ದಿನದ ಸುದ್ದಿ
ಸರಳ ತರಳಬಾಳು ಹುಣ್ಣಿಮೆಯಂದು ಗೋಶಾಲೆ ಪುಣ್ಯಕೋಟಿಗೆ ಅರ್ಪಣೆ

ಸುದ್ದಿದಿನ,ಸಿರಿಗೆರೆ: ಉತ್ಸವಗಳಿಂದ ಸಮಾಜದ ಅಭಿವೃದ್ಧಿ ಮಾಡುವುದಕ್ಕಿಂತ ಉತ್ಸವಗಳ ಸಾರ್ಥಕತೆಯ ನೆನಪಿಗೆ ಸಮಾಜದ ಅಭ್ಯುದಯಕ್ಕೆ ಶ್ರಮಿಸುವ ವಿಶೇಷ ಆಶಯ ಹೊಂದಿ ಆ ಕಾರ್ಯದಲ್ಲಿ ಯಶಸ್ಸು ಗಳಿಸಿದ ಕೀರ್ತಿ ತರಳಬಾಳು ಶ್ರೀ ಜಗದ್ಗುರುವರ್ಯರದು.
ಪರಂಪರೆಗೆ ಮತ್ತು ಅಪಾರ ಶಿಷ್ಯಬಳಗದ ಮನಸ್ಸಿಗೆ ಘಾಸಿ ಮಾಡದಂತೆ ಎಲ್ಲರಿಗೂ ಅನುಕೂಲ ತರುವ ಸರ್ವರೂ ಒಪ್ಟಲೇಬೇಕಾದ ಕಾರ್ಯಕ್ರಮಗಳನ್ನು ಜಾರಿಯ ಅನುಷ್ಠಾನದ ಅಪರೂಪದ ವ್ಯಕ್ತಿತ್ವ ಚಿಂತಕ ಶ್ರೇಷ್ಠರಾದ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರದು.
ನಾಡಿನ ಧಾರ್ಮಿಕ ಸಮಾರಂಭಗಳಿಗೆ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಮಾತೃಸ್ವರೂಪದಂತಹ ಸ್ಥಾನವಿದೆ. ಸಮಾರಂಭದ ಸಾರ್ಥಕತಗೆ ನೂರಾರು ಸಮಾಜ ಮುಖಿ ಕಾರ್ಯಗಳು ಸಾಕ್ಷಿಯಾಗಿವೆ. ಅಂತಹ ಜನಮುಖಿ ಕಾರ್ಯಗಳಲ್ಲಿ ಸಾವಿರಾರು ಕೋಟಿಗಳ ವೆಚ್ಚದಲ್ಲಿ ನೂರಾರು ಕೆರೆಗಳಿಗಳ ಒಡಲಿಗೆ ಗಂಗೆ ಹರಿದು ರೈತರ ನೆಮ್ಮದಿಗೆ ಕಾರಣವಾಗಿರುವುದು ಪ್ರಮುಖವಾದುದು. ಆರು ದಶಕಗಳಿಂದಲೂ ಸರ್ವರ ಜನಾಧರಣೆಯ ಸಮಾರಂಭವಾಗಿ ಆಯಾ ಕಾಲದ ಸಮಸ್ಯೆಗಳಿಗೆ ಸ್ಪಂದಿಸುವ ಮಾನವೀಯತೆಯ ಮಹೋತ್ಸವವಾಗಿದೆ.
ಈ ವರ್ಷದ ತರಳಬಾಳು ಹುಣ್ಣಿಮೆ ಮಹೋತ್ಸವ ಹೊಯ್ಸಳರ ನಾಡಾದ ಹಳೇಬೀಡಿನಲ್ಲಿ ಆಚರಿಸುವ ಶ್ರೀಗಳ ಆಶಯಕ್ಕೆ ಆ ಭಾಗದ ಭಕ್ತರು ತುದಿಗಾಲಲ್ಲಿ ನಿಂತಿದ್ದರು.
