ದಿನದ ಸುದ್ದಿ

ಹುತಾತ್ಮ ಯೋಧ ಗುರು ಪತ್ನಿಗೆ ರಾಷ್ಟ್ರದ್ವಜ ಹಸ್ತಾಂತರಿಸಿದ ಎಚ್.ಡಿ. ಕೆ

Published

on

ಸುದ್ದಿದಿನ, ಮಂಡ್ಯ : ಪುಲ್ವಾಮಾ ಘಟನೆಯಲ್ಲಿ ಹುತಾತ್ಮರಾದ ಸಿ ಆರ್ ಪಿ ಎಫ್ ಯೋಧ ಹೆಚ್. ಗುರು ಅವರ ಅಂತ್ಯಕ್ರಿಯೆ ಇಂದು ಸಂಜೆ ಕೆ.ಎಂ ದೊಡ್ಡಿ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.ಸಾವಿರಾರು ಜನರು ಯೋಧನ ಸಾವಿಗೆ ಕಂಬನಿ ಮಿಡಿದರು.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭಾಗವಹಿಸಿ ಹೆಚ್. ಗುರು ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ನಂತರ ರಾಷ್ಟ್ರಧ್ವಜವನ್ನು ಅವರ ಪತ್ನಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಅಗಲಿದ ಯೋಧನ ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೆ, ಈ ಸಂದರ್ಭದಲ್ಲಿ ಮಾತನಾಡಿ ನಾವೆಲ್ಲರೂ ದುಃಖತಪ್ತ ಕುಟುಂಬದವರೊಂದಿಗೆ ಬೆಂಬಲಕ್ಕೆ ನಿಲ್ಲಬೇಕಾಗಿದೆ. ಸರ್ಕಾರದಿಂದ ಅವರಿಗೆ ಎಲ್ಲ ಅಗತ್ಯ ನೆರವು ಕಲ್ಪಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version