Connect with us

ದಿನದ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ | ಯುವ‌ ಮುಖಂಡ ರಾಘು ದೊಡ್ಡಮನಿ ಬಿಡುಗಡೆ

Published

on

ಸುದ್ದಿದಿನ, ದಾವಣಗೆರೆ : ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್ ಹಾಕಿದ್ದಾರೆಂಬ ಆರೋಪದ ಮೇಲೆ ಮಂಗಳವಾರ ಬಂಧನಕ್ಕೆ ಒಳಗಾಗಿದ್ದ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಬುಧವಾರ ಜಾಮೀನಿನ ಮೂಲಕ ಬಿಡುಗಡೆಯಾದರು.

ಘಟನೆ ಹಿನ್ನೆಲೆ

ಗುಜರಾತ್ ವೈರಸ್, ಮೋದಿ ವೈರಸ್ ಎಂಬ ಪೋಸ್ಟ್  ಮಾಡಿ ಪ್ರಧಾನಿ ಮೋದಿಯವರನ್ನುಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ್ದಾರೆಂದು ಮಂಗಳವಾರ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಅವರನ್ನು ವಿದ್ಯಾನಗರ ಪೊಲೀಸ್ ಠಾಣೆಯ ವಿನಯ್ ಎಂಬ ಪೊಲೀಸ್ ಇನ್ಸ್‍ಪೆಕ್ಟರ್ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ಹಾಗೂ ಯುವ ಬಿಜೆಪಿಯ ಸಹ ದೂರಿನನ್ವಯ ಬಂದಿಸಲಾಗಿತ್ತು.

ಶಿವಮೊಗ್ಗದಲ್ಲಿ ಪತ್ತೆಯಾದ ಎಂಟು ಮಂದಿ ಕೊರೋನಾ ಪಾಸಿಟಿವ್ ಸೊಂಕಿತರು ಗುಜರಾತಿನ ‘ನಮೋ ಟ್ರಂಪ್’ ಕಾರ್ಯಕ್ರಮದಲ್ಲಿ ಭಾಗಿಯಾದ ಬಿಜೆಪಿ ಕಾರ್ಯಕರ್ತರು!! ಇವಾಗ ಇದಕ್ಕೆ ಏನೆಂದು ಹೆಸರಿಡೋಣ? ‘ನಮೋ ವೈರಸ್’? ‘ಬಿಜೆಪಿ ವೈರಸ್’? ‘ಗುಜರಾತ್ ನಂಜು’? ಎಂದು ಫೇಸ್ಬುಕ್ಕಿನಲ್ಲಿ ಬರೆದುಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಲತಾಣದಲ್ಲಿ ರಾಜಕೀಯ ದುರುದ್ದೇಶದಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿ ತಪ್ಪು ಮಾಹಿತಿ ಹಾರಾಡುತ್ತಿದ್ದ ಈ ವ್ಯಕ್ತಿಯ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದಾವಣಗೆರೆಯ ಜಿಲ್ಲಾಧಿಕಾರಿಗಳಾದ ಮಹಾಂತೇಶ ಬೀಳಗಿ ಸರ್ ಹಾಗೂ ದಾವಣಗೆರೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಇವರಿಗೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಈ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯನ್ನು ಮಾಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ರಾಘು ದೊಡ್ಡಮನಿ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೊರೋನಾ ಸೋಂಕನ್ನು ಒಂದು ಧರ್ಮವೊಂದಕ್ಕೆ ಕಟ್ಟುವ ಹಲವು ಪ್ರಯತ್ನಗಳು ಸಾಮಾಜಿಕ ಜಾಲತಾಣದಲ್ಲಿ ನಡೆದಿದ್ದಾವೆ. ಮಾದ್ಯಮಗಳು ತಬ್ಲಿಕ್ ವೈರಸ್, ಗರ್ಭಿಣಿ ಕಂಠಕ, ನರ್ಸ್ ನಂಜು ಅಂತೆಲ್ಲಾ ಸುದ್ದಿ ಮಾಡಿದ್ದವು. ಆಗ ಪೊಲೀಸ್ ಇಲಾಖೆ ಯಾಕೆ ಅವರ ಕ್ರಮ ಕೈಗೊಂಡಿಲ್ಲ ಎಂದು ಹಲವರು ಕಮೆಂಟ್ ಮಾಡುವುದರ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಫೇಸ್ ಬುಕ್ ಪೋಸ್ಟ್ ಗಳು

ರಾಘು ದೊಡ್ಡಮನಿ ಬಂಧನ ವಿರೋಧಿಸಿ ಹಲವು ಸಂಘಟನೆಗಳು ಫೇಸ್ ಬುಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪೋಸ್ಟ್ ಗಳು ಹೀಗಿವೆ.