ಭೀಕರ ಬರಗಾಲದ ಛಾಯೆಯನ್ನು ಮನಗಂಡು
ಕಾರ್ಯಕ್ರಮಗಳಿಗೆ ಆ ಭಾಗದ ಜ್ವಲಂತ ಸಮಸ್ಯೆಗಳಿಗೆ ತರಳಬಾಳು ಹುಣ್ಣಿಮೆ ಮಹೋತ್ಸವದ ಮೂಲಕ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರೀಗಳು ಹಳೇಬೀಡು ವ್ಯಾಪ್ತಿಯ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸುವ ಯೋಜನೆ ಕಾರ್ಯಪಾಲನೆಯ ನಂತರ ಹುಣ್ಣಿಮೆ ಮಹೋತ್ಸವ ಆಚರಿಸುವ ಅರ್ಥಪೂರ್ಣ ನಿರ್ಧಾರ ಕೈಗೊಂಡು ಆ ನಿಟ್ಟಿನಲ್ಲಿ ಹೆಜ್ಜೆ ಹಾಕಿದರು.
ಪರಂಪರೆಯಂತೆ ಸಾಂಕೇತಿಕವಾಗಿ ಸರಳವಾಗಿ 2019ರ ಫೆಬ್ರುವರಿ 19ರಂದು ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಣೆಯ ಜೊತೆಗೆ ನಾಡಿನ ಗೋವುಗಳ ಪಾಲನೆಗೆ ಅಂದೇ ಗೋಶಾಲೆಯ ಉದ್ಘಾಟಿನೆಯ ಕೈಂಕರ್ಯಕ್ಕೆ ಶ್ರೀ ಜಗದ್ಗುವರ್ಯರು ಮನಸ್ಸು ಮಾಡಿರುವುದು ಅತ್ಯಂತ ಸಂದರ್ಭೋಚಿತವಾದುದಾಗಿದೆ.
ಸದಾ ಜನಮುಖಿ ಕಾರ್ಯಗಳಲ್ಲಿ ಸಂತೃಪ್ತಿ ಕಾಣುವ, ನಿತ್ಯವೂ ರೈತಬಂಧುಗಳ ಉನ್ನತಿಗೆ ಶ್ರಮಿಸುವ ಕನ್ನಡ ನಾಡಿನ ಅಪರೂಪದ ವಿದ್ವತ್ಪೂರ್ಣ, ಸಂತಶ್ರೇಷ್ಟರಾಗಿ ,ರೈತ ಮೆಚ್ಚಿದ ಮಹಾಗುರುವೆಂದೇ ಸುಪ್ರಸಿದ್ಧಿಯಾದ ಪರಮ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರ ನೂರಾರು ಸಮಾಜಮುಖಿ ಸಾಧನೆಗಳಿಗೆ ಮತ್ತೊಂದು ಸೇರ್ಪಡೆ ಎನ್ನುವಂತೆ ತರಳಬಾಳು ಶ್ರೀ ಮಠದ ಸಾವಿರಾರು ಎಕರೆ ಭೂಮಿಯಲ್ಲಿ ಸಕಲ ಸೌಲಭ್ಯಗಳಿಂದ ಕೂಡಿದ ಗೋಶಾಲೆಯ ನಿರ್ಮಾಣದ ತಯಾರಿ ಭರದಿಂದ ಸಾಗಿದೆ.
ಅಕ್ಷರ,ಅನ್ನ,ಆಸರೆ,ಶಿಕ್ಷಣ,
ಉದ್ಯೋಗ,ನ್ಯಾಯದಾನ, ಕನ್ನಡ ಜಾನಪದ ಕಲೆಗಳ ಪುನರುಜ್ಜೀವನ , ಸಾಮಾಜಿಕ ಕಾಳಜಿ,ಪರಿಸರ ರಕ್ಷಣೆ, ಶರಣ ಸಂಸ್ಕೃತಿಯನ್ನು ವಿಶ್ವಕ್ಕೆ ದರ್ಶಸಿದ ಗಣಕ ಋಷಿ ಎಂದೇ ನಾಮದೇಯರಾಗಿರುವ ಶ್ರೀ ಗುರುವರ್ಯರ ಸಾಧನೆಗಳ ಕುರಿತು ಬರೆಯುವುದೆಂದರೆ ಅದು ಸೂರ್ಯನನ್ನು ಕನ್ನಡಯಲ್ಲಿ ಹಿಡಿದಂತೆ..!
