ದಿನದ ಸುದ್ದಿ
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ | ಯುವ ಮುಖಂಡ ರಾಘು ದೊಡ್ಡಮನಿ ಬಿಡುಗಡೆ
ಸುದ್ದಿದಿನ, ದಾವಣಗೆರೆ : ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್ ಹಾಕಿದ್ದಾರೆಂಬ ಆರೋಪದ ಮೇಲೆ ಮಂಗಳವಾರ ಬಂಧನಕ್ಕೆ ಒಳಗಾಗಿದ್ದ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಬುಧವಾರ ಜಾಮೀನಿನ ಮೂಲಕ ಬಿಡುಗಡೆಯಾದರು.
ಘಟನೆ ಹಿನ್ನೆಲೆ
ಗುಜರಾತ್ ವೈರಸ್, ಮೋದಿ ವೈರಸ್ ಎಂಬ ಪೋಸ್ಟ್ ಮಾಡಿ ಪ್ರಧಾನಿ ಮೋದಿಯವರನ್ನುಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ್ದಾರೆಂದು ಮಂಗಳವಾರ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಅವರನ್ನು ವಿದ್ಯಾನಗರ ಪೊಲೀಸ್ ಠಾಣೆಯ ವಿನಯ್ ಎಂಬ ಪೊಲೀಸ್ ಇನ್ಸ್‍ಪೆಕ್ಟರ್ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ಹಾಗೂ ಯುವ ಬಿಜೆಪಿಯ ಸಹ ದೂರಿನನ್ವಯ ಬಂದಿಸಲಾಗಿತ್ತು.
“ಶಿವಮೊಗ್ಗದಲ್ಲಿ ಪತ್ತೆಯಾದ ಎಂಟು ಮಂದಿ ಕೊರೋನಾ ಪಾಸಿಟಿವ್ ಸೊಂಕಿತರು ಗುಜರಾತಿನ ‘ನಮೋ ಟ್ರಂಪ್’ ಕಾರ್ಯಕ್ರಮದಲ್ಲಿ ಭಾಗಿಯಾದ ಬಿಜೆಪಿ ಕಾರ್ಯಕರ್ತರು!! ಇವಾಗ ಇದಕ್ಕೆ ಏನೆಂದು ಹೆಸರಿಡೋಣ? ‘ನಮೋ ವೈರಸ್’? ‘ಬಿಜೆಪಿ ವೈರಸ್’? ‘ಗುಜರಾತ್ ನಂಜು’? ಎಂದು ಫೇಸ್ಬುಕ್ಕಿನಲ್ಲಿ ಬರೆದುಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಲತಾಣದಲ್ಲಿ ರಾಜಕೀಯ ದುರುದ್ದೇಶದಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿ ತಪ್ಪು ಮಾಹಿತಿ ಹಾರಾಡುತ್ತಿದ್ದ ಈ ವ್ಯಕ್ತಿಯ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದಾವಣಗೆರೆಯ ಜಿಲ್ಲಾಧಿಕಾರಿಗಳಾದ ಮಹಾಂತೇಶ ಬೀಳಗಿ ಸರ್ ಹಾಗೂ ದಾವಣಗೆರೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಇವರಿಗೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಈ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯನ್ನು ಮಾಡಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ರಾಘು ದೊಡ್ಡಮನಿ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೊರೋನಾ ಸೋಂಕನ್ನು ಒಂದು ಧರ್ಮವೊಂದಕ್ಕೆ ಕಟ್ಟುವ ಹಲವು ಪ್ರಯತ್ನಗಳು ಸಾಮಾಜಿಕ ಜಾಲತಾಣದಲ್ಲಿ ನಡೆದಿದ್ದಾವೆ. ಮಾದ್ಯಮಗಳು ತಬ್ಲಿಕ್ ವೈರಸ್, ಗರ್ಭಿಣಿ ಕಂಠಕ, ನರ್ಸ್ ನಂಜು ಅಂತೆಲ್ಲಾ ಸುದ್ದಿ ಮಾಡಿದ್ದವು. ಆಗ ಪೊಲೀಸ್ ಇಲಾಖೆ ಯಾಕೆ ಅವರ ಕ್ರಮ ಕೈಗೊಂಡಿಲ್ಲ ಎಂದು ಹಲವರು ಕಮೆಂಟ್ ಮಾಡುವುದರ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಫೇಸ್ ಬುಕ್ ಪೋಸ್ಟ್ ಗಳು
ರಾಘು ದೊಡ್ಡಮನಿ ಬಂಧನ ವಿರೋಧಿಸಿ ಹಲವು ಸಂಘಟನೆಗಳು ಫೇಸ್ ಬುಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪೋಸ್ಟ್ ಗಳು ಹೀಗಿವೆ.
1. “ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ. ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡಮಣಿ ಬೆಂಬಲಿಸುತ್ತಾ ಬಂದಿದ್ದಾರೆ.
