ರಾಜಕೀಯ

‘ಚೌಕೀದಾರ್ ಅಲ್ಲ ಮೈ‌ ಪಾಗಲ್’ ಎಂದು ಬಿಜೆಪಿಗರು ಘೋಷಿಸಿಕೊಳ್ಳಿ : ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ,ಬೆಂಗಳೂರು : ವಿನಾಶಕಾಲೇ ವಿಪರೀತ ಬುದ್ದಿ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್‌ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ನರೇಂದ್ರ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ. ಅವರು ಈ ಕಾಯಿಲೆಯಿಂದ ಶೀಘ್ರ ಗುಣಮುಖರಾಗಲಿ ಎಂದು ಮೋದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಮೋದಿ ಹಾಗೂ ಕೆ.ಎಸ್.ಈಶ್ವರಪ್ಪ ಅವರ ನೀಚತನದ ಹೇಳಿಕೆಗಳನ್ನುದೇಶಿಸಿ ಟ್ವೀಟ್ ಮಾಡಿರು ಅವರು, ‘ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ’. ಸೋಲಿನ ಭೀತಿಯಲ್ಲಿರುವ ನರೇಂದ್ರ ಮೋದಿ ಯವರಿಂದ ಈಶ್ವರಪ್ಪನವರ ವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಬಿಜೆಪಿ ನಾಯಕರೆಲ್ಲ‌ ಘೋಷಿಸಿಕೊಳ್ಳುವುದು ಒಳ್ಳೆಯದು ಎಂದು ಕಿಡಿಕಾರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version