ದಿನದ ಸುದ್ದಿ
ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ | ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ, ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಂದು ಒಂದು ವರ್ಷದ ಸಂಭ್ರಮ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ನಾವು ಕೊಟ್ಟಿದ್ದ ವಚನವನ್ನ ಈಡೇರಿಸಿದ್ದೇವೆ. ಆದ್ರೆ ಅನ್ನಭಾಗ್ಯ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಸಹಕಾರ ನೀಡಲಿಲ್ಲ ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದು ಸ್ಪಷ್ಟಪಡಿಸಿದರು. ಅಧಿಕಾರಕ್ಕೆ ಬಂದ 9 ತಿಂಗಳೊಳಗೆ ಎಲ್ಲಾ ಗ್ಯಾರಂಟಿ ಜಾರಿಗೊಳಿಸಿದ್ದೇವೆ ಎಂದು ಹೇಳಿದರು.
ಮಧ್ಯವರ್ತಿಗಳ ಹಾವಳಿ ಇಲ್ಲದೆ 1 ಕೋಟಿ 20 ಲಕ್ಷ ಮನೆ ಯಜಮಾನಿಯರಿಗೆ ನೇರವಾಗಿ ಖಾತೆಗಳಿಗೆ ಹಣ ಹಾಕಲಾಗುತ್ತಿದೆ ಎಂದರು. ಗೃಹ ಜ್ಯೋತಿ ಅಡಿಯಲ್ಲಿ 1 ಕೋಟಿ 60 ಲಕ್ಷ ಜನರಿಗೆ ಫ್ರೀ ವಿದ್ಯುತ್ ಕೊಡುತ್ತಿದ್ದೇವೆ. ಜೂ.11 ರಂದು ಶಕ್ತಿ ಯೋಜನೆ ಜಾರಿ ಮಾಡಲಾಗಿದ್ದು, ಏಪ್ರಿಲ್ ಕೊನೆಯ ವೇಳೆಗೆ 21 ಕೋಟಿ 33 ಲಕ್ಷಕ್ಕೂ ಅಧಿಕ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ 4 ಸಾವಿರದ 857 ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ. ಅನ್ನಭಾಗ್ಯ ಯೋಜನೆಯಲ್ಲಿ 4 ಕೋಟಿ 10 ಲಕ್ಷ ಫಲಾನುಭವಿಗಳಿಗೆ 5 ಸಾವಿರದ 754 ಕೋಟಿ ಹಣ ವರ್ಗಾವಣೆ ಮಾಡಿದ್ದೇವೆ ಎಂದು ತಿಳಿಸಿದರು.
ಒಟ್ಟು 5 ಗ್ಯಾರಂಟಿ ಯೋಜನೆಗೆ 36 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಇರೋದ್ರಿಂದ ಸಂಭ್ರಮಾಚಾರಣೆ ಮಾಡದಿರಲು ಸರ್ಕಾರ ನಿರ್ಧರಿಸಿದೆ ಎಂದರು.
ನಾಡಿನ ಏಳು ಕೋಟಿ ಕನ್ನಡಿಗರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷ. ಈ ಒಂದು ವರ್ಷದ ಅವಧಿಯಲ್ಲಿ ಪಾರದರ್ಶಕ, ಭ್ರಷ್ಟಾಚಾರ ರಹಿತವಾದ ಜನಪರ ಆಡಳಿತ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.
ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡಬೇಕೆಂಬ ಆಶಯ ನಮ್ಮದು, ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಬೆಂಬಲ ಇರಲಿ.… pic.twitter.com/tas4EQvsMM— Siddaramaiah (@siddaramaiah) May 20, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243