1.       “ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ.‌ ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡಮಣಿ ಬೆಂಬಲಿಸುತ್ತಾ ಬಂದಿದ್ದಾರೆ.

ಈ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಪ್ರಕರಣವನ್ನು ಕೈ ಬಿಡಬೇಕೆಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ವತಿಯಿಂದ ಆಗ್ರಹಿಸುತ್ತೇವೆ ಎಂದು ರಾಜ್ಯಾಧ್ಯಕ್ಷರಾದ ವಿಜಯ್ ತಳವಾರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2.     ಹಾಗೆಯೇ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ.‌ ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ದಾವಣಗೆರೆ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡ್ಡಮನಿ ಬೆಂಬಲಿಸುತ್ತಾ ಬಂದಿದ್ದಾರೆ.

ಕೊರೊನಾ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಬಂಧನ ಮತ್ತಿತರ ಅನಗತ್ಯ ಕ್ರಮವನ್ನು ಕೈಬಿಡಬೇಕೆಂದು ಒತ್ತಾಯಿಸುತ್ತೇವೆ.

ಈಗ ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷರಾಗಿರುವ ರಾಘು ದೊಡ್ಡಮನಿ ಮಾನವ ಬಂಧುತ್ವ ವೇದಿಕೆಯ ಸಕ್ರಿಯರಾಗಿ ಕೆಲಸ ಮಾಡಿದವರು. ದುರುದ್ದೇಶಿತ ಈ ಪ್ರಕರಣ ಅಭಿವ್ಯಕ್ತಿಯ ಮೇಲಿನ ಹಲ್ಲೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಧರ್ಮದ್ವೇಷದ ಹೇಳಿಕೆ ನೀಡುವವರನ್ನು ಬಂಧಿಸುವ ಬದಲು, ಧರ್ಮದ ದುರ್ಬಳಕೆ ಖಂಡಿಸಿದವರ ಮೇಲೆ ದೂರು ದಾಖಲಿಸಿರುವುದು ಪೋಲಿಸರ ಪಕ್ಷಪಾತದ ಧೋರಣೆ ಯನ್ನು ‘ಮಾನವ ಬಂಧುತ್ವ ವೇದಿಕೆ- ಕರ್ನಾಟಕ’ ರಾಜ್ಯ ಸಮಿತಿ ಖಂಡಿಸುತ್ತದೆ ಎಂದು ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ್ ಪೋಸ್ಟ್ ಮಾಡಿದ್ದಾರೆ.


ಹತ್ತು ವರ್ಷಗಳಿಂದ ನಾನು ಜನಪರ ಕಾಳಜಿಯುಳ್ಳ ಕೆಲಸಗಳನ್ನು ಸಂಘಟನೆಗಳ ಮೂಲಕ ಮಾಡುತ್ತಾ ಬಂದಿದ್ದೇನೆ. ಆಳುವ ಸರ್ಕಾರಗಳ ಲೋಪದೋಷಗಳನ್ನು ಟೀಕಿಸುತ್ತಲೂ ಇರುತ್ತೇನೆ. ಇದು ನಮ್ಮ ಸಂವಿಧಾನ ನಮಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ. ನನ್ನ ಬಂಧನಕ್ಕೆ ಸಂಬಂಧಿಸಿದಂತೆ, ಹೋರಾಟದ ದನಿಗಳನ್ನು, ತಪ್ಪನ್ನು ಪ್ರಶ್ನಿಸುವ ಹಕ್ಕನ್ನು ಕಾನೂನಿನ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆದಿದೆ. ಈ ಘಟನೆ ನನಗೆ ಇನ್ನೂ ಹೆಚ್ಚು ಹೆಚ್ಚು ಸಾಮಾಜಿಕ‌ ಬದಲಾವಣೆಯ ಕಾರ್ಯಗಳಲ್ಲಿ ನನ್ನನ್ನು ತೊಡಗಿಸಿ ಕೊಳ್ಳುವಂತೆ ಮಾಡಿದೆ”‌.

