ದಿನದ ಸುದ್ದಿ

ಹೆಚ್ವುವರಿ ಶಿಕ್ಷಕರ ವರ್ಗಾವಣೆ ಇಲ್ಲ : ಸಚಿವ ಸುರೇಶ್ ಕುಮಾರ್

Published

on

ಸುದ್ದಿದಿನ,ಉಡುಪಿ: ರಾಜ್ಯದಲ್ಲಿ ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರುವ ಕಾರ್ಯಕ್ರಮವನ್ನು ಅಭಿಯಾನದ ರೀತಿಯಲ್ಲಿ ನಡೆಸಲಾಗುವುದು, ಪ್ರಸಕ್ತ ವರ್ಷದಲ್ಲಿ ಶಾಲಾ ಮಕ್ಕಳ ಹಾಜರಾತಿ ಗಣನೆಗೆ ತೆಗೆದುಕೊಂಡು ಶಾಲೆಗಳಲ್ಲಿನ ಹೆಚ್ವುವರಿ ಶಿಕ್ಷಕರ ವರ್ಗಾವಣೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಮಂಗಳವಾರ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಉಡುಪಿ, ಉತ್ತರ ಕನ್ನಡ ಮತ್ತು ದ.ಕನ್ನಡ ಜಿಲ್ಲೆಗಳ , ಜಿಲ್ಲಾ ಪಂಚಾಯತ್ ಸಿಇಓ ಗಳು, ಡಿಡಿಪಿಐ ಗಳು ಮತ್ತು ಬಿಇಓ ಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಪೂರ್ವ ಸಿದ್ದತೆ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಶಾಸಕರಾದ ರಘುಪತಿಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುಕುಮಾರ ಶೆಟ್ಟಿ, ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ,ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ದ.ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಸೆಲ್ವಮಣಿ, ಉ.ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ರೋಶನ್ ಉಡುಪಿ ಎಸ್‌ಪಿ ವಿಷ್ಣುವರ್ಧನ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version