ದಿನದ ಸುದ್ದಿ
ಸೋನಿಯಾ ಗಾಂಧಿ, ಮಾಯಾವತಿ ನಾಳೆ ಮತಯಾಚನೆ
ಸುದ್ದಿದಿನ, ಬೆಂಗಳೂರು : ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಶಿವಾಜಿನಗರದಲ್ಲಿ ನಾಡಿದ್ದು ರ್‍ಯಾಲಿ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪರವಾಗಿ ನಾಯಕಿ ಮಾಯಾವತಿ ಮತಯಾಚಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243