| ರಾಘು ದೊಡ್ಡಮನಿ, ಅಧ್ಯಕ್ಷರು
ಕರ್ನಾಟಕ ರಣಧೀರ ಪಡೆ
ದಾವಣಗೆರೆ ಜಿಲ್ಲಾ ಘಟಕ


ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ಕಿಸಿ ಅಭಿಪ್ರಾಯಗಳನ್ನು ಓದಿ

https://www.facebook.com/raghu.doddamani.948

ಮಿತ್ರ ರಾಘು ದೊಡ್ಡಮನಿ ಸಮಾಜಿಕ ಕಳಕಳಿ ಇರುವ ನಾಯಕ ಇವರ ಮೇಲೆ ದಾಖಲಾದ ಪ್ರಕರಣ ವನ್ನು ಕೈ ಬಿಡಬೇಕು ಒಂದು ವೇಳೆ ಅವರು" ಯಾವ ನಂಜು' ಎಂಬ ಬಗ್ಗೆ…

Posted by Shaik Abidali Bavikatte on Wednesday, 20 May 2020

https://m.facebook.com/story.php?story_fbid=1174728689533045&id=100009877756258

https://m.facebook.com/story.php?story_fbid=3307387082613038&id=100000253368436

https://m.facebook.com/story.php?story_fbid=3221777811218777&id=100001597687948

https://m.facebook.com/story.php?story_fbid=2692513617520342&id=100002851899686

https://m.facebook.com/photo.php?fbid=2677375149214971&id=100008275358091&set=a.1788597198092775

https://m.facebook.com/story.php?story_fbid=1410836952434351&id=100005241791811

https://m.facebook.com/story.php?story_fbid=1410836952434351&id=100005241791811

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರಮುಖ 8 ಕ್ಲಬ್‌ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್

Published

on

bengaluru-clubs-food-safety-raid-cockroaches-expired-food-found
ಬೆಂಗಳೂರು ಕ್ಲಬ್‌ಗಳಲ್ಲಿ ಆಹಾರ ಸುರಕ್ಷತೆ ಶಾಕ್: ಜಿರಳೆ, ಹುಳು, ಅವಧಿ ಮೀರಿದ ಆಹಾರ ಪತ್ತೆ!

ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್‌ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್‌ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

http://Visit : www.suddidina.com

ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ

ಬೌರಿಂಗ್ ಕ್ಲಬ್‌ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್‌ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್‌ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಕೆಎಸ್‌ಸಿಎ ಕ್ಲಬ್‌ನಲ್ಲೂ ಹಲವು ಲೋಪ

ಕೆಎಸ್‌ಸಿಎ ಕ್ಲಬ್‌ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.

ಅವಧಿ ಮೀರಿದ ಅಣಬೆ ಪತ್ತೆ

ಕ್ಯಾಥೋಲಿಕ್ ಕ್ಲಬ್‌ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್‌ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್‌ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.

ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.

ಹೋಟೆಲ್‌ಗಳಿಗೂ ಕಟ್ಟುನಿಟ್ಟಿನ ಸೂಚನೆ

ಕ್ಲಬ್‌ಗಳ ಜೊತೆಗೆ ಹೋಟೆಲ್‌ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು

Published

on

ಹುಟ್ಟುಹಬ್ಬದ ಸಂಭ್ರಮಕ್ಕೆ ಬ್ರೇಕ್: ಅಭಿಮಾನಿಗಳಿಗೆ ಕಿಚ್ಚ ಸುದೀಪ್‌ ಭಾವುಕ ಮನವಿ, ಸಮಾಜಮುಖಿ ಕಾರ್ಯಕ್ಕೆ ಕರೆ!

ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್‌ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳದಿರಲು ಸುದೀಪ್‌ ನಿರ್ಧರಿಸಿದ್ದಾರೆ. ವೈಯಕ್ತಿಕ ಹಾಗೂ ಬಲವಾದ ಕೆಲವು ಕಾರಣಗಳಿಂದ ಈ ವರ್ಷದ ಜನ್ಮದಿನದ ಸಂಭ್ರಮದಿಂದ ದೂರ ಉಳಿಯುತ್ತಿರುವುದಾಗಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ಪತ್ರದ ಮೂಲಕ ತಿಳಿಸಿದ್ದಾರೆ.

