ರಾಜಕೀಯ
‘ಚೌಕೀದಾರ್ ಅಲ್ಲ ಮೈ ಪಾಗಲ್’ ಎಂದು ಬಿಜೆಪಿಗರು ಘೋಷಿಸಿಕೊಳ್ಳಿ : ಸಿದ್ದರಾಮಯ್ಯ ಕಿಡಿ

ಸುದ್ದಿದಿನ,ಬೆಂಗಳೂರು : ವಿನಾಶಕಾಲೇ ವಿಪರೀತ ಬುದ್ದಿ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್‌ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ನರೇಂದ್ರ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ. ಅವರು ಈ ಕಾಯಿಲೆಯಿಂದ ಶೀಘ್ರ ಗುಣಮುಖರಾಗಲಿ ಎಂದು ಮೋದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಮೋದಿ ಹಾಗೂ ಕೆ.ಎಸ್.ಈಶ್ವರಪ್ಪ ಅವರ ನೀಚತನದ ಹೇಳಿಕೆಗಳನ್ನುದೇಶಿಸಿ ಟ್ವೀಟ್ ಮಾಡಿರು ಅವರು, ‘ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ’. ಸೋಲಿನ ಭೀತಿಯಲ್ಲಿರುವ ನರೇಂದ್ರ ಮೋದಿ ಯವರಿಂದ ಈಶ್ವರಪ್ಪನವರ ವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಬಿಜೆಪಿ ನಾಯಕರೆಲ್ಲ ಘೋಷಿಸಿಕೊಳ್ಳುವುದು ಒಳ್ಳೆಯದು ಎಂದು ಕಿಡಿಕಾರಿದ್ದಾರೆ.
Mr. @rajeev_mp,
Think before you tweet. I am not like your Chor @narendramodi to eat biryani with the PM of our enemy country & also not like you to compromise on ethics to please your bosses.
It is better to lead a life of Tipu Sultan than like a slave of your bosses like you. https://t.co/wBLWnUOmMD
— Siddaramaiah (@siddaramaiah) May 5, 2019
Mr. @narendramodi,
You pat your own back for others' achievements but will you also take the responsibility for your cabinet min' incapabilities.
Hundreds of students in Karnataka may not be able to take up NEET because of delay in the train services.
1/2— Siddaramaiah (@siddaramaiah) May 5, 2019
Modi Ji,
The battle is over. Your Karma awaits you. Projecting your inner beliefs about yourself onto my father won’t protect you.
All my love and a huge hug.
Rahul
— Rahul Gandhi (@RahulGandhi) May 5, 2019
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.
ವಿಧಾನಸಭೆಯಲ್ಲಿ ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಒಳಗೊಂಡ ಮೆಗಾ ಡೈರಿ ಆರಂಭಿಸಲು ನನ್ನ ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿಯಲ್ಲಿ ಭೂಮಿ ಖರೀದಿಸಿದ್ದೇವೆ. ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಿ ಡೈರಿ ಆರಂಭಿಸಿದರೆ ಈ ಭಾಗದ ರೈತರು ಆರ್ಥಿಕವಾಗಿ ಸಬಲರಾಗಲಿದ್ದಾರೆ ಎಂದು ಸದನದ ಗಮನ ಸೆಳೆದರು.
ಹೈನುಗಾರಿಕೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಸಬ್ಸಿಡಿ ಕೊಡುವುದನ್ನು ಶೇ.75ರಷ್ಟು ಹೆಚ್ಚಳ ಮಾಡಿದರೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದರು.
