ದಿನದ ಸುದ್ದಿ

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಅವಧಿಯನ್ನು ಇದೇ 30ರ ವರೆಗೆ ವಿಸ್ತರಿಸಲಾಗಿದೆ.

ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಸರ್ಕಾರಿ ನೌಕರರ ವರ್ಗಾವಣೆಗೆ ಮೇ 30ರಂದು ಆದೇಶ ಹೊರಡಿಸಿ, ಇದೇ 15ರ ವರೆಗೂ ಗಡುವು ನೀಡಲಾಗಿತ್ತು. ಆದರೆ ಹಲವು ನೌಕರರ ಸಂಘಟನೆಗಳ ಮನವಿ ಮೇರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version