ಹುಟ್ಟುಹಬ್ಬದಂದು ಮನೆಯ ಬಳಿ ಅಭಿಮಾನಿಗಳನ್ನು ಭೇಟಿಯಾಗಲು ತಾವು ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಿಚ್ಚ, ಯಾವುದೇ ರೀತಿಯ ಗದ್ದಲ ಅಥವಾ ಸತ್ಕಾರಕ್ಕೆ ಮುಂದಾಗದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಾಮಾನ್ಯವಾಗಿ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮನೆ ಮುಂದೆ ಸೇರುವ ಸಂದರ್ಭದಲ್ಲೇ, ಈ ಬಾರಿ ಸುದೀಪ್‌ ಅವರ ಮನವಿ ವಿಶೇಷ ಗಮನ ಸೆಳೆದಿದೆ.

ಉಡುಗೊರೆ ಬೇಡ, ಸಮಾಜಕ್ಕೆ ಸಹಾಯ ಮಾಡಿ

ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ನೀಡಲು ಉದ್ದೇಶಿಸಿರುವ ಉಡುಗೊರೆಗಳ ಬದಲಾಗಿ ಆ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸುವಂತೆ ಸುದೀಪ್‌ ಕರೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ ನಡೆಯುವ ಸಂಭ್ರಮಕ್ಕಿಂತ ಸಮಾಜಕ್ಕೆ ನೆರವಾಗುವ ಕೆಲಸವೇ ತಮಗೆ ನಿಜವಾದ ಸಂತೋಷ ನೀಡುತ್ತದೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

ಅಭಿಮಾನಿಗಳು ತಮ್ಮ ತಮ್ಮ ಊರು, ಪ್ರದೇಶಗಳಲ್ಲಿ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುವುದೇ ತಮಗೆ ದೊರೆಯುವ ಅತ್ಯುತ್ತಮ ಆಶೀರ್ವಾದ ಎಂದು ಕಿಚ್ಚ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳ ಪ್ರೀತಿಗೆ ಹೊಸ ಅರ್ಥ ನೀಡುವ ಪ್ರಯತ್ನ ಮಾಡಿದ್ದಾರೆ.

30 ವರ್ಷಗಳ ಸಿನಿ ಪಯಣದ ನೆನಪು

ಕನ್ನಡ ಚಿತ್ರರಂಗಕ್ಕೆ ಸುದೀಪ್‌ ಬರೋಬ್ಬರಿ ಮೂರು ದಶಕಗಳನ್ನು ಅರ್ಪಿಸಿದ್ದಾರೆ. ಸಿನಿಮಾ ತಮ್ಮ ಪರಮ ಕಾಯಕವಾಗಿದ್ದು, ಕೆಲವೊಮ್ಮೆ ಸಿನಿಮಾಗಳು ತಡವಾಗಬಹುದು; ಅದಕ್ಕೂ ಕಾರಣಗಳಿರುತ್ತವೆ ಎಂದು ಅವರು ಹೇಳಿದ್ದಾರೆ. ಈ ಮಾತುಗಳ ಮೂಲಕ ತಮ್ಮ ವೃತ್ತಿಜೀವನದ ಮುಂದಿನ ಹೆಜ್ಜೆಗಳ ಬಗ್ಗೆ ಕುತೂಹಲ ಮೂಡಿಸಿದ್ದಾರೆ.

“ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ” ಎಂಬ ಖಡಕ್‌ ಡೈಲಾಗ್‌ ಮೂಲಕ ಮುಂದಿನ ಸಿನಿಮಾ ಅಥವಾ ಹೊಸ ಯೋಜನೆಗೆ ಸುದೀಪ್‌ ಸುಳಿವು ನೀಡಿದ್ದಾರೆ. ಹೀಗಾಗಿ ಅವರ ಪತ್ರ ಕೇವಲ ಹುಟ್ಟುಹಬ್ಬದ ಮನವಿಯಾಗದೆ, ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆಯನ್ನೂ ಹುಟ್ಟುಹಾಕಿದೆ.

https://x.com/KicchaSudeep/status/2092857077706506638

“ಕನ್ನಡ ನನ್ನ ಸತ್ಯ.. ಕನ್ನಡದಿಂದ ನಾನು ನಿತ್ಯ”

