ಕ್ರೀಡೆ

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತಿದೆ.

ಅರ್ಹ ಕ್ರೀಡಾ ಪೋಷಕರು ಸೆ.16 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ.ಸಂ: 08192-237480ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version