ಸಿನಿ ಸುದ್ದಿ

‘ಪೈಲ್ವಾನ್’​ ಪೋಸ್ಟರ್ ರಿಲೀಸ್ ; ಕಿಚ್ಚನ ರಗಡ್ ಲುಕ್‌ಗೆ ಅಭಿಮಾನಿಗಳು ಫಿದಾ..!

Published

on

ಸುದ್ದಿದಿನ, ಬೆಂಗಳೂರು : ಕಿಚ್ಚ ಸುದೀಪ್​ ನಟನೆಯ ಬಹು ನಿರೀಕ್ಷಿತ ‘ಪೈಲ್ವಾನ್’​ ಚಿತ್ರದ ಪೋಸ್ಟರ್​ ರಿಲೀಸ್​ ಆಗಿದೆ. ಅದ್ಧೂರಿಯಾಗಿ ನಿರ್ಮಾಣವಾಗಿರುವ ಚಿತ್ರ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ​ಸದ್ಯ ಚಿತ್ರತಂಡ, ಚಿತ್ರದ ಮತ್ತೊಂದು ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ವಿಶೇಷ ಅಂದ್ರೆ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಯಲ್ಲಿ ಚಿತ್ರದ ಪೋಸ್ಟರ್​ಗಳು ಬಿಡುಗಡೆಯಾಗಿವೆ. ಇನ್ನೂ ಚಿರಂಜೀವಿ, ವಿಜಯ್​ ಸೇತುಪತಿ, ಮೋಹನ್​ಲಾಲ್​, ಸುನೀಲ್​ ಶೆಟ್ಟಿ ಚಿತ್ರದ ಪೋಸ್ಟರ್​ಗಳನ್ನು ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ವಿಶ್​ ಮಾಡಿದ್ದಾರೆ. ಇನ್ನು, ಈ ಚಿತ್ರಕ್ಕೆ ಕೃಷ್ಣ ನಿರ್ದೇಶನವಿದ್ದು, ಅರ್ಜುನ್​ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version