Connect with us

ದಿನದ ಸುದ್ದಿ

ಶಿಕ್ಷಕರ ದಿನಾಚರಣೆ

Published

on

 

  • ದಿವ್ಯಶ್ರೀ.ವಿ
    ಬೆಂಗಳೂರು

ಗುರು ಬ್ರಹ್ಮ
ಗುರು ವಿಷ್ಣು
ಗುರು ದೇವೋ ಮಹೇಶ್ವರ
ಗುರು ಸಾಕ್ಷಾತ್ ಪರ ಭ್ರಹ್ಮ
ತಸ್ಮೈಶ್ರೀ ಗುರುವೇ ನಮಹ…

ಭಾರತದಲ್ಲಿ ನಾವು ದೇವರು,ತಂದೆ ತಾಯಿಗೆ ಹೇಗೆ ಗೌರವ ಪ್ರೀತಿ ಕೊಡುತ್ತೀವೋ ಅದೇ ರೀತಿ ವಿದ್ಯೆ ಕಲಿಸುವ ಗುರುವಿಗೂ ಅಷ್ಟೇ ಪ್ರೀತಿ ಗೌರವವನ್ನು ಕೊಡುತ್ತೇವೆ.

ನಮ್ಮ ಜೀವನದಲ್ಲಿ ಬದುಕು ರೂಪಿಸಿಕೊಳ್ಳಲು ಪಾಠ ಹೇಳಿ ಕೊಡುವ ಗುರುಗಳನ್ನು ನಾವು ಪೂಜಿಸಿ ಆರಾಧಿಸುತ್ತೇವೆ. ನಮ್ಮ ಭಾರತದಲ್ಲಿ ಶಿಕ್ಷಕರ ದಿನಾಚರಣೆಯನ್ನು ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರ ಜನ್ಮದಿನದ ಸ್ಮರಣೆಗಾಗಿ ಆಚರಿಸುತ್ತೇವೆ.

ಈ ದಿನ ಅವರ ಸವಿ ನೆನಪಿಗಾಗಿ ಎಲ್ಲಾ ಗುರುಗಳಿಗೂ ಸನ್ಮಾನ, ಗುರುವಂದನಾ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ.
ಶಿಕ್ಷಕರ ಪಾತ್ರವು ವಿದ್ಯಾರ್ಥಿಗಳ ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ನಮ್ಮ ಸರ್ವಪಳ್ಳಿ ರಾಧಾಕೃಷ್ಣ ಅವರು ಜನಿಸಿದ್ದು ಸೆಪ್ಟೆಂಬರ್- 5, 1888 ರಲ್ಲಿ ತಮಿಳುನಾಡಿನ ತಿರುತ್ತಣಿ ಎಂಬ ಊರಲ್ಲಿ ಸರ್ವಪಲ್ಲಿ ವೀರಸ್ವಾಮಿ ಮತ್ತು ಸೀತಮ್ಮ ದಂಪತಿಗಳಿಗೆ ಮಗನಾಗಿ ಜನಿಸಿದರು.

ಚಿಕ್ಕ ವಯಸ್ಸಿನಿಂದ ಓದುವ ಹವ್ಯಾಸ ಬೆಳೆಸಿಕೊಂಡಿದ್ದ
ರಾಧಾಕೃಷ್ಣ ಅವರು ಭಾರತದ ಹಿಂದೂ ಧರ್ಮದ ವೇದ ಉಪನಿಷತ್ಗಳನ್ನು, ತತ್ವಜ್ಞಾನಿಗಳ ಪುರಾಣಗಳನ್ನು, ಮುಂತಾದ ಸನಾತನ ಧರ್ಮದ ಸಾರ ವನ್ನು ಪಠಿಸಿ ತತ್ವಜ್ಞಾನ ವಿಭಾಗದ ಅಧ್ಯಾಪಕರಾಗಿ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು.

ಸ್ವತಃ ಶಿಕ್ಷಕನಾಗಿ ಮಕ್ಕಳಿಗೆ ಪಾಠ ಹೇಳುತ್ತಿದ್ದ ರಾಧಾಕೃಷ್ಣ ಅವರಿಗೆ ಭಾರತದ ಮೊಟ್ಟ ಮೊದಲ ಉಪರಾಷ್ಟ್ರಪತಿ ಸ್ಥಾನ ಕೂಡ ಪಡೆದುಕೊಂಡು ಶೈಕ್ಷಣಿಕ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದರು.ಅದಕ್ಕಾಗಿಯೇ ಅವರ ವಿದ್ಯಾರ್ಥಿಗಳು ಅವರ ಜನ್ಮದಿನವನ್ನು ವಿಭೃಂಜಣೆಯಿಂದ ಆಚರಿಸುತ್ತಿದ್ದರು.

ಅದನ್ನು ಬೇಡವೆಂದು ರಾಧಾಕೃಷ್ಣ ಅವರು ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಿದರೆ ನನಗೆ ಹೆಚ್ಚು ಖುಷಿಯಾಗುವುದು ಎಂದು ಹೇಳುತ್ತಾರೆ. 1962 ರಿಂದ ಅವರ ವಿದ್ಯಾರ್ಥಿಗಳು ಈ ಶಿಕ್ಷಕರ ದಿನಾಚರಣೆಯನ್ನು ಪ್ರಾರಂಭಿಸಿದರು. ದೇಶದ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಿಕೊಂಡು ಬಂದಿದ್ದಾರೆ.

ಆ ದಿನದಂದು ಶಿಕ್ಷಕರು ಮಕ್ಕಳಾಗಿ, ಮಕ್ಕಳು ಶಿಕ್ಷಕರಾಗಿ ತಮ್ಮ ಶಿಕ್ಷಕರಿಗಾಗಿ ಸ್ಪರ್ಧೆಗಳನ್ನು ಏರ್ಪಡಿಸುತ್ತಾರೆ. ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಾರೆ.ಕಳೆದ ವರ್ಷದಿಂದ ಕೊರೋನಾ ಹಾವಳಿಯಿಂದ ಶಾಲೆಗಳ ಬಾಗಿಲಿಗೆ ಬೀಗ ಹಾಕಿರುವುದರಿಂದ ಶಿಕ್ಷಕರ ದಿನಾಚರಣೆ ಸ್ಥಗಿತವಾಗಿದೆ. ಈ ವರ್ಷವೂ ಮಕ್ಕಳೆಲ್ಲರು ಆನ್ಲೈನ್ ಕ್ಲಾಸ್ಗಳ ಮುಕಾಂತರ ತಮ್ಮಶಿಕ್ಷಕರಿಗೆ ಶುಭ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending