ರಾಜಕೀಯ

ಯಡಿಯೂರಪ್ಪ ‘ ನಾನು ಸಿಎಂ ಆಗ್ತೇನೆ’ ಅಂದ ಕೂಡಲೇ ಜನ ನಗೋಕೆ ಶುರುಮಾಡಿದ್ದಾರೆ : ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಬಿಜೆಪಿಗೆ 104 ಸೀಟು ಬಂದಾಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿ, ಆ ನಂತರ ಮೂರೇ ದಿನಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಷ್ಟಾದರೂ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹಲವು ಬಾರಿ ಹೇಳಿದ್ದಾರೆ. ಈಗೀಗ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತೇನೆ ಎಂದ ತಕ್ಷಣ ಜನ ನಗಲು ಆರಂಭ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಭೆ ಸಮಾರಂಭಗಳಲ್ಲಿ ಜನರು ನೀವೆ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಕೂಗುತ್ತಾರೆ, ಆಗ ಮತ್ತೆ ತಾವೆಲ್ಲ ನಮ್ಮ‌ ಪಕ್ಷಕ್ಕೆ ಬಹುಮತ ನೀಡಿದರೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಅವರಿಗೆ ಹೇಳಿದ್ದೇನೆ. ಅಭಿಮಾನದಿಂದ ನೀವು ಮುಖ್ಯಮಂತ್ರಿಯಾಗಿ ಎಂದು ಹೇಳುವವರ ಬಾಯಿ ಮುಚ್ಚಿಸಲಾಗುತ್ತದೆಯೇ? ಎಂದಿದ್ದಾರೆ.

ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ಇದ್ದಾರೆ. ಈಗ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಅಪ್ರಸ್ತುತ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version