ಮಧ್ಯ ಕರ್ನಾಟಕದ ಕೇಂದ್ರ ಬಿಂದು, ಹಿಂದುಳಿದ ಜಿಲ್ಲೆ ದಾವಣಗೆರೆ. ಅದರಲ್ಲೂ ಅತೀ ಹಿಂದುಳಿದ ಮೀಸಲು ಕ್ಷೇತ್ರ ಮಾಯಕೊಂಡ. ಸಿರಿಗೆರೆ ತರಳಬಾಳು ಜಗದ್ಗುರುಗಳ ಹೋರಾಟದ ಫಲವಾಗಿ ನನ್ನ ಕ್ಷೇತ್ರದಲ್ಲಿ 22 ಕೆರೆಗಳ ಯೋಜನೆ ಜಾರಿಗೊಂಡು ಎಲ್ ಅಂಡ್ ಟಿ ಕಂಪನಿ ಕಾಮಗಾರಿ ನಡೆಸಿತ್ತು. ಕಳಪೆ ಕಾಮಗಾರಿಯಿಂದ 100 ಹಳ್ಳಿಗಳಿಗೆ ಕುಡಿಯುವ ನೀರು, ನೀರಾವರಿ ಕಲ್ಪಿಸಬೇಕೆಂಬ ಉದ್ದೇಶ ಈಡೇರಿಲ್ಲ. ಪುನಃ ಹೊಸ ಪೈಪ್‌ಲೈನ್ ಕಾಮಗಾರಿಗೆ ಹಣ ನೀಡಿ ಕಾಮಗಾರಿ ಆರಂಭಿಸುವAತೆ ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ನನ್ನ ಕ್ಷೇತ್ರದಲ್ಲಿ ಹೆಚ್ಚು ಗುಡ್ಡಗಾಡು ಪ್ರದೇಶ ಹೊಂದಿದ್ದು, ಈ ಪ್ರದೇಶಗಳಲ್ಲಿ ಅತೀ ಹೆಚ್ಚು ಕೆರೆಗಳನ್ನು ನಿರ್ಮಾಣ ಮಾಡಿದರೆ ಜನಜಾನುವಾರುಗಳಿಗೆ ಕುಡಿಯುವ ನೀರು, ಅಂತರ್ಜಲ ಮಟ್ಟ ವೃದ್ಧಿಗೆ ಅನುಕೂಲವಾಗುತ್ತದೆ. ಅಲ್ಲದೇ ಬ್ರಿಟಿಷರು ನಿರ್ಮಿಸಿದ ಕೆರೆ ಇದೆ. ಅದನ್ನು ಜೀರ್ಣೋದ್ಧಾರ ಮಾಡಿದರೆ ಇಡೀ ಪಕ್ಷಿ ಸಂಕುಲ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದು ಸದನ ಗಮನ ಸೆಳೆದರು.
ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮಗಳಿಗೆ ಅನೇಕ ಸೌಲಭ್ಯ ಒದಗಿಸಲು ಅನುದಾನದ ಕೊರತೆ ಇದೆ. ಹೆಚ್ಚಿನ ಅನುದಾನ ನೀಡಬೇಕು. ಎಸ್ಸಿ-ಎಸ್ಟಿ ಸಮುದಾಯ ಆರ್ಥಿಕವಾಗಿ ಸಬಲರಾಗಲು ಭೂಒಡೆತನ ಯೋಜನೆ ಜಾರಿಗೊಳಿಸಿದ್ದು, ಕ್ಷೇತ್ರಕ್ಕೆ ಕೇವಲ ಒಂದೇ ಕೊಟ್ಟರೆ ಸಾಧ್ಯವಾಗುವುದಿಲ್ಲ. ಇದಕ್ಕೆ ಹೆಚ್ಚು ಒತ್ತು ಕೊಡಬೇಕು. ಖಾಸಗಿ ಕಾಲೇಜುಗಳಲ್ಲಿ ಡಿಪ್ಲೊಮಾ, ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್ನಲ್ಲಿ ಅಭ್ಯಾಸ ಮಾಡುವ ಎಸ್ಸಿ-ಎಸ್ಟಿ ಮಕ್ಕಳಿಗೆ 2013-18ರಲ್ಲಿ ಹಾಸ್ಟೆಲ್ ಸೌಲಭ್ಯ ಇತ್ತು, ಈಗ ಇಲ್ಲ. ಕೂಡಲೇ ಈ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.
ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಹಗಲು ದರೋಡೆ ಮಾಡಲಾಗುತ್ತಿದೆ. ಹೊರ ಗುತ್ತಿಗೆ ತೆಗೆದು ನೇರವಾಗಿ ನೇಮಕಾತಿ ಮಾಡಿಕೊಂಡರೆ ಅವರ ಬದುಕು ಉಜ್ವಲವಾಗುತ್ತದೆ. ಶೋಷಿತ ಸಮುದಾಯಗಳಿಗೆ ತ್ವರಿತ ನ್ಯಾಯ ಒದಗಿಸಲು ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ರಾಜ್ಯದಲ್ಲಿ 33 ವಿಶೇಷ ಪೊಲೀಸ್ ಠಾಣೆ ತೆರೆಯಲು ಕ್ರಮ, ಅಲ್ಲದೇ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ 2 ಕೋಟಿ ಮೀಸಲು, ಅದರಂತೆ ಒಬಿಸಿ, ಅಲ್ಪಸಂಖ್ಯಾತರಿಗೂ 2 ಕೋಟಿ ಮೀಸಲಿಡುವ ಮೂಲಕ ರೈತರು, ಕಾಯಕ ಜೀವಿಗಳು, ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್‌ಸಿಪಿ-ಎಸ್‌ಟಿಪಿ ಯೋಜನೆಯಡಿ 48,018 ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.
- ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ
ಮಳೆಗಾಲದಲ್ಲಿ ತುಂಗಾ ಜಲಾಯಶದಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸಿ ಅಪರ್ ಭದ್ರಾ ಯೋಜನೆ ನೀರು ನೀಡುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ. ಇಲ್ಲದಿದ್ದರೆ, ನಮ್ಮ ಭಾಗದ ರೈತರಿಗೆ ಅನಾನುಕೂಲವಾಗಲಿದೆ. ಕೂಡಲೇ ಸರ್ಕಾರ ಈ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು. ರಾಗಿ, ಭತ್ತ, ತೊಗರಿ ಬೆಂಬಲ ಬೆಲೆಯಡಿ ಖರೀದಿಸಿದಂತೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್ ಪಾರ್ಸಿ ಧರ್ಮದವರಿಗೆ 75% ಸ್ಥಾನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 25% ಸ್ಥಾನಗಳು ಮೀಸಲಾಗಿವೆ.ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://sevasindhuservices.karnataka.gov.in/
ಪ್ರವೇಶ ಪಡೆಯಲು ಅರ್ಹತೆಗಳು
- 05 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಪೋಷಕರ ಆದಾಯದ ಮಿತಿ ಎಸ್.ಸಿ/ಎಸ್.ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ
- 1 ಲಕ್ಷ ರೂ.ಗಳು ಮತ್ತು ಅಲ್ಪಸಂಖ್ಯಾತರಿಗೆ 2.5ಲಕ್ಷ ರೂ.ಗಳು ಮತ್ತು ಹಿಂದುಳಿದ ವರ್ಗದವರಿಗೆ 44500/- ರೂ.ಗಳಿಗೆ ಮೀರಿರಬಾರದು.
ವಸತಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳು
- ಆಯ್ಕೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 12 ತರಗತಿಯವರೆಗೆ ಉಚಿತ ಶಿಕ್ಷಣ.
- ಉಚಿತ ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್, ಹಾಸಿಗೆ ಹೊದಿಕೆ ಜೊತೆಗೆ ಉತ್ತಮ ಮೂಲ ಸೌಲಭ್ಯ ಒದಗಿಸಲಾಗುವುದು.
- ಸುಸಜ್ಜಿತ ಕೊಠಡಿ ಹಾಗೂ ವಸತಿ ನಿಲಯಗಳು, ವಿದ್ಯುತ್ ವ್ಯವಸ್ಥೆ, 24×7 ಬಿಸಿ ನೀರಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ.
- ನುರಿತ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಭೋದನೆ, ಪ್ರತಿ ವಿಷಯಕ್ಕೆ ಸುಸಜ್ಜಿತ ಪ್ರಯೋಗಾಲಯ ಸೌಲಭ್ಯ ಹಾಗೂ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಇದೆ.
- ಉಚಿತ ವಸತಿ ಮತ್ತು ಭೋಜನ ವ್ಯವಸ್ಥೆ ಇದೆ. ಜೊತೆಗೆ 24×7 CCTV ನಿರೀಕ್ಷಣೆಯಲ್ಲಿ ಇರುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ

ಸುದ್ದಿದಿನಡೆಸ್ಕ್:ಭಾರತದ 6 ಮಹತ್ವದ ಐತಿಹಾಸಿಕ ಸ್ಥಳಗಳು ಹಾಗೂ ಹೆಗ್ಗುರುತುಗಳು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ, ಸೇರ್ಪಡೆಗೊಂಡಿವೆ. ಇತ್ತೀಚೆಗೆ ಚಕ್ರವರ್ತಿ ಅಶೋಕನ ಶಿಲಾ ಶಾಸನಗಳು ಈ ಮಹತ್ವದ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
ಉತ್ತರ ಕರ್ನಾಟಕ ಭಾಗದಲ್ಲೂ ಲಭ್ಯವಿರುವ, ಮಹತ್ವದ ಶಿಲಾ ಶಾಸನಗಳ ಬಗ್ಗೆ ಪ್ರದೇಶ ಸಮಾಚಾರಕ್ಕಾಗಿ ಮಾಹಿತಿ ನೀಡಿದ್ದಾರೆ, ಹಿರಿಯ ಇತಿಹಾಸ ಸಂಶೋಧಕ ಪ್ರೊಫೆಸರ್ ಅಶೋಕ ಶೆಟ್ಟರ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ7 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ7 days ago
ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ6 days ago
ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ
-
ದಿನದ ಸುದ್ದಿ7 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