ಈ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಪ್ರಕರಣವನ್ನು ಕೈ ಬಿಡಬೇಕೆಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ವತಿಯಿಂದ ಆಗ್ರಹಿಸುತ್ತೇವೆ ಎಂದು ರಾಜ್ಯಾಧ್ಯಕ್ಷರಾದ ವಿಜಯ್ ತಳವಾರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2. ಹಾಗೆಯೇ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ. ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ದಾವಣಗೆರೆ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡ್ಡಮನಿ ಬೆಂಬಲಿಸುತ್ತಾ ಬಂದಿದ್ದಾರೆ.
ಕೊರೊನಾ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಬಂಧನ ಮತ್ತಿತರ ಅನಗತ್ಯ ಕ್ರಮವನ್ನು ಕೈಬಿಡಬೇಕೆಂದು ಒತ್ತಾಯಿಸುತ್ತೇವೆ.
ಈಗ ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷರಾಗಿರುವ ರಾಘು ದೊಡ್ಡಮನಿ ಮಾನವ ಬಂಧುತ್ವ ವೇದಿಕೆಯ ಸಕ್ರಿಯರಾಗಿ ಕೆಲಸ ಮಾಡಿದವರು. ದುರುದ್ದೇಶಿತ ಈ ಪ್ರಕರಣ ಅಭಿವ್ಯಕ್ತಿಯ ಮೇಲಿನ ಹಲ್ಲೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಧರ್ಮದ್ವೇಷದ ಹೇಳಿಕೆ ನೀಡುವವರನ್ನು ಬಂಧಿಸುವ ಬದಲು, ಧರ್ಮದ ದುರ್ಬಳಕೆ ಖಂಡಿಸಿದವರ ಮೇಲೆ ದೂರು ದಾಖಲಿಸಿರುವುದು ಪೋಲಿಸರ ಪಕ್ಷಪಾತದ ಧೋರಣೆ ಯನ್ನು ‘ಮಾನವ ಬಂಧುತ್ವ ವೇದಿಕೆ- ಕರ್ನಾಟಕ’ ರಾಜ್ಯ ಸಮಿತಿ ಖಂಡಿಸುತ್ತದೆ ಎಂದು ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ್ ಪೋಸ್ಟ್ ಮಾಡಿದ್ದಾರೆ.
“ಹತ್ತು ವರ್ಷಗಳಿಂದ ನಾನು ಜನಪರ ಕಾಳಜಿಯುಳ್ಳ ಕೆಲಸಗಳನ್ನು ಸಂಘಟನೆಗಳ ಮೂಲಕ ಮಾಡುತ್ತಾ ಬಂದಿದ್ದೇನೆ. ಆಳುವ ಸರ್ಕಾರಗಳ ಲೋಪದೋಷಗಳನ್ನು ಟೀಕಿಸುತ್ತಲೂ ಇರುತ್ತೇನೆ. ಇದು ನಮ್ಮ ಸಂವಿಧಾನ ನಮಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ. ನನ್ನ ಬಂಧನಕ್ಕೆ ಸಂಬಂಧಿಸಿದಂತೆ, ಹೋರಾಟದ ದನಿಗಳನ್ನು, ತಪ್ಪನ್ನು ಪ್ರಶ್ನಿಸುವ ಹಕ್ಕನ್ನು ಕಾನೂನಿನ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆದಿದೆ. ಈ ಘಟನೆ ನನಗೆ ಇನ್ನೂ ಹೆಚ್ಚು ಹೆಚ್ಚು ಸಾಮಾಜಿಕ ಬದಲಾವಣೆಯ ಕಾರ್ಯಗಳಲ್ಲಿ ನನ್ನನ್ನು ತೊಡಗಿಸಿ ಕೊಳ್ಳುವಂತೆ ಮಾಡಿದೆ”.
