ಸಿನಿ ಸುದ್ದಿ

ಎಸ್‍ಪಿಬಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

Published

on

ಸುದ್ದಿದಿನ, ಚೆನೈ : ಖ್ಯಾತ ಗಾಯಕ ಎಸ್‍.ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಗಂಭೀರ ಸ್ಥಿತಿ ತಲುಪಿದ್ದು, ಅವರಿಗೆ ಅಂತಾರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಳೆದ ಆ.5ರಂದು ಎಸ್‍ಪಿಬಿ ಅವರಿಗೆ ಕೊರೋನಾ ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ಗಂಭೀರವಾದ ಹಿನ್ನೆಲೆ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ. ಇನ್ನು, ಎಸ್‍ಪಿಬಿ ಅವರ ಅರೋಗ್ಯ ಚೇತರಿಕೆಗಾಗಿ ಎಲ್ಲೆಡೆ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version