ತಮ್ಮ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿಯನ್ನೂ ಸುದೀಪ್‌ ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ. ಎಲ್ಲೇ ಹೋದರೂ ಕನ್ನಡಿಗರನ್ನು ರಂಜಿಸುವ ವಿಷಯದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ 30 ವರ್ಷಗಳಿಂದ ಅಭಿಮಾನಿಗಳಿಂದ ದೊರೆತ ಪ್ರೀತಿ, ಹಾರೈಕೆ, ಚಪ್ಪಾಳೆ ಮತ್ತು ಶಿಳ್ಳೆಗಳೇ ತಮ್ಮ ದೊಡ್ಡ ಬಲ ಎಂದು ಸ್ಮರಿಸಿದ್ದಾರೆ.

“ನಮ್ಮನ್ನು ಮತ್ತು ನಿಮ್ಮನ್ನು ಎಂದಾದರೂ ಬೇರ್ಪಡಿಸಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ಅಭಿಮಾನಿಗಳೊಂದಿಗಿನ ತಮ್ಮ ಭಾವನಾತ್ಮಕ ಬಂಧವನ್ನು ತೆರೆದಿಟ್ಟಿದ್ದಾರೆ. ಕೊನೆಯಲ್ಲಿ “Luv u all always…” ಎಂದು ಹೇಳುವ ಮೂಲಕ ಕಿಚ್ಚ ತಮ್ಮ ಅಭಿಮಾನಿಗಳ ಮೇಲಿನ ಅಪಾರ ಪ್ರೀತಿಯನ್ನು ಮತ್ತೊಮ್ಮೆ ಸಾರಿದ್ದಾರೆ.

 

Continue Reading

ದಿನದ ಸುದ್ದಿ

ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್‌ಗಳ ಸದ್ದು

Published

on

toxic-movie-geethu-mohandas-old-statement-viral-yash-fans-troll
‘ಟಾಕ್ಸಿಕ್’ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆಯ ವಿಡಿಯೋ ವೈರಲ್: ಸ್ಕ್ರಿಪ್ಟ್‌ ಬಗ್ಗೆ ಹೇಳಿಕೆಗೆ ಯಶ್ ಅಭಿಮಾನಿಗಳ ಆಕ್ರೋಶ!

ಸುದ್ದಿದಿನ,ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ನಿರ್ದೇಶಕಿಯ ಸಿನಿಮಾ ಮಾಡುವ ವಿಧಾನಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಚರ್ಚೆಯ ಕೇಂದ್ರಬಿಂದುವಾಗಿದೆ.

ವೈರಲ್ ವಿಡಿಯೋದಲ್ಲಿ ಗೀತು ಮೋಹನ್‌ದಾಸ್ ಅವರು, ತಾವು ಬರೆಯುವುದು, ಚಿತ್ರೀಕರಿಸುವುದು ಹಾಗೂ ಎಡಿಟ್ ಮಾಡುವ ಪ್ರಕ್ರಿಯೆಯಲ್ಲಿ ಸಿನಿಮಾ ನಿಧಾನವಾಗಿ ರೂಪುಗೊಳ್ಳುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ತಾವು ಸ್ಕ್ರಿಪ್ಟ್‌ಗೆ ಕಟ್ಟುನಿಟ್ಟಾಗಿ ಅಂಟಿಕೊಂಡು ಕೆಲಸ ಮಾಡುವುದಿಲ್ಲ ಎಂಬ ಅವರ ಹೇಳಿಕೆಯೇ ಇದೀಗ ನೆಟ್ಟಿಗರ ಗಮನ ಸೆಳೆದಿದೆ.

http://Visit : www.suddidina.com

‘ಸ್ಕ್ರಿಪ್ಟ್‌ನಂತೆ ಸಿನಿಮಾ ಸಿಗುವುದಿಲ್ಲ’ ಎಂದಿದ್ದ ನಿರ್ದೇಶಕಿ

ನಿರ್ಮಾಪಕರನ್ನು ಭೇಟಿಯಾಗುವಾಗಲೇ ತಮ್ಮ ಕೆಲಸದ ಶೈಲಿಯನ್ನು ಸ್ಪಷ್ಟಪಡಿಸುವುದಾಗಿ ಗೀತು ಹೇಳಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಸ್ಕ್ರಿಪ್ಟ್‌ನಲ್ಲಿ ಓದುವ ಕಥೆಯಂತೆಯೇ ಅಂತಿಮ ಸಿನಿಮಾ ಇರಬೇಕೆಂದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದರು.