| ರಾಘು ದೊಡ್ಡಮನಿ, ಅಧ್ಯಕ್ಷರು
ಕರ್ನಾಟಕ ರಣಧೀರ ಪಡೆ
ದಾವಣಗೆರೆ ಜಿಲ್ಲಾ ಘಟಕ
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ಕಿಸಿ ಅಭಿಪ್ರಾಯಗಳನ್ನು ಓದಿ
https://www.facebook.com/raghu.doddamani.948
ಮಿತ್ರ ರಾಘು ದೊಡ್ಡಮನಿ ಸಮಾಜಿಕ ಕಳಕಳಿ ಇರುವ ನಾಯಕ ಇವರ ಮೇಲೆ ದಾಖಲಾದ ಪ್ರಕರಣ ವನ್ನು ಕೈ ಬಿಡಬೇಕು ಒಂದು ವೇಳೆ ಅವರು" ಯಾವ ನಂಜು' ಎಂಬ ಬಗ್ಗೆ…
Posted by Shaik Abidali Bavikatte on Wednesday, 20 May 2020
https://m.facebook.com/story.php?story_fbid=1174728689533045&id=100009877756258
https://m.facebook.com/story.php?story_fbid=3307387082613038&id=100000253368436
https://m.facebook.com/story.php?story_fbid=3221777811218777&id=100001597687948
https://m.facebook.com/story.php?story_fbid=2692513617520342&id=100002851899686
https://m.facebook.com/photo.php?fbid=2677375149214971&id=100008275358091&set=a.1788597198092775
https://m.facebook.com/story.php?story_fbid=1410836952434351&id=100005241791811
https://m.facebook.com/story.php?story_fbid=1410836952434351&id=100005241791811
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
AI ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ ಪ್ರಕಟ
ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ವೈಷ್ಣವ್ ಅವರನ್ನು ಶಾರ್ಪರ್ ವರ್ಗದಲ್ಲಿ ಹೆಸರಿಸಲಾಗಿದ್ದು, ಅವರ ನಾಯಕತ್ವದಲ್ಲಿ ಮುಂದಿನ 5 ವರ್ಷಗಳಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಕ್ಷೇತ್ರದ ಮೊದಲ 5 ದೇಶಗಳಲ್ಲಿ ಭಾರತ ಸ್ಥಾನ ಪಡೆಯುವ ಆಶಯದಲ್ಲಿದೆ ಎಂದು ಟೈಮ್ ಮ್ಯಾಗ್ಜೀನ್ ಬರೆದಿದೆ.
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತವನ್ನು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿಸುವ ಪ್ರಯತ್ನದಲ್ಲಿ ಸಚಿವರು ನಿರ್ವಹಿಸಿದ ಮಹತ್ವದ ಪಾತ್ರದ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿ ಅವರ ಹೆಸರು ನಮೂದಿತವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.
ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆ ನೀಡಿದ ಇನ್ಫೋಸೀಸ್ನ ಸಹ ಸಂಸ್ಥಾಪಕ ನಂದನ್ ನಿಲೇಕಣಿ, ಸಿಇಓಗಳಾದ ಗೂಗಲ್ನ ಸುಂದರ್ ಪಿಚಾಯಿ, ಮೈಕ್ರೋಸಾಫ್ಟ್ನ ಸತ್ಯ ನಾದೆಲ್ಲಾ, ಓಪನ್ಎಐ ನ ಸ್ಯಾಮ್ ಅಲ್ಟ್ಮನ್, ಮೆಟಾದ ಮಾರ್ಕ್ ಝುಕೇರ್ಬರ್ಗ್ ಟೈಮ್ ಪ್ರಕಟಿಸಿದ ಪಟ್ಟಿಯಲ್ಲಿ ಸೇರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಾಜಧಾನಿಯಲ್ಲಿ ಅಪಾಯಕಾರಿ ಮರಗಳನ್ನು ಕತ್ತರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.
ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಸಭೆ ನಡೆಸಿದ ಅವರು ಸರಿಯಾಗಿ ಕಾರ್ಯನಿವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಸೆಪ್ಟಂಬರ್ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ತಿಳಿಸಿದ ಅವರು, ಅಪಾಯಕಾರಿ ಮರಗಳಿದ್ದರೆ, ಕತ್ತರಿಸುವಂತೆ ಸೂಚಿಸಿದ್ದಾರೆ.
ಯಾವುದೇ ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್, ಬಿಎಂಆರ್ಡಿಎ ಆಯುಕ್ತ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ
ಸುದ್ದಿದಿನಡೆಸ್ಕ್:ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆಯ ಹಿನ್ನಡೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದಾರೆ. ಜುಲೈನಲ್ಲಿ ನಡೆದ ಸಭೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ ಅವರು, ರಾಜ್ಯದ ಜನರ ಹಿತ ಕಾಪಾಡಲು ಬದ್ಧ ಎಂದು ಹೇಳಿದ್ದಾರೆ. ಮಹದಾಯಿ ಕೇವಲ ಗೋವಾ ಸಂಬಂಧಿ ಯೋಜನೆ ಅಲ್ಲ. ಅಲ್ಲಿ ಹುಲಿ ಸಂರಕ್ಷಿತ ಪ್ರದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು
-
ದಿನದ ಸುದ್ದಿ4 days ago
ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ
-
ದಿನದ ಸುದ್ದಿ5 days ago
ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ
-
ದಿನದ ಸುದ್ದಿ3 days ago
ಆತ್ಮಕತೆ | ಸರಳ ಹಾಗೂ ಒಲವಿನ ಮದುವೆಗಳ ಸಾಲುಸಾಲು
-
ದಿನದ ಸುದ್ದಿ4 days ago
ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ
-
ದಿನದ ಸುದ್ದಿ4 days ago
ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ3 days ago
ರಿವರ್ ಕ್ರಾಸಿಂಗ್ ತರಬೇತಿ ; ಬೋಟ್ ಮುಳುಗಿ ಇಬ್ಬರು ಕಮಾಂಡೋಗಳು ಸಾವು