ಶ್ರೀಗಳ ದೂರದರ್ಶಿತ್ವ ಹೇಗಿದೆ ಎಂದರೆ. ಈ ವರ್ಷ ಬರದ ಮುನ್ಸೂಚನೆ ಅರಿತ ಶ್ರೀಗಳವರು ಪುಣ್ಯಕೋಟಿ ಉಳಿಸುವ ಅಭಿದಾನಕ್ಕೆ ಕೈ ಹಾಕಿ ಆರು ತಿಂಗಳಿಂದ ಕರ್ತವ್ಯ ಮಗ್ನರಾಗಿ ನೂರಾರು ಲೋಡ್ ಮೇವನ್ನು ಭಕ್ತರ ಮೂಲಕ ಸಂಗ್ರಹಿಸಿ ಕಾಮಧೇನುಗಳ ಸ್ವಾಗತಕ್ಕೆ ಕಾದು ಕುಳಿತಿದ್ದಾರೆ. ಸಿರಿಗೆರೆ ಸಮೀಪದ ಮೇಗಳಹಳ್ಳಿ ಬಳಿ ದೊಡ್ಡ ಕಾವಲೆಂದೇ ಕಲೆಯಲ್ಪಡುವ ಶ್ರೀ ಮಠದ ಒಡೆತನದ ಸಾವಿರಾರು ಎಕರೆ ಭೂ ಪ್ರದೇಶವನ್ನು ಶಿವಕುಮಾರ ವನವನ್ನಾಗಿಸಿ ಹತ್ತಾರು ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರುವ ಪ್ರದೇಶದಲ್ಲಿ ತರಳಬಾಳು ಗೋಶಾಲೆ ನಿರ್ಮಾಣವಾಗುತ್ತಿದೆ.
ಹೇಗಿರುತ್ತದೆ ಗೋಶಾಲೆ..?
ಕರ್ನಾಟಕದ ಅನೇಕ ಪ್ರದೇಶಗಳು ಪದೇ ಪದೇ ಬರಗಾಲಕ್ಕೆ ತುತ್ತಾಗುವ ಸ್ಥಿತಿ ಇದೆ. ಮನುಷ್ಯರು ಹೇಗಾದರೂ ಬದುಕಿಕೊಳ್ಳುತ್ತಾರೆ. ಆದರೆ ದನಕರುಗಳು ಮೇವು ನೀರಿಲ್ಲದೆ ಕಂಗಾಲಾಗುತ್ತವೆ.
ಚಾಮರಾಜ ನಗರದ ಬಳಿ ಮೇವು ನೀರಿಲ್ಲದೆ ಎಲ್ಲೆಂದರಲ್ಲಿ ದನಕರುಗಳು ಸತ್ತಿರುವ ವರದಿಗಳು ದುಃಖದಾಯಕ ವರದಿಗೆ ಮನನೊಂದ ಶ್ರೀಗಳು
ಸಿರಿಗೆರೆ ಸಮೀಪ ಇರುವ ಶಿವಕುಮಾರ ವನದ1000 ಎಕರೆ ಅರಣ್ಯ ಪ್ರದೇಶದಲ್ಲಿ ಬೃಹತ್ ಗೋಶಾಲೆಯನ್ನು ಆರಂಭಿಸುವ ಯೋಜನೆಯನ್ನು ಶ್ರೀ ತರಳಬಾಳು ಜಗದ್ಗುರು ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಸಂಕಲ್ಪಿಸಿದರು.
