ದಿನದ ಸುದ್ದಿ
‘ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ’, ಯಾಕೆ ಗೊತ್ತಾ..?

ಸುದ್ದಿದಿನ ಡೆಸ್ಕ್ : ನಿಯಮ ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ.
ಮೈಸೂರು ಪೊಲೀಸ್ ಕಮೀಷನರ್ಗೆ ವರದಿ ಕೇಳಿದ ಪೊಲೀಸ್ ಮಹಾನಿರ್ದೇಶಕರು, ಪ್ರಕರಣ ಸಿಬಿಐಗೆ ವಹಿಸುವ ಕುರಿತು ಸ್ಪಷ್ಟ ಅಭಿಪ್ರಾಯ ಕೇಳಿ ಪತ್ರ ಬರೆದಿದ್ದಾರೆ. ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿದ್ದ ಹಿನ್ನೆಲೆ, ಮೈಸೂರಿನ ಗಂಗರಾಜು ಎಂಬುವರು ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ದೂರು ನೀಡಿದ್ದರು. ಜುಲೈ 23 ರಂದು ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆಯಲ್ಲಿ ಪ್ರಗತಿ ಕಾರಣದ ಹಿನ್ನೆಲೆ ಡಿಐಜಿಗೆ ದೂರು ನೀಡಿದ್ದಾರೆ ಗಂಗರಾಜು.
1981 ರಲ್ಲಿ ಮೂಡಾ ಢಿನೋಟಿಫೈ ಮಾಡಿದ್ದ ಭೂಮಿಯಲ್ಲಿ ಮನೆ ನಿರ್ಮಿಸಿದ್ದರು ಸಿದ್ದರಾಮಯ್ಯನವರು, ವಿಜಯ ನಗರ 2 ನೇ ಹಂತದಲ್ಲಿ 10 ಗುಂಟೆ ಜಾಗದಲ್ಲಿ ನಿರ್ಮಾಣವಾಗಿದೆ ಈ ಮನೆ. 2003 ರಲ್ಲಿ ಇದೇ ಮನೆಯನ್ನು ಮಾರಾಟ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2023-24 ನೇ ಸಾಲಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಪಿ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಗಳೂರು | ಸಿಡಿಲು ಬಡಿದು ಇಬ್ಬರು ರೈತರು ಸಾವು

ಸುದ್ದಿದಿನ, ದಾವಣಗೆರೆ : ಸಿಡಿಲು ಬಡಿದು, ಇಬ್ಬರು ರೈತರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಿನ್ನೆ ಸಂಜೆ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಬಂದ ಕಾರಣ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಈ ದುರಂತ ಸಂಭವಿಸಿದೆ. ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ; ನಾಡಿದ್ದು ವಿಧ್ಯುಕ್ತ ಚಾಲನೆ

ಸುದ್ದಿದಿನ, ಬೆಂಗಳೂರು : ಸರ್ಕಾರದ ಗ್ಯಾರಂಟಿ ಘೋಷಣೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿದ್ದು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.
ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ಇದೇ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ದೊರೆಯಲಿದೆ.
ಈ ಯೋಜನೆಗೆ ರಾಜ್ಯಾದ್ಯಂತ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಜಿಲ್ಲೆಗಳಲ್ಲಿ ಯೋಜನೆಗೆ ಏಕಕಾಲಕ್ಕೆ ಚಾಲನೆ ನೀಡಲಿದ್ದು, ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲಾ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್ಗಳನ್ನು ಹೊರತುಪಡಿಸಿ ಇತರ ಎಲ್ಲಾ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಇದರಿಂದ ಶೇಕಡ 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬಸ್ಗಳಲ್ಲಿ ಶೇ. 50 ರಷ್ಟು ಆಸನಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್7 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ7 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ
-
ದಿನದ ಸುದ್ದಿ5 days ago
ಗೋ ಹತ್ಯೆ ನಿಷೇಧ ಕಾಯ್ದೆ ; ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ
-
ದಿನದ ಸುದ್ದಿ7 days ago
ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