ದಿನದ ಸುದ್ದಿ

ಸಂಚಾರಿ ದಂಡದಲ್ಲಿ ಶೇ 50 ರಷ್ಟು ರಿಯಾಯಿತಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಸರ್ಕಾರದ ಆದೇಶದನ್ವಯ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಲಾಗುತ್ತದೆ.

ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ 2023 ರ ಫೆಬ್ರವರಿ 11 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ರಿಯಾಯಿತಿ ನೀಡಲಾಗುತ್ತಿದ್ದು, ಸೆಪ್ಟೆಂಬರ್ 9 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಇದು ಅನ್ವಯಿಸುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version