ಇದೊಂದು ಖಾಯಂ ವ್ಯವಸ್ಥೆಯಾಗಿದ್ದು, ಈ ಕಾರ್ಯಕ್ಕಾಗಿ 2 ಕೋಟಿ ರೂಗಳನ್ನು ಮೀಸಲಿರಿಸಲಾಗಿದೆ. ಈ ಕಾಡಿನಲ್ಲಿ ಹರಿಯುವ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ ಮಾಡಿ ಜಾನುವಾರುಗಳಿಗೆ ನೀರನ್ನು ಒದಗಿಸಲಾಗುವುದಲ್ಲದೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಮೇವನ್ನು ಬೆಳೆಸಲಾಗುವುದು. ನೀರನ್ನು ಪಂಪ್ ಮಾಡಲು ಸೋಲಾರ್ ವಿದ್ಯತ್ ಉತ್ಪಾದನೆಯ ಬಗ್ಗೆಯೂ ಚಿಂತಿಸಲಾಗುತ್ತಿದೆ. ಕಾಡಿನಲ್ಲಿರುವ ಮೃಗಗಳಿಂದ ಜಾನುವಾರುಗಳಿಗೆ ತೊಂದರೆ ಆಗದಂತೆ ಬೇಲಿಯನ್ನು ನಿರ್ಮಿಸಲಾಗುವುದು. ರಾಜ್ಯದ ಯಾವುದೇ ಭಾಗದ ರೈತರೂ ಇದರ ಪ್ರಯೋಜನ ಪಡೆಯಬಹುದು.
ರೈತರು ಬಯಸಿದರೆ ಜಾನುವಾರುಗಳನ್ನು ಗೋಶಾಲೆಗೆ ತರಲು ಮಠದಿಂದ ಲಾರಿಯನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಬರ ಪ್ರದೇಶದ ರೈತರು ಇಲ್ಲಿಗೆ ದನಕರುಗಳನ್ನು ತಂದು ಮಳೆಗಾಲ ಬರುವ ತನಕ ಮೇವು ಮತ್ತು ನೀರನ್ನು ಪಡೆದು ಸಾಕಬಹುದು.* *ರಾಸುಗಳೊಂದಿಗೆ ಬರುವ ರೈತರಿಗೂ ಮಠದಿಂದ ಆಹಾರ ಮತ್ತು ವಸತಿಯನ್ನು ನೀಡಲಾಗುವುದು.
ತಮ್ಮ ಭಾಗದಲ್ಲಿ ಮಳೆ ಆರಂಭವಾಗಿ ಮೇವು ನೀರು ದೊರೆಯುವವರೆಗೂ ರೈತರು ಶಿವಕುಮಾರ ವನದಲ್ಲಿ ತನ್ನ ರಾಸುಗಳನ್ನು ಸಾಕಿಕೊಂಡು ಹೋಗಲು ಅನುವು ಮಾಡಿಕೊಡುವುದಾಗಿ ಇಂದು ಗೋಶಾಲೆಯ ಕೆಲಸ ಕಾರ್ಯಗಳನ್ನು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಿದ ಶ್ರೀ ಜಗದ್ಗುರುವರ್ಯರು ತಿಳಿಸಿದರು.
ಬರಹ : ಬಸವರಾಜ ಸಿರಿಗೆರೆ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದಾವಣಗೆರೆ | ನಗರದಲ್ಲಿಂದು ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 220/66 ಕೆ.ವಿ. ಕೇಂದ್ರದಿಂದ ಎಸ್.ಆರ್.ಎಸ್.ನಿಂದ ಸರಬರಾಜಾಗುವ 66 ಕೆ.ವಿ. ದಾವಣಗೆರೆ ಹಾಗೂ ಯರಗುಂಟ ವಿತರಣಾ ಮಾರ್ಗದಲ್ಲಿ ತುರ್ತಾಗಿ ನಿರ್ವಾಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.09 ರಂದು ಬೆಳಿಗ್ಗೆ 9 ಗಂಟೆಯಿಂದ ಮದ್ಯಾಹ್ನ 4 ಗಂಟೆಯವರೆಗೆ 66/11 ಕೆ.ವಿ. ದಾವಣಗೆರೆ, 220/66 ಕೆ.ವಿ. ದಾವಣಗೆರೆ ಎಸ್.ಆರ್.ಎಸ್. ಮತ್ತು 66/11ಕೆ.ವಿ. ಯರಗುಂಟ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಇದನ್ನೂ ಓದಿ | ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ : ಯುವತಿ ಪತ್ತೆ..!?