ಸಾಮಾನ್ಯವಾಗಿ ದೊಡ್ಡ ಬಜೆಟ್‌ನ ಸಿನಿಮಾಗಳಲ್ಲಿ ಕಥೆ, ಚಿತ್ರಕಥೆ ಮತ್ತು ಚಿತ್ರೀಕರಣದ ಯೋಜನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಹೀಗಾಗಿ ಗೀತು ಅವರ ಈ ಹಳೆಯ ಹೇಳಿಕೆಯನ್ನು ಕೆಲವರು ಪ್ರಶ್ನಿಸುತ್ತಿದ್ದರೆ, ಮತ್ತೊಂದೆಡೆ ನಿರ್ದೇಶಕರ ಸೃಜನಶೀಲ ಪ್ರಕ್ರಿಯೆ ಒಂದೇ ರೀತಿಯಾಗಿರಬೇಕೆಂದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

https://x.com/alpasankhyata/status/2092620787698094334

‘ಟಾಕ್ಸಿಕ್’ ಮೇಲೆ ಪರಿಣಾಮ ಬೀರಿದ ಹಳೆಯ ಹೇಳಿಕೆ?

‘ಟಾಕ್ಸಿಕ್’ ಬಿಡುಗಡೆ ಬಳಿಕ ಸಿನಿಮಾದ ಕಥೆ, ನಿರೂಪಣೆ, ಆಕ್ಷನ್ ಹಾಗೂ ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಇದೇ ಸಮಯದಲ್ಲಿ ಹಳೆಯ ವಿಡಿಯೋ ವೈರಲ್ ಆಗಿರುವುದರಿಂದ, ಸಿನಿಮಾದಲ್ಲಿನ ಕೆಲವು ಅಂಶಗಳನ್ನು ಈ ಹೇಳಿಕೆಯೊಂದಿಗೆ ಹೋಲಿಸಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ.

ಚಿತ್ರವು ಸ್ವಾತಂತ್ರ್ಯಪೂರ್ವದ ಗೋವಾ ಹಿನ್ನೆಲೆಯಲ್ಲಿನ ಅಪರಾಧ ಜಗತ್ತು ಮತ್ತು ಅಂಡರ್‌ವರ್ಲ್ಡ್‌ ಕಥೆಯನ್ನು ಒಳಗೊಂಡಿದೆ. ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಬಳಗವಿದೆ.

ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಆರಂಭ

ಭಾರೀ ನಿರೀಕ್ಷೆಯೊಂದಿಗೆ ಬಿಡುಗಡೆಯಾದ ‘ಟಾಕ್ಸಿಕ್’ ಮೊದಲ ದಿನವೇ ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ವರದಿಗಳು ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಆರಂಭ ಪಡೆದಿರುವುದನ್ನು ಸೂಚಿಸುತ್ತವೆ. ಆದರೆ ಪ್ರೇಕ್ಷಕರ ಪ್ರತಿಕ್ರಿಯೆ ಮಾತ್ರ ಮಿಶ್ರವಾಗಿದೆ.

ಸದ್ಯ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆ ಮತ್ತು ‘ಟಾಕ್ಸಿಕ್’ ಚಿತ್ರದ ಕುರಿತು ನಡೆಯುತ್ತಿರುವ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಮುಂದುವರಿದಿದೆ. ವೈರಲ್ ವಿಡಿಯೋ ಚಿತ್ರದ ಸೃಜನಶೀಲ ವಿಧಾನಕ್ಕೆ ಸಂಬಂಧಿಸಿದ ಹಳೆಯ ಅಭಿಪ್ರಾಯವಾಗಿದ್ದು, ಅದನ್ನು ಇಂದಿನ ಚಿತ್ರದ ಫಲಿತಾಂಶದೊಂದಿಗೆ ಹೇಗೆ ಸಂಪರ್ಕಿಸಬೇಕು ಎಂಬುದರ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

 

 

Continue Reading

Trending