ದಿನದ ಸುದ್ದಿ
ನಿಮ್ಮ ಪ್ರಶ್ನೆಗೆ ಉತ್ತರಿಸಲು ‘ನಾಳೆ ಟ್ವಿಟರ್ ನಲ್ಲಿ ಲೈವ್’ ಬರಲಿದ್ದೇನೆ ; ಸಂವಾದದಲ್ಲಿ ಭಾಗವಹಿಸಿ : ಸಿದ್ದರಾಮಯ್ಯ

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆ ರಂಗೇರಿರುವ ಈ ಸಂಧರ್ಭದಲ್ಲಿ, ರಾಜಕೀಯವಲಯದಲ್ಲಿ ಎಲ್ಲಿಲ್ಲದ ಚಟುವಟೆಕೆ ಗರಿಗೆದರಿದೆ. ಪಕ್ಷಗಳ ನಾಯಕರು ತಮ್ಮವಿರೋಧಿ ಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಈ ಚುನಾವಣಾ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಖಾತೆಯ ಮೂಲಕ ನಾಳೆ ಮಾರ್ಚ್ 26 (ನಾಳೆ) ನೇರ ಪ್ರಸಾರದಲ್ಲಿ ಮಾತುಕತೆ ಗೆ ಬರಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಆ ಟ್ವೀಟ್ ಹೀಗಿದೆ, “ಮಾರ್ಚ್ 26 ರಂದು ಮಧ್ಯಾಹ್ನ 2:30ಕ್ಕೆ ನಾನು ಟ್ವಿಟ್ಟರ್ ಲೈವ್ನಲ್ಲಿ ನಿಮ್ಮೊಂದಿಗೆ ಸಂವಾದ ನಡೆಸಲಿದ್ದೇನೆ.
ನಿಮ್ಮ ಪ್ರಶ್ನೆಗಳನ್ನು #ಸಿದ್ದರಾಮಯ್ಯನವರಿಗೆನಿಮ್ಮಪ್ರಶ್ನೆ ಎಂಬ ಹ್ಯಾಷ್ಟ್ಯಾಗ್ನೊಂದಿಗೆ ಕೇಳುವುದರ ಮೂಲಕ ಸಂವಾದದಲ್ಲಿ ಭಾಗವಹಿಸಿ.
ಧನ್ಯವಾದಗಳು” ಎಂದು ಹೇಳಿದ್ದಾರೆ.
I will be live on twitter tomorrow from 2.30PM
Tweet your questions with the hashtag #AskSiddaramaiah@INCKarnataka pic.twitter.com/oq9KsUsLjf
— Siddaramaiah (@siddaramaiah) March 25, 2019
ಮಾರ್ಚ್ 26 ರಂದು ಮಧ್ಯಾಹ್ನ 2:30ಕ್ಕೆ ನಾನು ಟ್ವಿಟ್ಟರ್ ಲೈವ್ನಲ್ಲಿ ನಿಮ್ಮೊಂದಿಗೆ ಸಂವಾದ ನಡೆಸಲಿದ್ದೇನೆ.
ನಿಮ್ಮ ಪ್ರಶ್ನೆಗಳನ್ನು #ಸಿದ್ದರಾಮಯ್ಯನವರಿಗೆನಿಮ್ಮಪ್ರಶ್ನೆ ಎಂಬ ಹ್ಯಾಷ್ಟ್ಯಾಗ್ನೊಂದಿಗೆ ಕೇಳುವುದರ ಮೂಲಕ ಸಂವಾದದಲ್ಲಿ ಭಾಗವಹಿಸಿ.
ಧನ್ಯವಾದಗಳು. pic.twitter.com/NAsNjW5HxT— Siddaramaiah (@siddaramaiah) March 25, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಿವರ
ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಫಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.
ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟು ನಂತರದ ದಿನಗಳಲ್ಲಿ ಲಾಭಾಂಶವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಒಟ್ಟು ಸಾರ್ವಜನಿಕರಿಂದ 31.50,000/- ರೂಗಳನ್ನು ಕಟ್ಟಿಸಿಕೊಂಡು 61.62.800/- ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು ರೂ.37,33,500ಗಳನ್ನು 6 ತಿಂಗಳ ಲಾಭಾಂಶದ ಹಣವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಮೋಸ ಮಾಡಿರುತ್ತಾರೆ ಎಂದು ಹರೀಶ.ಕೆ ತಂದೆ ಉಮೇಶಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.
ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ರವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