ದಾವಣಗೆರೆ ತಾಲೂಕಿನ ದಾವಣಗೆರೆ ನಗರದ ಎಲ್ಲಾ ಪ್ರದೇಶಗಳಲ್ಲಿ ಹಾಗೂ ಬೆಳವನೂರು, ಶಿರಮಗೊಂಡನಹಳ್ಳಿ, ಶಾಮನೂರು, ಕುಂದವಾಡ, ಬಾತಿ ಅಮೃತನಗರ, ನೀಲನಹಳ್ಳಿ, ಬೂದಿಹಾಳ್, ಕಕ್ಕರಗೊಳ್ಳ ಹಾಗೂ ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಮಹಿಳೆಯರು ಸಂಕೋಲೆಗಳನ್ನು ಬದಿಗೊತ್ತಿ ಸಾಧನೆ ಕಡೆ ಗಮನ ಕೊಡಬೇಕು : ನ್ಯಾ.ಗೀತಾ.ಕೆ.ಬಿ

ಸುದ್ದಿದಿನ,ದಾವಣಗೆರೆ : ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ವಿಶೇಷವಾದ ಸ್ಥಾನಮಾನಗಳಿಗೆ ಪಾತ್ರರಾಗಿದ್ದರೂ ಒದಗಿ ಬರುವ ಸಂಕೋಲೆಗಳನ್ನು ಬದಿಗೊತ್ತಿ ಸಾಧನೆ ಮಾಡುವತ್ತ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಗೀತಾ.ಕೆ.ಬಿ ತಿಳಿಸಿದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ತಾಂತ್ರಿಕ ಮತ್ತು ಕಾಲೇಜು ಶಿಕ್ಷಣ ಇಲಾಖೆ, ಮಹಿಳಾ ದೌರ್ಜನ್ಯ ನಿವಾರಣೆ ಹಾಗು ಅಭಿವೃದ್ಧಿ ಕೋಶ ಮತ್ತು ಇತರೆ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ದಿನಾಚರಣೆಯನ್ನು ಕಳೆದ ಒಂದು ಶತಕದಿಂದಲೂ ಆಚರಿಸಲಾಗುತ್ತಿದ್ದು, 1911 ರಲ್ಲಿ ಡೆನ್ಮಾರ್ಕ್, ಆಸ್ಟ್ರಿಯ, ಜರ್ಮನ್, ಸ್ವಿಡ್ಜರ್ಲ್ಯಾಂಡ್ ದೇಶಗಳಲ್ಲಿ ದಶಲಕ್ಷಗಟ್ಟಲೇ ಜನರು ಒಂದೆಡೆ ಸೇರುವ ಮೂಲಕ ಮಹಿಳಾ ದಿನಾಚರಣೆಯನ್ನು ಆರಂಭಿಸಿದರು. ಅಂತರಾಷ್ಟ್ರೀಯ ಮಹಿಳೆಯರ ದಿನವನ್ನು ಮೊದಲ ಬಾರಿಗೆ ಕೂಲಿ ಚಳುವಳಿಯ ಮೂಲಕ ಉತ್ತರ ಅಮೆರಿಕ ಮತ್ತು ಯೂರೋಪ್ ದೇಶಗಳಲ್ಲಿ ಆಚರಿಸಲಾಯಿತು.
ಕೆಲವೇ ರಾಷ್ಟ್ರಗಳಿಗೆ ಸೀಮಿತವಾಗಿದ್ದ ಈ ದಿನಕ್ಕೆ ಸಂಯುಕ್ತ ರಾಷ್ಟ್ರಗಳು ಒಗ್ಗೂಡಿ 1977 ರಲ್ಲಿ ವಿಶ್ವಸಂಸ್ಥೆ ಮೂಲಕ ಅಧಿಕೃತ ಅನುಮೋದನೆ ನೀಡಿ ಮಾರ್ಚ್ 8 ಅನ್ನು ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸುವಂತೆ ಘೋಷಿಸಿತು.
ಇದನ್ನೂ ಓದಿ | ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ : ಯುವತಿ ಪತ್ತೆ..!?
