ದಿನದ ಸುದ್ದಿ
ಪ್ರವಾಸಿಗರಿಗೊಂದು ಸಿಹಿ ಸುದ್ದಿ..!
ಸುದ್ದಿದಿನ,ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಸೆ.7ರಿಂದ ಬೆಳಿಗ್ಗೆ 8ರಿಂದ ಸಂಜೆ 5ರ ವರೆಗೆ ಪ್ರವೇಶ ಕಲ್ಪಿಸಲಾಗಿದೆ.ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಆರ್.ಲತಾ, ಗಿರಿಧಾಮಕ್ಕೆ ಪ್ರವೇಶಿಸುವ ಸಾರ್ವಜನಿಕರು ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸಲಾಗುತ್ತದೆ. ಕುಡಿಯುವ ನೀರು,ತಿಂಡಿ ತಿನಿಸು,ಪ್ಲಾಸ್ಟಿಕ್ ಪೊಟ್ಟಣಗಳನ್ನು ಹೊರಗಡೆ ತರುವುದನ್ನು ನಿಷೇಧಿಸಲಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243