದಲ್ಲಿ ಹುಟ್ಟಿಕೊಂಡವು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.

ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.

ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.

ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.

ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.

ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.

ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಅಲ್ಲದೆ, ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಜಮೀನು ಮಂಜೂರು ಆಗಿ ಪೋಡಿ ಆಗದೇ ಪ್ರತ್ಯೇಕ ಪಹಣಿ ಬರದೇ ಇರುವುದರಿಂದ ಅಂತಹವುಗಳನ್ನು ಗೈರು ವಿಲೇ ಕಡತವನ್ನು ಮಾಡಲಾಗಿದ್ದು, ಸುಮಾರು 4000 ಜನರಿಗೆ ಈ ಗೈರು ವಿಲೇ ಕಡತವನ್ನು ನೀಡಲಾಗಿದೆ. ರಾಜ್ಯದಲ್ಲಿ ನಮ್ಮ ಜಿಲ್ಲೆಯೂ 3ನೇ ಸ್ಥಾನವನ್ನು ಹೊಂದಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ9 hours ago

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್...

ದಿನದ ಸುದ್ದಿ1 week ago

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಫೆ.23) ರಂದು ನಗರದ...

ದಿನದ ಸುದ್ದಿ1 week ago

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ,...

ದಿನದ ಸುದ್ದಿ1 week ago

ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ

ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು...

ದಿನದ ಸುದ್ದಿ2 weeks ago

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ...

ದಿನದ ಸುದ್ದಿ2 weeks ago

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು. ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ...

ದಿನದ ಸುದ್ದಿ2 weeks ago

ಏ.1 ರಿಂದ 2026ರ ಡಿಜಿಟಲ್ ಜನಗಣತಿ

ಸುದ್ದಿದಿನ,ದಾವಣಗೆರೆ :2026ರ ಜನಗಣತಿ ಪ್ರಕ್ರಿಯೆ ಏಪ್ರಿಲ್ 1 ರಿಂದ ಆರಂಭವಾಗಲಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸಾರ್ವಜನಿಕರು ಆನ್‌ಲೈನ್ ಮೂಲಕ ಸ್ವಯಂ ದೃಢೀಕರಣ...

ದಿನದ ಸುದ್ದಿ2 weeks ago

ದುರ್ಗಾಂಬಿಕ ಜಾತ್ರೆ ; ಫ್ಲೆಕ್ಸ್ ಹಾವಳಿ ವಿರುದ್ಧ ಕಠಿಣ ಕ್ರಮ

ಸುದ್ದಿದಿನ,ದಾವಣಗೆರೆ:ದುರ್ಗಾಂಬಿಕಾ ಜಾತ್ರೆಯ ಸಂದರ್ಭದಲ್ಲಿ ನಗರದ ಪರಿಸರ ಮಾಲಿನ್ಯಕ್ಕೆ ಧಕ್ಕೆ ತರುವಂತೆ ಅನಧಿಕೃತ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ‘ಡಿ ಫಿಗರ್‌ಮೆಂಟ್ ಆಕ್ಟ್’ ಅಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಎಫ್‌ಐಆರ್ ದಾಖಲಿಸಲಾಗುವುದು ಎಂದು...

ದಿನದ ಸುದ್ದಿ2 weeks ago

ಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ನಿವಾರಿಸಿ ಫಲಿತಾಂಶ ಸುಧಾರಣೆ ಮಾಡುವ ನಿಟ್ಟಿನಲ್ಲಿ...

ದಿನದ ಸುದ್ದಿ2 weeks ago

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

ಸುದ್ದಿದಿನ,ದಾವಣಗೆರೆ:ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯು ಫೆ. 22 ರಿಂದ 25 ರವರೆಗೆ 3 ದಿನಗಳ ಕಾಲ ನಡೆಯಲಿದ್ದು, ಭಕ್ತಿಪೂರಕವಾಗಿ ವಿಜೃಂಭಣೆಯಿಂದ ನಡೆಯಲು ಕ್ರಮವಹಿಸಲಾಗಿದೆ, ಜಾತ್ರೆ ಸಮಯದಲ್ಲಿ...

Trending