ಅಂದಿನ ದಿನಗಳಲ್ಲಿ ಮಹಿಳೆಯರಿಂದ ಪುರುಷರಿಗಿಂತ ಹೆಚ್ಚಾಗಿ ದುಡಿಸಿಕೊಂಡು ಕಡಿಮೆ ವೇತನ ನೀಡಿ, ಕೀಳಾಗಿ ಕಾಣಲಾಗುತ್ತಿತ್ತು. ಶೋಷಣೆ ಮಾಡುತ್ತಿದ್ದರು. ಇದರಿಂದ ಬೇಸತ್ತ ಮಹಿಳೆಯರು ಪ್ರಪಂಚದಲ್ಲಿ ಮಹಿಳೆಯರ ಅಸ್ತಿತ್ವ ಉಳಿಯಬೇಕಾದರೆ ಸಂಘಟಿತರಾಗಬೇಕು. ಸ್ತ್ರೀ ಅಬಲೆ ಅಲ್ಲ ಸಬಲೆ. ಹೆಣ್ಣಿನ ಅಸ್ತಿತ್ವವನ್ನು ಮಹಿಳೆಯರೇ ಉಳಿಸಬೇಕು ಎಂದು ಮಹಿಳೆಯರ ಮತದಾನಕ್ಕೆ, ಸಮಾನ ಕೆಲಸಕ್ಕೆ, ಸಮಾನ ವೇತನಕ್ಕಾಗಿ ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಸಿದರು.
ವೇದ ಕಾಲದಲ್ಲಿರದ ಲಿಂಗ ತಾರತಮ್ಯವು ನಂತರದ ಪುರುಷ ಪ್ರಧಾನ ಸಮಾಜದಲ್ಲಿ ತನ್ನ ಅಸ್ತಿತ್ವ ಪಡೆದು ಮಹಿಳೆಯರನ್ನು ಹತ್ತಿಕ್ಕಲು ಆರಂಭಿಸಿತು. ಪುರುಷ ಪ್ರಧಾನ ಸಮಾಜವು ಸ್ತ್ರೀ ಸಮಾನತೆಯನ್ನು ಕಸಿದುಕೊಂಡು ಅತೀ ಹೆಚ್ಚು ಶೋಷಣೆಗೆ ಒಳಪಡಿಸಿ, ದೌರ್ಜನ್ಯವೆಸಗಿತು. ಇಂತಹ ಧಾರುಣ ಸ್ಥಿತಿಯಲ್ಲಿ ಅಕ್ಕಮಹಾದೇವಿ ಸೇರಿದಂತೆ ಎಲ್ಲಾ ಶಿವಶರಣೆಯರು ಕ್ರಾಂತಿಕಾರಿ ಕಹಳೆಯನ್ನು ಊದಿ, ಆಧ್ಯಾತ್ಮದತ್ತ ಹೆಜ್ಜೆ ಹಾಕಿದರು.
ಕಳೆದ 20 ವರ್ಷಗಳಲ್ಲಿ ಅನೇಕ ಬದಲಾವಣೆಗಳು ಕಂಡುಬಂದಿದೆ. ಕಾನೂನುಗಳು ಸೇರಿದಂತೆ ಸರ್ಕಾರವು ಮಹಿಳೆಯರಿಗಾಗಿ ಎಲ್ಲಾ ಸ್ತರಗಳಲ್ಲೂ ಶೇ.33 ರಷ್ಟು ಮೀಸಲಾತಿ ಒದಗಿಸಿದ್ದು, ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ ಎಂದು ಸಾಬೀತುಪಡಿಸುತ್ತಿದ್ದಾಳೆ.
