ದಿನದ ಸುದ್ದಿ

ಯಡಿಯೂರಪ್ಪ ನುಡಿದಂತೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ : ಸಿದ್ದರಾಮಯ್ಯ

Published

on

ಸುದ್ದಿದಿನ ಡೆಸ್ಕ್ : ಆಡಿಯೋ ಟೇಪ್‌ನಲ್ಲಿದ್ದ ಧ್ವನಿ ನನ್ನದೆನ್ನುವುದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಘೋಷಿಸಿದ್ದ ಯಡಿಯೂರಪ್ಪ ಅವರು ಮೊದಲು ನಿವೃತ್ತಿ ಘೋಷಿಸಿ ನುಡಿದಂತೆ ನಡೆಯಲಿ‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಜಿಲ್ಲೆಯ ಬಾದಾಮಿ ತಾಲೂಕಿನ ಚಿಕ್ಕಮುಚ್ಚಳಗುಡ್ಡ ಹೆಲಿಪ್ಯಾಡ್ ನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಕೊಟ್ಟಮಾತಿನಂತೆ ನಡೆದುಕೊಂಡು, ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಕಿಡಿಕಾರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version