ದಿನದ ಸುದ್ದಿ

ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ, ಬಿಸಿಗಾಳಿ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ

Published

on

ಸುದ್ದಿದಿನ ಡೆಸ್ಕ್ : ಭಾರತೀಯ ಹವಾಮಾನ ಇಲಾಖೆ, ರಾಜ್ಯದಲ್ಲಿ ಬಿಸಿಗಾಳಿಯ ಮುನ್ನೆಚ್ಚರಿಕೆ ನೀಡಿದೆ.

ನಾಡಿದ್ದು, ಏಪ್ರಿಲ್ 6ರ ವರೆಗೆ ಕಲ್ಯಾಣ ಕರ್ನಾಟಕದ ರಾಜ್ಯದ ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಉಷ್ಣತೆ ಏರಿಕೆಯಾಗಲಿದೆ.

ಕಿತ್ತೂರು ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ್ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಉಷ್ಣಾಂಶವು ವಾಡಿಕೆಗಿಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಂಭವವಿದೆ.

ಕಲಬುರಗಿಯಲ್ಲಿ ನಿನ್ನೆ ಗರಿಷ್ಠ ತಾಪಮಾನ 42.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉಷ್ಣಾಘಾತದ ಸಂದರ್ಭದಲ್ಲಿ ಸಾರ್ವಜನಿಕರು ವಹಿಸಬೇಕಿರುವ ಮುನ್ನೆಚ್ಚರಿಕೆ ಬಗ್ಗೆ, ಧಾರವಾಡ ತಾಲೂಕು, ಹೆಬ್ಬಳ್ಳಿ ಗ್ರಾಮದ ಡಾಕ್ಟರ್ ಗುರುಪ್ರಸಾದ ದೇಶಪಾಂಡೆ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version