ಮಾನಸಿಕವಾಗಿ ಹಾಗೂ ದೈಹಿಕವಾಗಿ ಪುರುಷನೊಂದಿಗೆ ಪೈಪೋಟಿ ನಡೆಸುತ್ತಿದ್ದಾಳೆ. ಇಡೀ ಕುಟುಂಬದ ಜವಾಬ್ಧಾರಿಯನ್ನು ವಹಿಸಿಕೊಳ್ಳುತ್ತಿದ್ದಾಳೆ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ತೂ.ಕ.ಶಂಕರಯ್ಯ ಮಾತನಾಡಿ, ಸ್ವಾತಂತ್ರ್ಯೋತ್ತರ ಭಾರತದಲ್ಲಿ ಮಹಿಳೆಯರನ್ನು ಕುರಿತು ಸ್ತ್ರೀ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುಸ್ಮøತಿಯು ವಿಧಿಸಿದ ಕಟ್ಟುಪಾಡು ವೈಜ್ಞಾನಿಕ ಯುಗದಲ್ಲೂ ಮುಂದುವರೆಯುತ್ತಿರುವುದು ದುರಂತ. ಆದರೆ ಈಗ ಕಾಲ ಬದಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತೀಯ ನಾರಿ ಈಗ ಪುರುಷನಿಗೆ ಸಮಾನಳು. ಹೆಣ್ಣು-ಗಂಡು ಸರಿಸಮಾನರೆಂದು ತಾತ್ವಿಕವಾಗಿ ಒಪ್ಪಿಕೊಂಡಿರುವ ಅಂಶವಾಗಿದೆ ಎಂದರು.
ಪುರುಷನ ಪ್ರತೀ ಸಾಧನೆಯ ಹಿಂದೆ ಹೆಣ್ಣಿರುತ್ತಾಳೆ. ಮಹಿಳೆಯಿಲ್ಲದೇ ಗಂಡು ಪರಿಪೂರ್ಣನಾಗಲಾರ. 12ನೇ ಶತಮಾನದಲ್ಲಿ ಆಯ್ದಕ್ಕಿ ಲಕ್ಕಮ್ಮ ತನ್ನೆಲ್ಲಾ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ ತನ್ನ ಗಂಡನನ್ನು ತಿದ್ದುವ ಮೂಲಕ ಕಾಯಕ ನಿಷ್ಠೆಯನ್ನು ಬೆಳೆಸುತ್ತಾಳೆ. ಇಂದಿನ ಭ್ರಷ್ಟಾಚಾರ ಯುಗದಲ್ಲಿ ಆಯ್ದಕ್ಕಿ ಲಕ್ಕಮ್ಮ ಸಮಾಜಕ್ಕೆ ಮಾದರಿಯಾಗುತ್ತಾಳೆ. ತನ್ನ ಮನೆಯವರನ್ನು ತಿದ್ದುವ ಮೂಲಕ ಸಂಸಾರದ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತಿದ್ದಾಳೆ.
ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನುಗ್ಗುತ್ತಿದ್ದು, ಆಕೆಯನ್ನು ಕೇವಲ ಗೌರವಿಸುವುದಲ್ಲದೇ ಸರಿಸಮಾನವಾಗಿ ಕಾಣುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಮುಖ್ಯನ್ಯಾಯಿಕ ದಂಡಾಧಿಕಾರಿಗಳಾದ ಪ್ರೀತಿ ಎಸ್. ಜೋಶಿ ಮಾತನಾಡಿ, ಮಹಿಳೆಯರು ಕಾನೂನುಗಳನ್ನು ಅರ್ಥಮಾಡಿಕೊಳ್ಳುವ ಮೂಲಕ ಅವುಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು.
ಉದ್ಯೋಗಸ್ಥ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಅನೇಕ ಕಾಯ್ದೆ ಕಾನೂನುಗಳು ಜಾರಿಯಾಗಿದ್ದು ಮಹಿಳೆಯರು ಅದನ್ನು ದುರುಪಯೋಗ ಪಡಿಸಿಕೊಳ್ಳಬಾರದು. ನಾವು ಅನಪೇಕ್ಷಿತ ವ್ಯಕ್ತಿಗಳಿಂದ ತೊಂದರೆಯುಂಟಾದಾಗ ಮಾತ್ರ ಬಳಸಿಕೊಳ್ಳಬೇಕು. ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಬಾಲ್ಯವಿವಾಹ, ಮಹಿಳೆಯರ ಮೇಲೆ ಆಗುವ ದೌರ್ಜನ್ಯ, ಶೋಷಣೆಗಳಂತಹ ಸಂದರ್ಭದಲ್ಲಿ ಕಾನೂನಿನ ಸಹಾಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ಎಲ್.ಹೆಚ್. ಅರುಣ್ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರವೀಣ್ ನಾಯಕ್, ನ್ಯಾಯಾಧೀಶರಾದ ರಶ್ಮೀ ಎಂ.ಮರಡಿ, ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ನಂದಿನಿ.ಎಂ.ಎನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎಸ್.ಸಿ. ಸಂಚಾಲಕ ಪ್ರೊ.ಟಿ.ವೀರೇಶ್, ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಎಂ.ಎಲ್.ತ್ರೀವೇಣಿ, ಪ್ರೋ.ಭೀಮಣ್ಣ ಸುಣಗಾರ್, ಡಾ.ಮಹೇಶ್.ಎನ್.ಪಾಟೀಲ್, ಡಾ.ದಾದಾಪೀರ್ ನವಿಲೇಹಾಳ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ : ಯುವತಿ ಪತ್ತೆ..!?

ಸುದ್ದಿದಿನ, ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆ ಅಶ್ಲೀಲ ವಿಡಿಯೋ ಚಾಟ್ ನಡೆಸಿದ್ದ ಯುವತಿ ದುಬೈಗೆ ಹಾರಿದ್ದಾಳೆ ಎನ್ನಲಾಗುತ್ತಿತ್ತು. ಆದರೆ ಬೆಂಗಳೂರಿನ ಆರ್.ಟಿ.ನಗರದಲ್ಲೇ ಆಕೆ ಇದ್ದಾಳೆ ಎಂದು ಹೇಳಲಾಗುತ್ತಿದೆ.
ರಾಸಲೀಲೆಯ ವಿಡಿಯೋದಲ್ಲಿರುವ ಯುವತಿಯ ಮುಖ ಚಹರೆಯನ್ನೇ ಹೋಲುವ ಯುವತಿಯೊಬ್ಬಳು ಆರ್.ಟಿ.ನಗರದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ತನ್ನ ಸ್ನೇಹಿತನೊಬ್ಬನೊಂದಿಗೆ ಓಡಾಡಿಕೊಂಡಿದ್ದಾಳೆ. ಈ ಸಂಬಂಧಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಖಚಿತವಾಗಿ ಆಕೆಯೇ ವಿಡಿಯೋ ಸಂಭಾಷಣೆ ನಡೆಸಿದಾಕೆನಾ ಎಂಬ ಬಗ್ಗೆ ಪೊಲೀಸರಿಗೂ ಅನುಮಾನವಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಬಹಿರಂಗ5 days ago
ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!
-
ದಿನದ ಸುದ್ದಿ6 days ago
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ
-
ಕ್ರೀಡೆ7 days ago
ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್ ಮರಳಿ ತಂಡಕ್ಕೆ..!
-
ದಿನದ ಸುದ್ದಿ5 days ago
24 ಕೆರೆ ತುಂಬಿಸುವ ಯೋಜನೆಗೆ ರೂ.48 ಕೋಟಿಗಳ ಅನುದಾನ ಮಂಜೂರು : ಎಂ.ಪಿ ರೇಣುಕಾಚಾರ್ಯ
-
ದಿನದ ಸುದ್ದಿ5 days ago
ಮಾಧ್ಯಮ ಉದ್ಯಮವಾಗಿರುವ ಈ ಕಾಲಘಟ್ಟದಲ್ಲಿ ಜನರೇ ಜನಾಭಿಪ್ರಾಯ ರೂಪಿಸುವ ಹೊಣೆ ಹೊರಬೇಕು : ಹಿರಿಯ ಪತ್ರಕರ್ತ ಬಸವರಾಜ್ ದೊಡ್ಮನಿ
-
ನಿತ್ಯ ಭವಿಷ್ಯ6 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ದಿನದ ಸುದ್ದಿ5 days ago
ಅಡಿಕೆಯಲ್ಲಿ ಅರಳು ಉದುರುವ, ಹಿಂಗಾರು ಒಣಗುವ ಮತ್ತು ಹಿಂಗಾರ ತಿನ್ನುವ ಸಮಸ್ಯೆ : ರೈತರು ತೆಗೆದುಕೊಳ್ಳಬೇಕಾದ ಕ್ರಮಗಳು
-
ಬಹಿರಂಗ4 days ago
ಸುಳ್ಳಿನ ಸುಳಿಯಲ್ಲಿ ಸುಲ್ತಾನ